ವಂಶೋದಯ v/s ಅಂತ್ಯೋದಯ

ಕೆಲವರಿಗೆ ಕುಟುಂಬವೇ ಮುಖ್ಯ; ಬಿಜೆಪಿಗೆ ದೇಶವೇ ಮುಖ್ಯ

Team Udayavani, Apr 14, 2019, 6:30 AM IST

vamshodaya

ಮಂಗಳೂರು: ಈ ಚುನಾವಣೆ ವಂಶೋದಯ ಮತ್ತು ಅಂತ್ಯೋದಯ ನಡುವೆ ನಡೆಯುತ್ತಿದೆ. ಕೆಲವರಿಗೆ ವಂಶದ ಅಭಿವೃದ್ಧಿಯೇ ಮುಖ್ಯವಾಗಿದ್ದರೆ ಬಿಜೆಪಿಗೆ ಅಭ್ಯುದಯವೇ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು.

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು. ಸ್ವತಂತ್ರ ಭಾರತದ ಆರಂಭಿಕ ವರ್ಷಗಳಿಂದಲೇ ಇವರು ದೇಶದಲ್ಲಿ ಅರಾಜಕತೆ ಅಥವಾ ಆರ್ಥಿಕ ಸಂಕಷ್ಟ ಉಂಟು ಮಾಡುವ ಪ್ರಯತ್ನದಲ್ಲಿ ನಿರತರಾದರು ಎಂದು ಟೀಕಿಸಿದರು.

ಆದರೆ ಬಿಜೆಪಿಯ ಅಂತ್ಯೋದಯ ಭ್ರಷ್ಟಾಚಾರ ಮುಕ್ತ, ಸರ್ವರಿಗೂ ಸಮಪಾಲು- ಸಮಬಾಳು ಎಂಬ ಧ್ಯೇಯಕ್ಕೆ ಬದ್ಧವಾಗಿದೆ. ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳನ್ನು ಮರೆತರೆ ಆ ದೇಶ ಸಾಂಸ್ಕೃತಿಕವಾಗಿ ಮುನ್ನಡೆ ಯಲು ಸಾಧ್ಯವಿಲ್ಲ. ದೇಶದ ಪರಂಪರೆಗೆ ಆದ್ಯತೆಯ ಬದ್ಧತೆಯನ್ನು ಬಿಜೆಪಿ ಹೊಂದಿದೆ ಎಂದು ಹೇಳಿದರು.

ಬಲಿಷ್ಠ ಮತ್ತು ಭ್ರಷ್ಟಾಚಾರ ಮುಕ್ತ ಹೊಸ ಭಾರತದ ನಿರ್ಮಾಣಕ್ಕಾಗಿ ರಾಷ್ಟ್ರೀಯ ಚಿಂತನೆಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಯ್ಕೆ ಮಾಡಿ ಎಂದರು.

ವಿಕೃತ ವಿಪಕ್ಷೀಯರು
ದೇಶ ರಕ್ಷಣೆಗೆ ಸೈನಿಕರು ಮಾಡುತ್ತಿರುವ ಸೇವೆಗೆ ವಿಪಕ್ಷೀಯರು ಸಾಕ್ಷ é ಕೇಳುತ್ತಿದ್ದಾರೆ. ಸೇನಾ ಮುಖ್ಯಸ್ಥರನ್ನೇ ನಿಂದಿಸುತ್ತಿದ್ದಾರೆ. ಇಂತಹ ವಿಕೃತ ಮನೋಭಾವದಿಂದ ಅವರು ದೇಶವನ್ನು ಸಂಕಷ್ಟಕ್ಕೆ ದೂಡಲು ಪ್ರಯತ್ನಿಸುತ್ತಿದ್ದಾರೆ. ಇವರಿಗೆ ನಾಚಿಕೆ ಯಾಗಬೇಕಲ್ಲವೇ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

ಅಬ್ದುಲ್‌ ಕಲಾಂ, ಡಾ| ರಾಧಾಕೃಷ್ಣನ್‌ರಂತಹ ಅಪ್ರತಿಮ ಸಾಧಕರಿಗೆ ನಮ್ಮಲ್ಲಿ ಯಾವುದೇ ಸ್ಮಾರಕಗಳಿಲ್ಲ. ಈ ಎಲ್ಲ ವಿಚಾರಗಳನ್ನು ನಾವು ಗಮನಿಸಿದ್ದೇವೆ.

