ಪ್ರಕೃತಿ ಮೇಲೆ ಪ್ರಹಾರ ಸರಿಯಲ್ಲ

Team Udayavani, Jun 7, 2019, 5:50 AM IST

f-32

ಸುಳ್ಯ: ಅಭಿವೃದ್ಧಿ ನೆಪದಲ್ಲಿ ಹಸುರು ಸಂಪತ್ತಿನ ಮೇಲೆ ಪ್ರಹಾರ ಮಾಡಲಾಗುತ್ತಿದೆ. ಇದರಿಂದ ನೀರಿನ ಕೊರತೆ, ಬಿಸಿಲಿನ ತಾಪ ಏರಿಕೆಯಾಗಿ ಪ್ರಕೃತಿ ವಿಕೋಪದಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸಿವಿಲ್‌ ನ್ಯಾಯಾಧೀಶ ಯಶ್ವಂತ ಕುಮಾರ್‌ ಕೆ.ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಸ.ಪ.ಪೂ. ಕಾಲೇಜಿನ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ. ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್‌ ಮಾತನಾಡಿ, ಪ್ರಕೃತಿ ವಿನಾಶಕ್ಕೆ ಪ್ರಯತ್ನಿಸಬೇಡಿ. ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಪ್ರಕೃತಿ ವಿಕೋಪದಂತಹ ಘಟನೆಗೆ ಕಾರಣ ಎಂದು ವಿವರಿಸಿದರು. ಕಸ ವಿಲೇವಾರಿ ಕುರಿತು ವಿದೇಶದಲ್ಲಿ ಸಾಕಷ್ಟು ಜಾಗೃತಿ ಇದೆ. ಅಲ್ಲಲ್ಲಿ ಕಸದ ಬುಟ್ಟಿ ಇಟ್ಟು ಎಲ್ಲೆಂದರಲ್ಲಿ ಕಸ ಎಸೆಯದಂತೆ ಎಚ್ಚರ ವಹಿಸಲಾಗಿದೆ. ಆದರೆ ಭಾರತದಲ್ಲಿ ಆ ಜಾಗೃತಿ, ಸೌಲಭ್ಯದ ಕೊರತೆ ಇದ್ದು, ಆ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಗುಡ್ಡ ಪ್ರದೇಶದಲ್ಲಿ ಪ್ರಕೃತಿ ತನ್ನ ಬಳಕೆಗಾಗಿ ಸಂಗ್ರಹಿಸಿಟ್ಟಿರುವ ನೀರನ್ನು ಹಲವೆಡೆ ಪೈಪ್‌ ಬಳಸಿ ಮನೆ, ತೋಟಕ್ಕೆ ಉಪಯೋಗಿಸುತ್ತಾರೆ. ಉಚಿತವಾಗಿ ಬರುವ ನೀರು ಎಂದು ಬೇಕಾಬಿಟ್ಟಿ ಪೋಲು ಮಾಡಲಾಗುತ್ತದೆ. ಆದರೆ ಈ ರೀತಿ ಬಳಕೆಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಕಾನೂನು ಬಾಹಿರ ಎಂದು ಮಂಜುನಾಥ ಹೇಳಿದರು.

ಸುಳ್ಯ ಸಪ.ಪೂ. ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರೂ ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮರ್ಥ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತು ಕೊಡಬೇಕು ಎಂದರು.

ವೇದಿಕೆಯಲ್ಲಿ ಸುಳ್ಯ ಪಿಎಸ್‌ಐ ಹರೀಶ್‌ ಕುಮಾರ್‌, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ನ್ಯಾಯವಾದಿ ಹರೀಶ್‌ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್‌ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಸ.ಪ.ಪೂ. ಕಾಲೇಜಿನ ವಠಾರದಲ್ಲಿ 10 ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ 30 ಗಿಡಗಳನ್ನು ವಿತರಿಸಲಾಯಿತು.

ಬೆಳೆಯಲು 60 ವರ್ಷ; ಕಡಿಯಲು 5 ನಿಮಿಷ
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್‌. ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಃಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವಂತ ಜಾಗೃತಿ ಇಲ್ಲದಿರುವುದೇ ವಿನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.