ಕಡಬ: ಅಕ್ರಮ ಗೂಡಂಗಡಿಗಳ ತೆರವಿಗೆ ಗ್ರಾಮ ಪಂಚಾಯತ್‌ ಸಿದ್ಧತೆ

ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವ ಹಿನ್ನೆಲೆ; ಮಾಲಕರಿಗೆ ನೋಟಿಸ್‌ ಜಾರಿ

Team Udayavani, Dec 6, 2019, 1:16 AM IST

ಕಡಬ : ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಪರಂಬೋಕು ಸ್ಥಳಗಳಲ್ಲಿ ಗ್ರಾ.ಪಂ. ಅನುಮತಿ ಪಡೆಯದೆ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ರೀತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಗೂಡಂಗಡಿಗಳ ತೆರವಿಗೆ ಕಡಬ ಗ್ರಾ.ಪಂ. ಸಿದ್ಧತೆ ನಡೆಸಿದ್ದು, ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿಗೊಳಿಸಿದೆ.

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾದು ಹೋಗುವ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ಲೋಕೋಪಯೋಗಿ ರಸ್ತೆಯ ಮಾರ್ಜಿನ್‌ನಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನೀತಿ ತಂಡದವರ ದೂರು ಹಾಗೂ ಗ್ರಾ.ಪಂ. ಸಾಮಾನ್ಯ ಸಭೆಯ ನಿರ್ಣಯದಂತೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾ.ಪಂ. ಪರವಾನಿಗೆ ಇಲ್ಲದೆ ಅನಧಿಕೃತವಾಗಿ ರಸ್ತೆ ಪರಂಬೋಕ್‌ನಲ್ಲಿ ವ್ಯಾಪಾರ ಮಾಡುತ್ತಿರುವ ಗೂಡಂಗಡಿ, ಸೈಕಲ್‌ ಅಂಗಡಿ, ತಳ್ಳು ಗಾಡಿ ಮತ್ತು ಮೊಬೈಲ್‌ ಕ್ಯಾಂಟೀನ್‌ ವ್ಯಾಪಾರಸ್ಥರು ನೋಟಿಸ್‌ ತಲುಪಿದ ಒಂದು ವಾರದೊಳಗೆ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿಯನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಪಂಚಾಯತ್‌ರಾಜ್‌ ಅಧಿನಿಯಮ 1993 ಪ್ರಕರಣ 68, 69, 70ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಕೆಲವು ತಿಂಗಳ ಹಿಂದೆಯೇ ಲೋಕೋಪಯೋಗಿ ಇಲಾಖೆ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ಅನಧಿಕೃತ ಗೂಡಂಗಡಿಗಳ ತೆರವಿಗೆ ಮುಂದಾಗಿತ್ತು. ಆದರೆ ಸಂಬಂಧಪಟ್ಟ ಗ್ರಾ.ಪಂ.ಗಳ ಪೂರಕ ಸ್ಪಂದನೆ ಸಿಗದೆ ಕಾರ್ಯಾಚರಣೆ ಮುಂದುವರಿದಿರಲಿಲ್ಲ. ಕೆಲವು ಕಡೆ ಗ್ರಾ.ಪಂ. ಆಡಳಿತದ ಸಹಕಾರದೊಂದಿಗೆ ಅನಧಿಕೃತ ಗೂಡಂಗಡಿಗಳ ತೆರವು ನಡೆಸಲಾಗಿತ್ತು.

40ಕ್ಕೂ ಹೆಚ್ಚು ಗೂಡಂಗಡಿಗಳು
ಕಡಬ ಪೇಟೆಯಲ್ಲಿ ರಸ್ತೆ ಪರಂಬೋಕಿನಲ್ಲಿ 40ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳು ಕಾರ್ಯಾಚರಿಸುತ್ತಿವೆ ಎಂದು ಗ್ರಾ.ಪಂ. ಮಾಹಿತಿ ತಿಳಿಸಿದೆ. ಅನಧಿಕೃತ ಗೂಡಂಗಡಿ ನಡೆಸುತ್ತಿರುವ ವ್ಯಕ್ತಿಗಳಿಗೆ ವಾರದೊಳಗೆ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಲೋಕೋಪಯೋಗಿ ಇಲಾಖಾಧಿಕಾರಿಗಳು ನಿಗದಿಪಡಿಸಿದ ದಿನದಂತೆ ಕಂದಾಯ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಅಂಗಡಿ ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುವುದು. ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಡಕಾಗಿರುವ ತಳ್ಳು ಬಂಡಿ ವ್ಯಾಪಾರಕ್ಕೂ ಅವಕಾಶವಿಲ್ಲ ಎಂದು ಕಡಬ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ತಿಳಿಸಿದ್ದಾರೆ.

