ಶಿಕ್ಷಣದಿಂದ ಬಲಿಷ್ಠ ಭಾರತ: ಖಾದರ್‌

Team Udayavani, Jun 18, 2019, 5:00 AM IST

t-22

ಬೆಳ್ಳಾರೆ: ಶಿಕ್ಷಣ ಮತ್ತು ಸಮಾಜ ದೇಶದ ಸಂಪತ್ತು. ಭಾರತವನ್ನು ವಿಶ್ವಮಾನ್ಯವಾಗಿ ಗುರುತಿಸುವಂತೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ. ಬಡತನ ಮತ್ತು ಕಷ್ಟವನ್ನು ದೂರ ಮಾಡಿ ಬಲಿಷ್ಠ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯ ಶಿಕ್ಷಣಕ್ಕಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ 2017-18ನೇ ಸಾಲಿನ ಪ.ಜಾತಿ ಉಪಯೋಜನೆಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಲೇಜಿನ ಕಟ್ಟಡದ ಅಕ್ಷರ ದಾಸೋಹ ಕೊಠಡಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಹೋದರತೆ, ಪ್ರೀತಿ, ವಿಶ್ವಾಸವನ್ನು ಕಲಿಸುವುದು ಇಂದಿನ ಶಿಕ್ಷಣದ ಅಗತ್ಯವಾ ಗಿದೆ. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಆಂಗ್ಲಮಾಧ್ಯಮ ಶಿಕ್ಷಣ ದೊರೆಯುವಂತೆ ಮಾಡಲು ಸರಕಾರ ಗ್ರಾಮೀಣ ಮಟ್ಟದಲ್ಲಿ ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳನ್ನು ಆರಂಭಿಸಿದೆ. ಹೆತ್ತವರು ಇದರ ಸದು ಪಯೋಗಪಡಿಸಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಯೋಜನೆಯ ಲಾಭ ಪಡೆಯಬೇಕೆಂದು ಖಾದರ್‌ ತಿಳಿಸಿದರು.

ಗುಣಮಟ್ಟದ ಶಿಕ್ಷಣ
ನೂತನ ಕಟ್ಟಡದ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ಸುಳ್ಯ ಶಾಸಕ ಎಸ್‌. ಅಂಗಾರ ಮಾತನಾಡಿ, ಹೆತ್ತವರಲ್ಲಿ ಸರಕಾರಿ ಮತ್ತು ಖಾಸಗಿ ಎನ್ನುವ ಭಾವನೆಗೆ ಆಡಳಿತ ವ್ಯವಸ್ಥೆಯೇ ಕಾರಣ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಯಲ್ಲೂ ಸಿಗುತ್ತಿದೆ. ಅದಕ್ಕೆ ಬೇಕಾದ ಮೂಲ ಸೌಲಭ್ಯಗಳನ್ನು ಸರಕಾರ ಒದಗಿಸಬೇಕು. ಸರಕಾರ ಆರಂಭಿಸಿರುವ ಪಬ್ಲಿಕ್‌ ಸ್ಕೂಲ್‌ ಯೋಜನೆ ಪರಿಣಾಮಕಾರಿ ಯಾಗಲು ತರಗತಿಗೊಬ್ಬರಂತೆ ಶಿಕ್ಷಕರ ನೇಮಕವಾಗಬೇಕು. ಹೆತ್ತವರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಿ ಸಹಕರಿಸಿದಾಗ ಯೋಜನೆ ಫ‌ಲಿಸ ಬಹುದು ಎಂದರು.

ಸರಕಾರಕ್ಕೆ ಮನವಿ ಸಲ್ಲಿಕೆ
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್‌.ಪಿ. ಮಾತನಾಡಿ, ತಾಲೂಕಿನ ಮೂರು ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲಮಾಧ್ಯಮ ತರಗತಿ ಆರಂಭವಾಗಿದೆ. ಮುಂದಿನ ವರ್ಷ ಇನ್ನೂ 6 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ತಾಲೂಕಿನಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಬೆಳ್ಳಾರೆ ಕೆಪಿಎಸ್‌ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಒಂದನೇ ತರಗತಿಯ ಆಂಗ್ಲ ಮಾಧ್ಯಮ ತರಗತಿಯನ್ನು ಜಿ.ಪಂ.ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಉದ್ಘಾಟಿಸಿದರು. ಪೂರ್ವ ಪ್ರಾಥಮಿಕ ತರಗತಿಗಳನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಶಾಲಾ ಮುಖ್ಯದ್ವಾರವನ್ನು ಶಾಸಕ ಎಸ್‌. ಅಂಗಾರ ಉದ್ಘಾಟಿಸಿದರು. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಶಬೀರ್‌ ಎಂ.ಎಸ್‌. ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಸಂಸ್ಥೆಯ ವಿದ್ಯಾರ್ಥಿನಿಯರನ್ನು ಸಮ್ಮಾನಿಸಲಾಯಿತು.

ಜಿ.ಪಂ. ಸದಸ್ಯ ಎಸ್‌.ಎನ್‌. ಮನ್ಮಥ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್‌, ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಅನಸೂಯಾ, ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ರಾಜೀವಿ ಆರ್‌. ರೈ, ನಿವೃತ್ತ ಪ್ರಾಂಶುಪಾಲ ಯು. ಸುಬ್ರಾಯ ಗೌಡ, ಗ್ರಾ.ಪಂ. ಉಪಾಧ್ಯಕ್ಷ ಮುಸ್ತಾಫಾ,

ಗ್ರಾ.ಪಂ. ಸದಸ್ಯ ಆರೀಫ್, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ್‌ ಕಣಿಲೆಗುಂಡಿ, ಅಧ್ಯಕ್ಷ ಬಾಳಪ್ಪ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ನಾಯಕ್‌, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಜಾನಕಿ ಉಪಸ್ಥಿತರಿದ್ದರು. ಕೆಪಿಎಸ್‌ ಪ್ರಾಂಶುಪಾಲೆ ಹಸೀನಾ ಭಾನು ಪ್ರಸ್ತಾವಿಸಿದರು. ಶಿಕ್ಷಕ ರಾಮಚಂದ್ರ ಭಟ್‌ ಮುಗುಳಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಉಮಾಕುಮಾರಿ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ನಿರ್ವಹಿಸಿದರು.

ಖಾದರ್‌ ಆರೋಗ್ಯ ಪಾಠ
ಸಮಾರಂಭದಲ್ಲಿ ಸಚಿವ ಯು.ಟಿ. ಖಾದರ್‌ ನೀರಿಗೆ ದೇಹದ ಎಲ್ಲ ರೋಗಗಳನ್ನು ಹೋಗಲಾಡಿಸುವ ಶಕ್ತಿ ಇದೆ. ಒಂದು ತರಗತಿಯಾದ ಬಳಿಕ ನೀರು ಕುಡಿಯಿರಿ. ಪ್ರತಿದಿನ ತರಗತಿ ಆರಂಭಕ್ಕೆ ಮೊದಲು ಯೋಗ, ಧ್ಯಾನ, ಪ್ರಾಣಾಯಾಮ ಮಾಡಿ, ಕೈ ತೊಳೆದೇ ಊಟ ಮಾಡಿ ಎಂದು ವಿದ್ಯಾರ್ಥಿಗಳಿಗೆ ಆರೋಗ್ಯದ ಪಾಠ ಮಾಡಿದರು. ಜನಪ್ರತಿನಿಧಿಗಳು ಶಿಕ್ಷಕರಿಗೆ ಯಾವತ್ತೂ ಒತ್ತಡ ಮಾಡಬೇಡಿ ಎಂದು ಅವರು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.