ನಾಡೋಳಿ: ಕೃಷಿಕರಿಂದಲೇ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ

 ತುಂಬಿದ ಗೌರಿ ಹೊಳೆ; ಜಿಲ್ಲಾ ಪಂಚಾಯತ್‌ ಸಿಇಒ ಡಾ| ಸೆಲ್ವಮಣಿ ಅವರಿಂದ ಶ್ಲಾಘನೆ

Team Udayavani, Jan 24, 2020, 4:32 AM IST

kaa-28

ಸವಣೂರು: ಕಿಂಡಿ ಅಣೆಕಟ್ಟಿಗೆ ಊರಿನ ಕೃಷಿಕರು ಸೇರಿಕೊಂಡು ಹಲಗೆ ಅಳವಡಿಸುವ ಮೂಲಕ ಗೌರಿ ಹೊಳೆ ತುಂಬುವಂತೆ ಮಾಡಿದ್ದಾರೆ. ಪಾಲ್ತಾಡಿ ಗ್ರಾಮದ ನಾಡೋಳಿ, ಜಾಣಮೂಲೆಯ ಹೊಳೆಯಲ್ಲಿ ಹರಿದು ಹೋಗುತ್ತಿದ್ದ ನೀರನ್ನು ಸಂಗ್ರಹಿಸುವ ಮೂಲಕ ಜಲ ಸಂರಕ್ಷಣೆಯೊಂದಿಗೆ ಕೃಷಿಗೂ ಪೂರಕವಾಗುವಂತೆ ಮಾಡಿದ್ದಾರೆ.

ದ.ಕ.ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ಈ ಕಾರ್ಯವನ್ನು ಖುದ್ದು ವೀಕ್ಷಿಸಿ, ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಎಲ್ಲ ಕಡೆಗಳಲ್ಲಿ ಊರಿನವರೇ ಸೇರಿಕೊಂಡು ಇಂತಹ ಕಾರ್ಯ ಮಾಡಿದರೆ ಅಂತರ್ಜಲ ಹೆಚ್ಚಳದ ಜತೆಗೆ ಬೇಸಗೆಯಲ್ಲಿ ಕೃಷಿಗೆ ನೀರೊದಗಿಸಲು ನೆರವಾಗಲಿದೆ. ಇಂತಹ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದಿದ್ದಾರೆ.

ಸವಣೂರು ಗ್ರಾ.ಪಂ. ವ್ಯಾಪ್ತಿಯ ಪುಣcಪ್ಪಾಡಿ, ಸವಣೂರು, ಪಾಲ್ತಾಡಿ ಗ್ರಾಮದಲ್ಲಿ ಗ್ರಾ.ಪಂ. ಸದಸ್ಯರೇ ಮುತುವರ್ಜಿ ವಹಿಸಿ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುತ್ತಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಸಿಇಒ ಅವರಲ್ಲಿ ತಿಳಿಸಿದ್ದರು. ತಾ.ಪಂ. ಇಒ ನವೀನ್‌ ಭಂಡಾರಿ, ಸವಣೂರು ಗ್ರಾ.ಪಂ. ಸದಸ್ಯ ಸತೀಶ್‌ ಅಂಗಡಿಮೂಲೆ, ಪಿಡಿಒ ನಾರಾಯಣ ಬಿ., ಲೆಕ್ಕ ಸಹಾಯಕ ಎ. ಮನ್ಮಥ, ಸಿಬಂದಿ ಪ್ರಮೋದ್‌ ಕುಮಾರ್‌ ರೈ ಜತೆಗಿದ್ದರು.