ಜಲಿಯನ್‌ವಾಲಾಬಾಗ್‌ ದುರಂತಕ್ಕೆ ಈಗ 100 ವರ್ಷ. ಅಂದು ಹುತಾತ್ಮರಾದವರಿಗೆಲ್ಲ ನಾನು ಶ್ರದ್ಧಾಂಜಲಿ ಸಮರ್ಪಿಸುತ್ತಿದ್ದೇನೆ ಎಂದರು.
ಮೀನುಗಾರರ ಹಿತರಕ್ಷಣೆಗೆ ಪ್ರತ್ಯೇಕ ಸಚಿವಾಲಯವನ್ನೇ ರಚಿಸಿದ್ದೇವೆ. ಆಳ ಸಮುದ್ರ ಮೀನುಗಾರಿಕೆಗೆ ಆಧುನಿಕ ತಂತ್ರಜ್ಞಾನ ಸಹಿತ ಹಲವು ನೆರವು ಕೊಡುತ್ತಿದ್ದೇವೆ. ಅಂತ್ಯೋದಯ, ಆಧಾರ್‌, ಜನಧನ, ಡಿಜಿಟಲ್‌ ಇತ್ಯಾದಿ ಸೇವೆಗಳು ಕ್ರಾಂತಿಕಾರಕ ಎಂದು ಜಗತ್ತೇ ಕೊಂಡಾಡುತ್ತಿದೆ ಎಂದರು.

ರಾಜಕೀಯ, ಚುನಾವಣೆ, ಅಧಿಕಾರ, ಸರಕಾರ ಇತ್ಯಾದಿಗಳ ಸಹಿತ ಪ್ರಬಲ ಮತ್ತು ಸಾಂಸ್ಕೃತಿಕ ವೈಭವದ ದೇಶ ಪ್ರಸ್ತುತವಾಗುತ್ತದೆ. ಕಳೆದ 5 ವರ್ಷಗಳಲ್ಲಿ ಇಂತಹ ನಿರ್ಣಾಯಕ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿಸಿದ ಕರ್ನಾಟಕ ಸಹಿತ ದೇಶದ ಜನತೆಗೆ ಮಂಗಳೂರಿನ ಈ ನೆಲದಿಂದ ತಾನು ಕೃತಜ್ಞತೆ ಅರ್ಪಿಸುವುದಾಗಿ ಮೋದಿ ವಿವರಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಅಪೂರ್ವ ಪರಂಪರೆಯಿದೆ. ಇದು ಬ್ಯಾಂಕಿಂಗ್‌ ಕ್ಷೇತ್ರದ ತವರೂರು. ಆದರೆ ಕಾಂಗ್ರೆಸ್‌ ಸಹಿತ ವಿಪಕ್ಷೀಯರು ಕಮಿಷನ್‌ ಆಧಾರಿತ ಭ್ರಷ್ಟಾಚಾರದ ಮೂಲಕ ಹಾಳುಗೆಡಹಿದರು. ಅದನ್ನೀಗ ನಮ್ಮ ಸರಕಾರ ಸರಿಪಡಿಸುತ್ತಿದೆ. ಕೇರಳದಲ್ಲಿ ಅಲ್ಲಿನ ಕಮ್ಯುನಿಸ್ಟ್‌ ಸರಕಾರ ಯಾರಾದರೂ ಶಬರಿಮಲೆ ಸ್ವಾಮಿ ಅಯ್ಯಪ್ಪ ಎಂದರೆ ಕೇಸು ಜಡಿಯುತ್ತದೆ. ಬಿಜೆಪಿ ಅಭ್ಯರ್ಥಿಗಳ ಮೇಲೂ ಕೇಸು ಜಡಿದು ಜೈಲಿಗೆ ಹಾಕಲಾಯಿತು. ಇದು ಪ್ರಜಾತಂತ್ರವೇ ? ಎಂದು ಪ್ರಶ್ನಿಸಿದರು. ಮೋದಿಯವರು ಟೆಲಿಪ್ರಾಂಪ್ಟರ್‌ ಬಳಸಿ ಭಾಷಣ ಮಾಡಿದರು.
ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಸ್ವಾಗತಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್‌ ಎಂ. ನಿರೂಪಿಸಿದರು. ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಸಹಪ್ರಭಾರಿ ಪ್ರತಾಪಸಿಂಹ ನಾಯಕ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಅಂಗಾರ, ರಾಜೇಶ್‌ ನಾೖಕ್‌ ಉಳಿಪಾಡಿ, ರಘಪತಿ ಭಟ್‌, ಲಾಲಾಜಿ ಮೆಂಡನ್‌, ಸುಕುಮಾರ್‌ ಶೆಟ್ಟಿ , ಕ್ಯಾ| ಗಣೇಶ್‌ ಕಾರ್ಣಿಕ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.