ಸಭೆ ನಿರ್ಣಯ ಅನುಷ್ಠಾನವಿಲ್ಲ; ಅಸಮಾಧಾನ


Team Udayavani, Jul 13, 2019, 5:00 AM IST

f-8

ಬೆಳ್ತಂಗಡಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಗಳು ಕಾಟಾಚಾರಕ್ಕೆ ನಡೆಸುವಂತಾಗಿದೆ. ಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ಗಳು ಹಲವಾರು ವರ್ಷಗಳಿಂದ ಅನುಷ್ಠಾನವಾಗದೆ ಬಾಕಿ ಇರುವ ಕುರಿತು ದಲಿತ ಮುಖಂಡರು ಪ.ಜಾತಿ/ ಪ. ಪಂಗಡ ಹಿತರಕ್ಷಣ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಮಿನಿ ವಿಧಾನಸೌಧದಲ್ಲಿ ಗುರುವಾರ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅಧ್ಯಕ್ಷತೆ ಯಲ್ಲಿ ನಡೆದ ಪ. ಜಾತಿ-ಪ. ಪಂಗಡ ಹಿತರಕ್ಷಣ ಸಭೆಯಲ್ಲಿ ದಲಿತ ಮುಖಂ ಡರು ಸಮಸ್ಯೆಗಳನ್ನು ತಿಳಿಸಿದರು.

ಅರಣ್ಯ ಹಕ್ಕು ಕಾಯ್ದೆ ಜಾರಿಯಾಗಿ ದಶಕವೇ ಕಳೆದಿದ್ದರೂ ಯಾರಿಗೂ ಪ್ರಯೋಜನವಾಗಿಲ್ಲ ಎಂದು ಮುಖಂಡ ರೊಬ್ಬರು ಗಮನಸೆಳೆದರು. ಕಾಯ್ದೆ ಯಡಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ಇಲ್ಲದೆ ಅರಣ್ಯದಲ್ಲಿ ವಾಸಿಸುತ್ತಿರುವ ಮೂಲನಿವಾಸಿಗಳಿಗೆ ಸಮಸ್ಯೆಯಾಗಿದೆ ಎಂದರು. ಜಿಲ್ಲೆಯಲ್ಲಿ ಈವರೆಗೆ ಕೇವಲ 10 ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಿರುವ ಹೊರತು ಬೇರಾವುದೇ ಕೆಲಸವಾಗಿಲ್ಲ. ಮೂರು ವರ್ಷಗಳ ಹಿಂದೆ ಹಿತ್ತಿಪೇಲೆ ಎಂಬಲ್ಲಿ ರಸ್ತೆಗೆ 25 ಲಕ್ಷ ರೂ. ಅನುದಾನ ನೀಡಿದ್ದರೂ ಕಾನೂನು ತೊಡಕಿನಿಂದಾಗಿ ಅದು ಸಾಧ್ಯವಾಗಿಲ್ಲ. ಅದಕ್ಕೆ ಅರ್ಜಿ ಸಲ್ಲಿಸಿ ಮೂರು ವರ್ಷಗಳಾಗಿದ್ದರೂ ಸೂಕ್ತ ಉತ್ತರ ಸಿಗುತ್ತಿಲ್ಲ. ಬಡವರಿಗೆ ಬದುಕಲು ಅವಕಾಶ ಕಲ್ಪಿಸಿ ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಭೋವಿ ಜನಾಂಗ ದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವು ದರಿಂದಾಗಿ ಸ್ಥಳೀಯರಿಗೆ ಅನ್ಯಾಯ ವಾಗು ತ್ತಿದೆ ಎಂದು ದಲಿತ ಮುಖಂಡ ಸಂಜೀವ ಆರ್‌. ಆರೋಪಿಸಿ ದರು. ಪ್ರತಿಕ್ರಿಯಿಸಿದ ತಹಶೀಲ್ದಾರ್‌, ಈಗಾಗಲೇ ಭೋವಿ ಜನಾಂಗಕ್ಕೆ ಹಾಗೂ ಚೆನ್ನದಾಸ ಅವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವುದನ್ನು ನಿಲ್ಲಿಸಲಾಗಿದೆ. ನೀಡಿರುವ ಪ್ರಮಾಣಪತ್ರಗಳ ಕುರಿತು ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು.

