ಶ್ರೀ ಮಹಾಲಿಂಗೇಶ್ವರ ಜಾತ್ರೆ: ಧ್ವಜಾರೋಹಣ

Team Udayavani, Apr 11, 2019, 6:00 AM IST

g-7

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಅಂಗವಾಗಿ ಬುಧವಾರ ಬೆಳಗ್ಗೆ 9.54ರ ವೃಷಭ ಲಗ್ನ ಸುಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಕುಂಟಾರು ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ದೇಗುಲದಲ್ಲಿ ಪ್ರಾರ್ಥನೆ ನಡೆದು ಅನಂತರ ದೇವರ ಬಲಿ ಉತ್ಸವದ ಬಳಿಕ ಧ್ವಜಸ್ಥಂಭ ಪೂಜೆ ನಡೆದು ಧ್ವಜಾರೋಹಣ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‌. ಭಟ್‌ ಮತ್ತು ವಸಂತ ಕೆದಿಲಾಯ ಮತ್ತಿತರರು ವೈದಿಕ ಕಾರ್ಯಕ್ರಮ ನೆರವೇರಿಸಿದರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ಸದಸ್ಯರಾದ ಅರ್ಚಕ ವಸಂತ ಕೆದಿಲಾಯ, ಎನ್‌. ಕರುಣಾಕರ ರೈ, ಯು.ಪಿ. ರಾಮಕೃಷ್ಣ, ಜಾನು ನಾಯ್ಕ, ಸಂಜೀವ ನಾಯಕ್‌ ಕಲ್ಲೇಗ, ನಯನಾ ರೈ, ರೋಹಿಣಿ ಆಚಾರ್ಯ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಎನ್‌. ಕೆ. ಜಗನ್ನಿವಾಸ ರಾವ್‌, ವಾಸ್ತು ಎಂಜಿನಿಯರ್‌ ಪಿ.ಜಿ. ಜಗನ್ನಿವಾಸ್‌ ರಾವ್‌, ದೇಗುಲದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಎಸ್‌. ಬಾಬ ಮತ್ತಿತರರಿದ್ದರು.

ಹರಿದು ಬಂತು ಹಸುರುಕಾಣಿಕೆ
ಸೀಮೆಯ ಭಕ್ತರು ಅಡಿಕೆ, ಸೀಯಾಳ, ಬಾಳೆಗೊನೆ, ಕಬ್ಬಿನ ಜಲ್ಲೆ, ಮಾವಿನಕಾಯಿ ಗೊಂಚಲು, ಹಲಸಿನ ಕಾಯಿ, ಹಿಂಗಾರ ಮೊದಲಾದ ಸುವಸ್ತುಗಳನ್ನು ಬುಧವಾರ ಬೆಳಗ್ಗೆಯಿಂದಲೇ ದೇಗುಲಕ್ಕೆ ತಂದೊ ಪ್ಪಿಸುತ್ತಿದ್ದಾರೆ. ಸುವಸ್ತುಗಳನ್ನು ಧ್ವಜ ಸ್ತಂಭದ ಕಟ್ಟೆಗೆ ಸುತ್ತಲೂ ಕಟ್ಟಲಾಗುತ್ತದೆ. ನಿರಂತರ ಅನ್ನದಾನದಲ್ಲಿ ದಿನಂಪ್ರತಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಾರೆ.

ಇಂದು ಪೇಟೆ ಸವಾರಿ
ಜಾತ್ರೆಯ ಅಂಗವಾಗಿ ಎ. 11ರ ಬೆಳಗ್ಗೆ ಬಲಿ ಉತ್ಸವ, ರಾತ್ರಿ ಉತ್ಸವದ ಬಳಿಕ ಶ್ರೀ ದೇವರ ಪೇಟೆ ಸವಾರಿಯು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟುಗಳಲ್ಲಿ ನಡೆಯಲಿದೆ.

ಎ. 15: ವಿಷು ಕಣಿ
ಧ್ವಜಾರೋಹಣದ ಅನಂತರ ಪ್ರತಿ ದಿನ ದೇಗುಲದಲ್ಲಿ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಗಳು, ದೇವರ ಪೇಟೆ ಸವಾರಿ ನಡೆಯಲಿದೆ. ಎ. 15ರಂದು ಶ್ರೀ ದೇಗುಲದಲ್ಲಿ ವಿಷು ಕಣಿ ಉತ್ಸವ ವಿಶೇಷವಾಗಿ ನಡೆದು ಅಂದು ರಾತ್ರಿ ದೇಗುಲದಲ್ಲಿ ಚಂದ್ರಮಂಡಲ ರಥೋತ್ಸವ ನಡೆಯಲಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.