ಶೀಘ್ರದಲ್ಲೇ ತೆರವು
ಲೋಕೋಪಯೋಗಿ ರಸ್ತೆಯಗಳ ಪಕ್ಕದಲ್ಲಿ ಸುಗಮ ಸಂಚಾರಕ್ಕೆ ತೊಡಕಾಗುವ ರೀತಿಯಲ್ಲಿ ಅನಧಿಕೃತ ಗೂಡಂಗಡಿಗಳು ತೆರೆದುಕೊಂಡಿರುವ ಕುರಿತು ಸಾಕಷ್ಟು ದೂರುಗಳ ಬರುತ್ತಿವೆ. ಈ ಹಿಂದೆಯೇ ಅಂತಹ ಅನಧಿಕೃತ ಅಂಗಡಿಗಳವರು ತಮ್ಮ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿ ರಚನೆಗಳನ್ನು ತೆರವುಗೊಳಿಸಬೇಕೆಂದು ಪ್ರಕಟನೆ ನೀಡಲಾಗಿತ್ತು. ಗ್ರಾ.ಪಂ.ಗಳಿಗೂ ಪತ್ರ ರವಾನಿಸಲಾಗಿತ್ತು. ಕೆಲವು ಕಡೆ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಉಳಿದ ಕಡೆ ಪೊಲೀಸರ ನೆರವಿನೊಂದಿಗೆ ಕಂದಾಯ ಇಲಾಖೆ, ಗ್ರಾ.ಪಂ. ಆಡಳಿತ ಮೂಲಕ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು.
– ಪ್ರಮೋದ್‌ಕುಮಾರ್‌ ಕೆ.ಕೆ., ಪಿಡಬ್ಲ್ಯೂಡಿ ಎಇ, ಪುತ್ತೂರು

ಅನಧಿಕೃತ ಗೂಡಂಗಡಿಗಳಿಗೆ ನೋಟಿಸ್‌ ಜಾರಿ
ಅನಧಿಕೃತ ಗೂಡಂಗಡಿಗಳ ವಿರುದ್ಧ ಸಾರ್ವಜನಿಕರಿಂದ ಪದೇ ಪದೆ ದೂರುಗಳು ಬರುತ್ತಿವೆ. ಗ್ರಾ.ಪಂ.ಪರವಾನಿಗೆ ಪಡೆದು ಎಲ್ಲ ತೆರಿಗೆ ಪಾವತಿಸಿ, ಬಾಡಿಗೆ ಕೊಠಡಿಗಳಿಗೆ ದುಬಾರಿ ಮುಂಗಡ ಹಾಗೂ ಬಾಡಿಗೆ ನೀಡಿ ಕಾನೂನು ಪ್ರಕಾರ ವ್ಯಾಪಾರ ನಡೆಸುವವರಿಗೆ ಇಂತಹ ಅನಧಿಕೃತ ಅಂಗಡಿಗಳಿಂದಾಗಿ ತೊಂದರೆಯಾಗುತ್ತಿದೆ. ಪೇಟೆಯ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ ಎಂದು ಸಾಮಾಜಿಕ ಸಂಘಟನೆ ನೀತಿ ತಂಡದ ಪದಾಧಿಕಾರಿಗಳು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಗೂಡಂಗಡಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.
– ಬಾಬು ಮುಗೇರ, ಕಡಬ ಗ್ರಾ.ಪಂ. ಅಧ್ಯಕ್ಷ

ನಾಗರಾಜ್‌ ಎನ್‌.ಕೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮೈಸೂರು: "ಸಾಲ ತಂದಾದರೂ ಸರ್ಕಾರ ರೈತರ ನೆರವಿಗೆ ಬರಲಿದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಎಲ್ಲ ರೀತಿಯ ಯತ್ನ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ...

  • ಬೆಂಗಳೂರು: "ಪ್ರಯೋಜನಕ್ಕೆ ಬಾರದ ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತ್ಯಜಿಸಿ, ವೈಜ್ಞಾನಿಕ ಮನೋಭಾವದಿಂದ ದೇಶದ ಪ್ರಗತಿಗೆ ಶ್ರಮಿಸಬೇಕು' ಎಂದು ನಾಡಿನ ಜನತೆಗೆ...

  • ಮಂಡಲವಾಸ್‌(ರಾಜಸ್ಥಾನ): ಹನಿ ನೀರಿಗೂ ಪರದಾಡಿದ್ದೆವು, ಕಿಮೀಗಟ್ಟಲೇ ದೂರ ಸಾಗಿ ನೀರು ತರಲು ಹಲವು ತಾಸುಗಳನ್ನೇ ಮೀಸಲಿಡುತ್ತಿದ್ದೆವು, ಮಳೆ ಬಂದ ಎರಡೇ ತಾಸಿಗೆ...

  • ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರದಿಂದ ಸಂವಿಧಾನ ರಕ್ಷಿಸುವ ಹೊಣೆಯನ್ನು ಕಾಂಗ್ರೆಸ್‌ ಮಾಡಬೇಕಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರು ಶಪಥಗೈಯುವ ಮೂಲಕ 71ನೇ...

  • ವಿಜಯಪುರ: "ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಿ.ಸಿ. ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ...