ಶಿಬಾಜೆ: ಪೆರ್ಲ ಸರಕಾರಿ ಶಾಲೆಗೆ ಬಾರದ ವಿದ್ಯಾರ್ಥಿಗಳು

ಬಾವಿಗೆ ವಿಷವಿಕ್ಕಿದ ಪ್ರಕರಣ: ಆರೋಪಿ ಪತ್ತೆಗೆ ಆಗ್ರಹಿಸಿ ಮಕ್ಕಳನ್ನು ಶಾಲೆಗೆ ಕಳುಹಿಸದ ಹೆತ್ತವರು

Team Udayavani, Dec 11, 2019, 7:26 PM IST

sx-4

ಉಪ್ಪಿನಂಗಡಿ: ಶಿಬಾಜೆ ಗ್ರಾಮದ ಪೆರ್ಲ ಸರಕಾರಿ ಶಾಲೆಯ ಬಾವಿಗೆ ಡಿ. 2ರಂದು ವಿಷ ಹಾಕಿದ ಪ್ರಕರಣ ನಡೆದು 10 ದಿನಗಳಾದರೂ ಆರೋಪಿಗಳ ಪತ್ತೆಯ ಕಾರ್ಯ ನಡೆಯದೇ ಇರುವ ಕಾರಣ ಬುಧವಾರ ಪೆರ್ಲ ಶಾಲೆಗೆ ಮತ್ತು ಅಂಗನವಾಡಿಗೆ ಹೆತ್ತವರು ತಮ್ಮ ಮಕ್ಕಳನ್ನು ಕಳುಹಿಸದೇ ಪ್ರತಿಭಟಿಸಿದ್ದಾರೆ.

ಪ್ರತಿಭಟನೆಯ ವಿಷಯ ತಿಳಿದ ಮಾಧ್ಯಮದವರು ಮಧ್ಯಾಹ್ನದ ವೇಳೆ ಶಾಲೆಗೆ ಭೇಟಿ ನೀಡುವ ವರೆಗೂ ಶಿಕ್ಷಣ ಇಲಾಖೆಯ ಯಾವೊಬ್ಬ ಅಧಿಕಾರಿಯೂ ಭೇಟಿ ನೀಡಿರಲಿಲ್ಲ. ಇಲಾಖೆ ಪ್ರಕರಣವನ್ನು ಲಘುವಾಗಿ ಪರಿಗಣಿಸಿದಂತೆ ಕಾಣಿಸುತ್ತಿದೆ. ಮಕ್ಕಳ ಪ್ರಾಣಕ್ಕೆ ಸಂಚಕಾರ ತರುವಂತಹ ಕೃತ್ಯವನ್ನು ಪೊಲೀಸ್‌ ಹಾಗೂ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸದೇ ಇರುವುದು ಗ್ರಾಮಸ್ಥರನ್ನು ಹಾಗೂ ಹೆತ್ತವರನ್ನು ಕೆರಳಿಸಿದೆ.

ಮಂಗಳವಾರ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಮತ್ತು ಶಾಲಾಭಿವೃದ್ಧಿ ಸಮಿತಿಯ ತುರ್ತು ಸಭೆ ಶಾಲೆಯಲ್ಲಿ ನಡೆದಿದೆ. ಪ್ರಕರಣ ನಡೆದ ಅನಂತರದ ಗ್ರಾಮಸ್ಥರ ಸಭೆಯಲ್ಲಿ ನಿಗದಿಯಾದಂತೆ ಆರೋಪಿಗಳ ಪತ್ತೆಯಾಗದೇ ಇದ್ದಲ್ಲಿ ಡಿ. 13ರಂದು ಶಾಲೆಗೆ ಬೀಗ ಜಡಿದು ರಸ್ತೆಯಲ್ಲಿ ಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಗಿತ್ತು. ಈ ನಡುವೆ ಬೆಳ್ತಂಗಡಿಗೆ ಆಗಮಿಸಿದ್ದ ಮುಖ್ಯಮಂತ್ರಿ ಅವರಿಗೆ ಘಟನೆಯ ಕುರಿತು ವಿವರಿಸಿ, ಕ್ಷಿಪ್ರವಾಗಿ ಆರೋಪಿಗಳನ್ನು ಪತ್ತೆ ಮಾಡಲು ಇಲಾಖೆಗೆ ಸಹಕರಿಸಲು ಶಿಬಾಜೆ ಗ್ರಾಮಸ್ಥರಿಂದ ಮನವಿ ನೀಡಲಾಗಿತ್ತು. ಆಮೇಲೂ ಪ್ರಕರಣದ ಕುರಿತು ಯಾವುದೇ ಬೆಳವಣಿಗೆ ಕಾಣದೇ ಇರುವುದರಿಂದ, ಕುಡಿಯುವ ನೀರಿಗೆ ವಿಷವಿಕ್ಕಲು ಅವಕಾಶವಿದೆ ಎಂದಾದರೆ ಶಾಲೆಗೆ ತಮ್ಮ ಮಕ್ಕಳನ್ನು ಸುರಕ್ಷತೆಯ ಯಾವ ಭರವಸೆಯಲ್ಲಿ ಶಾಲೆಗೆ ಕಳುಹಿಸಲು ಸಾಧ್ಯ ಎಂದು ಹೆತ್ತವರು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಒಳಪಡಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ತೀರ್ಮಾನಿಸಿದ್ದರು. ಅದರಂತೆ ಬುಧವಾರದಿಂದ ಶಾಲೆಯ 1ರಿಂದ 8ನೇ ತರಗತಿಯ ವರೆಗೆ ಕಲಿಯುತ್ತಿರುವ ಎಲ್ಲ 94 ವಿದ್ಯಾರ್ಥಿಗಳನ್ನು ಅವರ ಹೆತ್ತವರು ಶಾಲೆಗೆ ಕಳುಹಿಸದೆ ಪ್ರತಿಭಟನೆ ನಡೆಸಿದ್ದಾರೆ.

ಧೈರ್ಯ ತುಂಬಲು ಸಾಧ್ಯವಿಲ್ಲವೇ?
ತಮ್ಮ ಮಕ್ಕಳ ಜೀವಕ್ಕೆ ಅಪಾಯ ಸಂಭವಿಸುವ ಭೀತಿಯಿಂದಾಗಿ ಶಾಲೆಯ ಹೆತ್ತವರು ವ್ಯಕ್ತಪಡಿಸುವ ಕಳವಳವನ್ನು ನಿವಾರಿಸುವತ್ತ ಶಿಕ್ಷಣ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ವಿಸ್ಮಯ ಮೂಡಿಸಿದೆ. ಸಾಲದೆಂಬಂತೆ ಹೆತ್ತವರು ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೇ ಇರುವ ನಿರ್ಧಾರಕ್ಕೆ ಬಂದಾಗಲೂ ಹೆತ್ತವರೊಂದಿಗೆ ಮಾತನಾಡಲು ಶಿಕ್ಷಣ ಇಲಾಖೆಯ ತಳಮಟ್ಟದ ಅಧಿಕಾರಿಯೂ ಮುಂದಾಗದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಶಂಕಿತರೊಬ್ಬರ ವಿಚಾರಣೆ
ಈ ಮಧ್ಯೆ ಪೊಲೀಸ್‌ ಇಲಾಖೆ ಈ ಹಿಂದೆ ಶಾಲೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೋರ್ವನನ್ನು ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಒಳಪಡಿಸಿರುವುದಾಗಿ ಮಾಹಿತಿ ಲಭಿಸಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.