ಮಾದರಿ ಕಾರ್ಯ
ಪ್ರಸ್ತುತ ಬೋರ್‌ವೆಲ್‌ 700 ಅಡಿ ಕೊರೆದರೂ ನೀರು ಸಿಗುವುದೇ ವಿರಳ. ಇಂತಹ ಸನ್ನಿವೇಶದಲ್ಲಿ ಹೊಳೆಯಲ್ಲಿ ಹರಿಯುತ್ತಿರುವ ನೀರನ್ನು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಮೂಲಕ ಮಾದರಿ ಕಾರ್ಯವನ್ನು ಇಲ್ಲಿನ ಕೃಷಿಕರು ತೋರಿಸಿ ಕೊಟಿದ್ದಾರೆ. ಜಲಸಂಪನ್ಮೂಲ ಇಲಾಖೆಯಿಂದ ನಿರ್ಮಿಸಿದ ಈ ಅಣೆಕಟ್ಟಿಗೆ ಗ್ರಾ.ಪಂ., ಜಿ.ಪಂ. ಇನ್ನಿತರ ಯಾವುದೋ ಇಲಾಖೆಯವರು ಹಲಗೆ ಅಳವಡಿಸಲಿ ಎಂದು ಕಾಯಲಿಲ್ಲ. ಯಾರಿಗೂ ದುಂಬಾಲು ಬಿದ್ದಿಲ್ಲ. ಕೃಷಿಕರು ಸೇರಿಕೊಂಡು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿಕೊಂಡು ನೀರಿನ ಬರವನ್ನು ದೂರ ಮಾಡಿದ್ದಾರೆ.

ತೋಟಕ್ಕೆ ನೀರು
ಪಾಲ್ತಾಡಿ ಗ್ರಾಮದ ಮಂಜುನಾಥ ನಗರದ ನಾಡೋಳಿಯಲ್ಲಿ ಹರಿಯುವ ಗೌರಿ ಹೊಳೆಗೆ ನಿರ್ಮಿಸಿರುವ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಮೂಲಕ ಸುತ್ತಲಿನ 30ಕ್ಕೂ ಹೆಚ್ಚು ಕೃಷಿಕರ ತೋಟಗಳಿಗೆ ನೀರು ಸಿಗುತ್ತಿದೆ. ಇದರಿಂದ ಬಿರು ಬೇಸಗೆಯಲ್ಲಿ ತೋಟ ಒಣಗುವ ಸಮಸ್ಯೆ ದೂರವಾಗಿದೆ. ಈ ಮೂಲಕ ನೀರಿನ ಬರದಿಂದ ತಪ್ಪಿಸಲು ಇಲ್ಲಿನ ಕೃಷಿಕರು ಪರಿಹಾರ ಕಂಡುಕೊಂಡಿದ್ದಾರೆ. ಈ ಅಣೆಕಟ್ಟಿನಲ್ಲಿ ಎಪ್ರಿಲ್‌, ಮೇ ತಿಂಗಳವರೆಗೂ ನೀರು ಶೇಖರಣೆ ಗೊಳ್ಳುತ್ತಿವೆ. ಅಂತ ರ್ಜಲ ಮಟ್ಟ ಹೆಚ್ಚಳವಾಗಲೂ ಸಹಕಾರಿಯಾಗಿದೆ. ಸುತ್ತ ಮುತ್ತಲಿನ ಕೆರೆ, ಬಾವಿಗಳಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ ಏರಿಕೆ ಕಂಡು ಬಂದಿದೆ.

ಕೃಷಿಕರಿಂದಲೇ ನಿರ್ವಹಣೆ
ಗ್ರಾಮದ ಅಡಿಕೆ ಕೃಷಿಕರೇ ಸೇರಿಕೊಂಡು ರಮೇಶ್‌ ರಾವ್‌ ಹಾಗೂ ಸತೀಶ್‌ ಬಂಬಿಲದೋಳ ಅವರ ನೇತೃತ್ವದಲ್ಲಿ ಹಲಗೆ ಅಳವಡಿಸಿದ್ದಾರೆ. ರೋಹಿತ್‌ ರೈ, ಸಂಜೀವ ರೈ ಕುಂಜಾಡಿ, ಬೆಳಿಯಪ್ಪ ಗೌಡ, ಹನೀಫ್‌, ರಝಾಕ್‌, ಸೋಮಪ್ಪ ಗೌಡ ಜಾಣಮೂಲೆ ಸಹಕಾರ ನೀಡಿದ್ದಾರೆ. ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಗೆ 16ರಿಂದ 20,000 ರೂ. ವೆಚ್ಚವಾಗುತ್ತದೆ.

