“ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ’

Team Udayavani, Jul 18, 2019, 5:00 AM IST

ಪುಂಜಾಲಕಟ್ಟೆ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಗಳ ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷ ಬಲವರ್ಧನೆಗೆ ಹಾಗೂ ಸಂಘಟನೆಗೆ ಹಮ್ಮಿಕೊಂಡ ಪಂಚಾಯತ್‌ ಮಿಲನ ಕಾರ್ಯಕ್ರಮ ಬಡಗಕಜೆಕಾರು ಗ್ರಾಮ ಪಂಚಾಯತ್‌ ವಲಯ ಮಟ್ಟದಲ್ಲಿ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಸಭಾಂಗಣದಲ್ಲಿ ಜು. 16ರಂದು ಸಂಜೆ ಜರಗಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಹಾಗೂ ಪಕ್ಷ ಬಲವಧ‌ìನೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಪಕ್ಷದ ಮೇಲೆ ಪ್ರೀತಿಯಿಟ್ಟು ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಮುಂಬರುವ ಪಂಚಾಯತ್‌ ಚುನಾವಣೆಗೆ ಸಜ್ಜಾಗಬೇಕು ಎಂದು ಹೇಳಿದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯ ನೀಡಿ, ಕಾರ್ಯಕರ್ತರಿಂದ ಸಲಹೆ, ಸೂಚನೆಗಳನ್ನು ಸ್ವೀಕರಿಸಿ, ಪಕ್ಷವನ್ನು ಸಂಘಟಿಸಲಾಗುವುದು. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಬಲವಧ‌ìನೆಗೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ವಲಯ ಹಾಗೂ ಬೂತ್‌ ಸಮಿತಿಯನ್ನು ಪುನರ್‌ ರಚಿಸಲಾಯಿತು. ಗ್ರಾ.ಪಂ. ವಲಯ ಸಮಿತಿ ಅಧ್ಯಕ್ಷರಾಗಿ ಜಯ ಬಂಗೇರ ಅವರನ್ನು ಆಯ್ಕೆ ಮಾಡಲಾಯಿತು. ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು ಅವರು ಬಡಗಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಅಭಿವೃದ್ಧಿ ಕಾರ್ಯಗಳ ವರದಿ ನೀಡಿದರು.

ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ಅಕ್ರಮ ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್‌, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಜಗದೀಶ್‌ ಕೊçಲ, ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್‌, ಬೂತ್‌ ಅಧ್ಯಕ್ಷ ಡೀಕಯ ಪೂಜಾರಿ, ಪ್ರಮುಖರಾದ ವಿಶ್ವನಾಥ ಪೂಜಾರಿ, ಇಬ್ರಾಹಿಂ, ಯಶವಂತ್‌, ಅಬ್ದುಲ್ಲಾ , ಸುರೇಶ್‌ ಪೂಜಾರಿ, ಪಂಚಾಯತ್‌ ಸದಸ್ಯರಾದ ಸುರೇಶ್‌, ವಿನೋದಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾ.ಪಂ. ಮಾಜಿ ಅಧ್ಯಕ್ಷ ಕೆ.ಎ. ಸತೀಶ್ಚಂದ್ರ ಸ್ವಾಗತಿಸಿದರು. ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೀಕಯ ಬಂಗೇರ ವಂದಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