ಪೆರ್ಲಾಪು: ವಿರೋಧದ ಹಿನ್ನೆಲೆಯಲ್ಲಿ ಶೆಡ್‌ ಸ್ಥಳಾಂತರ ತಾತ್ಕಾಲಿಕ ಸ್ಥಗಿತ

ಶಾಸಕ ಹರೀಶ್‌ ಪೂಂಜ ಭೇಟಿ; ತೆರವುಗೊಳಿಸದಂತೆ ಸೂಚನೆ

Team Udayavani, Nov 14, 2019, 3:54 AM IST

vv-15

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ಪೆರ್ಲಾಪು ಎಂಬಲ್ಲಿ ಅರ್ಹ ಫ‌ಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಲುವಾಗಿ ಮಂಜೂರು ಮಾಡಿದ್ದ ಜಾಗದಲ್ಲಿ ನಾಲ್ಕು ಕುಟುಂಬಗಳು ಅಕ್ರಮವಾಗಿ ಶೆಡ್‌ ನಿರ್ಮಿಸಿದ್ದು, ಶಾಸಕ ಹರೀಶ್‌ ಪೂಂಜ ಸೂಚನೆಯಂತೆ ತೆರವು ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.

ಇಳಂತಿಲ ಗ್ರಾಮದ ಸರ್ವೆ ನಂಬ್ರ 354/3ರಲ್ಲಿ 2.13 ಎಕ್ರೆ ಜಾಗವನ್ನು ಅರ್ಹ ಫ‌ಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಪುತ್ತೂರು ಉಪ ವಿಭಾಗಾಧಿಕಾರಿ ಮಂಜೂರು ಮಾಡಿದ್ದರು. ಗ್ರಾ.ಪಂ. ನಿವೇಶನ ರಹಿತ ಫ‌ಲಾನುಭವಿಗಳ ಪಟ್ಟಿ ಮಾಡಿ ನಿರ್ಣಯ ಅಂಗೀಕರಿಸಿತ್ತು. ಆದರೆ, ಈ ಜಾಗದಲ್ಲಿ ಅನಿತಾ ತೋಮಸ್‌, ಭಾರತಿ ಗಣೇಶ್‌, ಭಾಗ್ಯಾ ದೇವದಾಸ್‌ ಹಾಗೂ ಧನ್ಯಾ ಪದ್ಮನಾಭ ಎಂಬವರು ಶೆಡ್‌ ನಿರ್ಮಿಸಿ ವಾಸ್ತವ್ಯ ಹೂಡಿದ್ದರು. ಶೆಡ್‌ಗಳ ತೆರವಿಗೆ ಗ್ರಾ.ಪಂ. ಮಂಗಳವಾರ ಮುಂದಾ ಗಿತ್ತು. ಶೆಡ್‌ ನಿರ್ಮಿಸಿದವರ ವಿರೋಧದ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ಮುಂದುವರಿಸದಂತೆ ಸೂಚಿಸಿದರು.

ಗ್ರಾ.ಪಂ. ಆಡಳಿತ ಉಪ್ಪಿನಂಗಡಿ ಪೊಲೀಸರ ನೆರವಿನೊಂದಿಗೆ ಅಕ್ರಮ ತೆರವು ಕಾರ್ಯಾಚರಣೆಗೆ ಸ್ಥಳಕ್ಕೆ ತೆರಳಿತ್ತು. ಆಗ ಶೆಡ್‌ ನಿರ್ಮಿಸಿಕೊಂಡವರು ಆಕ್ಷೇಪ ವ್ಯಕ್ತಪಡಿಸಿ, “ನಮಗೆ ಬೇರೆ ಮನೆ ಇಲ್ಲದ ಕಾರಣ ನಾವು ಇಲ್ಲಿಂದ ಹೋಗುವುದಿಲ್ಲ’ ಎಂದು ಪಟ್ಟು ಹಿಡಿದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೀತಾ ಸಾಲ್ಯಾನ್‌, “ಈ ಜಾಗ ನಿವೇಶನ ರಹಿತರ ಪಟ್ಟಿಯಲ್ಲಿ ಇರುವವರಿಗೆ ಹಂಚುವಂಥದ್ದು. ಅದನ್ನು ನಿವೇಶನ ಮಾಡುವ ಸಲುವಾಗಿ ಸಮತಟ್ಟು ಮಾಡಬೇಕಾಗಿದೆ. ತಾವು ತಾತ್ಕಾಲಿಕವಾಗಿ ವಸತಿಗೆ ಬೇರೆ ಕಡೆ ವ್ಯವಸ್ಥೆ ಮಾಡಿಕೊಳ್ಳಿ’ ಎಂದು ಸೂಚಿಸಿದರು. “ನಿಮ್ಮ ಅರ್ಜಿ ಇಲ್ಲದ ಕಾರಣ ನಿಮಗೆ ಇಲ್ಲಿ ನಿವೇಶನ ನೀಡಲು ಬರುವುದಿಲ್ಲ. ಬೇರೆ ಜಾಗಕ್ಕೆ ಪ್ರಯತ್ನಿಸಲಾಗುವುದು’ ಎಂದರು. “ನಾವು ಇಲ್ಲಿಂದ ಹೋಗುವುದಿಲ್ಲ. ಶಾಸಕರ ಗಮನಕ್ಕೆ ತಂದಿದ್ದೇವೆ. ಅವರು ಬಂದು ತೀರ್ಮಾನ ನೀಡಿದರೆ ಪಾಲಿಸುತ್ತೇವೆ’ ಎಂದು ಶೆಡ್‌ ನಿರ್ಮಿಸಿದ ಕುಟುಂಬಸ್ಥರು ಹೇಳಿದರು. ಇದಕ್ಕೆ ಸಮ್ಮತಿಸಿ, ಕಾರ್ಯಾ ಚರಣೆ ಸ್ಥಗಿತಗೊಳಿಸಲಾಯಿತು.

ಗ್ರಾ.ಪಂ. ಉಪಾಧ್ಯಕ್ಷೆ ಗುಲಾಬಿ, ಸದಸ್ಯ ರಾದ ಮನೋಹರ್‌ ಕುಮಾರ್‌, ಯು.ಟಿ. ಫ‌ಯಾಝ್ ಅಹ್ಮದ್‌, ಚಂದ್ರಾವತಿ, ಚಂದ್ರಕಲಾ ಭಟ್‌, ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಶೀಲಾವತಿ, ಜಿ.ಪಂ. ಕಿರಿಯ ಸಹಾಯಕ ಎಂಜಿನಿಯರ್‌ ಗಫ‌ೂರ್‌ ಸಾಬ್‌, ಗ್ರಾ.ಪಂ. ಸಿಬಂದಿ ಸತೀಶ್‌, ಶಶಿಧರ್‌, ಸುಂದರ ನಾಯ್ಕ, ಯಶೋಧರ, ಸ್ಥಳೀಯರಾದ ರವಿ, ರಮೇಶ್‌ ಅಂಬೊಟ್ಟು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.