ಅಂತರ್ಜಲ ಮಟ್ಟ ಹೆಚ್ಚಳ
ಕೃಷಿಗೆ ನೀರೊದಗಿಸುವುದರೊಂದಿಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸಹಕಾರಿ ಯಾಗಲಿದೆ. ಸುತ್ತಲಿನ ಕೆರೆ, ಬಾವಿಗಳಲ್ಲೂ ನೀರಿನ ಮಟ್ಟ ಹೆಚ್ಚಳವಾಗಿರುವುದು ಗಮನಿಸಬೇಕಾದ ಅಂಶ.
ಈ ಅಣೆಕಟ್ಟಿನಿಂದಾಗಿ 2 ಕಿ.ಮೀ. ವ್ಯಾಪ್ತಿಯಲ್ಲಿ ಅಂತರ್ಜಲ ವೃದ್ಧಿಸಿದೆ. 40 ಅಡಿ ಅಗಲ, 9 ಅಡಿ ನೀರು ಶೇಖರಣೆಯಾಗಿದೆ. ಸುಮಾರು 10 ಅಡಿ ನೀರು ನಿಲ್ಲುವ ಸಾಮರ್ಥ್ಯವಿದೆ.

ದಶಕದ ಹಿಂದೆ ನಿರ್ಮಾಣ
ಈ ಅಣೆಕಟ್ಟು ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ. ರಮೇಶ್‌ ಅವರ ವಿಶೇಷ ಮುತುವರ್ಜಿಯಿಂದ 10 ವರ್ಷಗಳ ಹಿಂದೆ ಜಲಸಂಪನ್ಮೂಲ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿತ್ತು.  ಅಂದಿನಿಂದ ಇಂದಿನವರೆಗೂ ಈ ನೀರು ಶೇಖರಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಕಿಂಡಿ ಅಣೆಕಟ್ಟಿನ ಬದಿಯ ಕಾಂಕ್ರೀಟ್‌ ಕಿತ್ತು ಹೋಗಿ ನೀರು ಸೋರಿಕೆಯಾಗುತ್ತಿದ್ದು, ಇದರ ದುರಸ್ತಿ ಕುರಿತು ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕಿದೆ.

ಜಲಸಂರಕ್ಷಣೆ
ಗ್ರಾಮ ವಿಕಾಸದ ಪಂಚ ಕಾರ್ಯಗಳಲ್ಲಿ ಜಲಸಂರಕ್ಷಣೆಯೂ ಒಂದು. ಈ ನಿಟ್ಟಿನಲ್ಲಿ ಜಲಸಂರಕ್ಷಣೆಯಲ್ಲಿ ಬಂಟ್ವಾಳದ ಇಡ್ಕಿದು ಗ್ರಾಮದ ಅನಂತರದ ಸ್ಥಾನವನ್ನು ಪುತ್ತೂರಿನ ಪಾಲ್ತಾಡಿ ಗ್ರಾಮ ಪಡೆದುಕೊಂಡಿದೆ. ಈ ಗ್ರಾಮದಲ್ಲಿ ಹಲವೆಡೆ ಸಣ್ಣ ಸಣ್ಣ ತೊರೆಗಳಿಗೂ ಮಣ್ಣು ಹಾಗೂ ಅಡಿಕೆ ಮರದ ಪಾಲವನ್ನು ಹಾಕಿ ತಾತ್ಕಾಲಿಕ ಕಟ್ಟಗಳನ್ನು ರಚಿಸಿದ್ದಾರೆ. ಅಲ್ಲದೆ ಸಣ್ಣ ಕಿಂಡಿ ಅಣೆಕಟ್ಟಗಳನ್ನು ನಿರ್ಮಿಸಿ ಜಲಸಂರಕ್ಷಣೆಯೂ ನಡೆಯುತ್ತಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.