ಪಟ್ಟಾ ಜಾಗದಲ್ಲಿ ಇಲಾಖೆ ಮರ
ನಾವೂರಿನಲ್ಲಿ ದಲಿತರಿಗೆ ಸೇರಿದ ಪಟ್ಟಾ ಜಾಗದಲ್ಲಿ ಅರಣ್ಯ ಇಲಾಖೆ ಗಿಡ ನೆಟ್ಟಿದೆ. ಅಧಿಕಾರಿಗಳು ಮರ ತೆರವಿಗೆ ನೇಮಿರಾಜ ಕಿಲ್ಲೂರು ಆಗ್ರ ಹಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಇಲಾಖೆಯವರು, ಅರಣ್ಯ ಇಲಾಖೆಯ ಜಾಗದಲ್ಲಿ ಮಾತ್ರ ಗಿಡ ನಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಉತ್ತರಿಸಿದ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅಳದಂಗಡಿಯಲ್ಲಿ ಇತ್ತೆಂದು ಹೇಳಲಾದ ಅಂಬೇಡ್ಕರ್‌ ಭವನವನ್ನು ಕೆಡವಿ ಕಟ್ಟಡ ಕಟ್ಟುತ್ತಿದ್ದಾರೆ ಎಂದು ಶೇಖರ ಲಾೖಲ ಆರೋಪಿಸಿದರು. ಈ ಬಗ್ಗೆ ಪರಿಶೀಲಿಸಿ
ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ತಿಳಿಸಿದರು.

ಸಭೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿ ಕಾರಿ ಕೆ.ಇ. ಜಯರಾಂ, ತಾ| ಸಮಾಜ ಕಲ್ಯಾಣಾಧಿಕಾರಿ ಎಚ್‌.ಎಂ. ಪಾಟೀಲ್‌, ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ತಾ.ಪಂ. ಸದಸ್ಯ ಓಬಯ್ಯ ಉಪಸ್ಥಿತರಿದ್ದರು.

ಪ್ರಮುಖ ಸಮಸ್ಯೆಗಳ ಚರ್ಚೆ
ಮುಂಡಾಜೆ-ಧರ್ಮಸ್ಥಳ ರಸ್ತೆ ತೆಪ್ಪದಗಂಡಿ ಸಮೀಪ ರಸ್ತೆ ದುರಸ್ತಿಗೆ ಆಗ್ರಹ
ದಲಿತ ಸಮುದಾಯದ ಮೇಲಿನ ದೌರ್ಜನ್ಯ ವಿರುದ್ಧ
ಖಂಡನ ನಿರ್ಣಯಕ್ಕೆ ಆಗ್ರಹ
ಮೆಸ್ಕಾಂ ನೂತನ ವಿದ್ಯುತ್‌ ಮೀಟರ್‌ನಿಂದ
ದುಪ್ಪಟ್ಟು ಬಿಲ್‌: ಕ್ರಮಕ್ಕೆ ಸೂಚನೆ
ಮಾದಕ ಜಾಲ ಹತ್ತಿಕ್ಕಲು ಮುಖಂಡರ ಆಗ್ರಹ
ಉಜಿರೆಯಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಕೂಗು
ಶಿಶಿಲ, ಶಿರ್ಲಾಲು ಸಹಿತ ಶಿಲಾನ್ಯಾಸಗೊಂಡ ಅಂಬೇಡ್ಕರ್‌ ಭವನ
ಕಾಮಗಾರಿ ಆರಂಭಿಸುವಂತೆ ಆಗ್ರಹ
ಶಿರ್ಲಾಲು- ಶಾಂತಿಗುಡ್ಡೆಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

ಕಲಾ ವಿಭಾಗಕ್ಕೆ ಮಾತ್ರ ಪ್ರವೇಶ
ವೇಣೂರಿನ ಸರಕಾರಿ ಕಾಲೇಜಿನಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಕಲಾ ವಿಭಾಗದಲ್ಲಿ ಮಾತ್ರ ಪ್ರವೇಶ ನೀಡಲಾಗುತ್ತಿದೆ.ಇದರಿಂದಾಗಿ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ದಲಿತ ಮುಖಂಡರು ಆಗ್ರಹಿಸಿದರು.
ಇದಕ್ಕೆ ಧ್ವನಿಗೂಡಿಸಿದ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಇದೇ ವಿಚಾರ ನನ್ನ ಗಮನಕ್ಕೂ ಬಂದಿದ್ದು, ಒತ್ತಾಯ ಪೂರ್ವಕವಾಗಿ ಕಲಾ
ವಿಭಾಗಕ್ಕೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಈ ವಿಚಾರದ
ಬಗ್ಗೆ ಕೂಡಲೇ ಗಮನಹರಿಸುತ್ತೇನೆ. ಅಧಿಕಾರಿಗಳು ವೇಣೂರು ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವರು ಎಂದು ತಿಳಿಸಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.