ಸ್ವಚ್ಛ ಪರಿಸರ ಎಲ್ಲರ ಜವಾಬ್ದಾರಿ: ಡಾ| ಹೆಗ್ಗಡೆ 

Team Udayavani, Oct 10, 2018, 2:06 PM IST

10-october-10.gif

ಬೆಳ್ತಂಗಡಿ: ಭಾರತವು ಮಾಹಿತಿ ತಂತ್ರಜ್ಞಾನ, ಆರ್ಥಿಕತೆಯಲ್ಲಿ ಇತರ ದೇಶಗಳಿಗೆ ಸಮಾನವಾಗಿ ಬೆಳೆದಿದ್ದರೂ ಸ್ವಚ್ಛತೆಯ ನಾಗರಿಕ ಪ್ರಜ್ಞೆಯಲ್ಲಿ ಭಾರತೀಯರು ಇನ್ನೂ ಪ್ರಗತಿ ಸಾಧಿಸಬೇಕಿದೆ. ನಮ್ಮ ಪೂರ್ವಜರಿಂದ ಪಡೆದ ಸ್ವಚ್ಛ ಪರಿಸರ ವನ್ನು ಮುಂದಿನ ಜನಾಂಗಕ್ಕೂ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಸ್ವಚ್ಛತಾ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಬೆಳ್ತಂಗಡಿ ತಾಲೂಕಿನಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮದ ಮೊದಲ ಹೆಜ್ಜೆಯಾಗಿ ಸ್ವಚ್ಛತಾ ಸೇನಾನಿಗಳಿಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾರತ ಅಭಿವೃದ್ಧಿ ನಿಟ್ಟಿನಲ್ಲಿ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ. ಜ್ಞಾನವಿಕಾಸದ ಕಲ್ಪನೆ ಮೂಲಕ ಹೇಮಾವತಿ ಹೆಗ್ಗಡೆ ಮಹಿಳೆಯರಿಗೆ ಸ್ವಾಭಿಮಾನದ ಬದುಕು ನೀಡಿದ್ದಾರೆ. ಸ್ವಚ್ಛತೆ ವಿಚಾರದಲ್ಲಿ ಬೆಳ್ತಂಗಡಿ ತಾ| ರಾಷ್ಟ್ರಮಟ್ಟದಲ್ಲೇ ಹೆಸರು ಗಳಿಸಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿಯವರು ಸ್ವಚ್ಛತಾ ಸೇನಾನಿಗಳ ಟೀಶರ್ಟ್‌, ಕೈಪಿಡಿ ಬಿಡುಗಡೆಗೊಳಿಸಿ ಸಾಂಕೇತಿಕವಾಗಿ ಸ್ವಚ್ಛತಾ ಪರಿಕರಗಳನ್ನು ವಿತರಿಸಿದರು. ತಾ.ಪಂ. ಇಒ ಕುಸುಮಾಧರ ಬಿ. ಶುಭಾ ಶಂಸನೆಗೈದು, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಸವಾಲಿನ ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪ್ರಯತ್ನ ಪ್ರಶಂಸನೀಯ ಎಂದರು.

ಶ್ರೀಕ್ಷೇತ್ರದ ಹೇಮಾವತಿ ವಿ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ಮೋಹನ ಅಂಡಿಂಜೆ, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ, ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್‌ ಉಪಸ್ಥಿತರಿದ್ದರು.

ಗ್ರಾ. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿ, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ವಂದಿಸಿದರು. ಪ್ರವೀಣ್‌ ನಿರೂಪಿಸಿದರು.

ಶಾಶ್ವತ ಯೋಜನೆ
70 ವರ್ಷಗಳ ಹಿಂದೆ ತೀರಾ ಹಿಂದುಳಿದಿದ್ದ ಭಾರತವು ಬಳಿಕ ಅತ್ಯದ್ಭುತ ಪ್ರಗತಿ ಕಂಡು ಶ್ರೀಮಂತ ರಾಷ್ಟ್ರಗಳಿಗೆ ಸಮಾನಾಗಿ ಬೆಳೆದಿದೆ. ಆದರೆ ಸ್ವಚ್ಛತೆ ವಿಚಾರದಲ್ಲಿ ಭಾರತ ಸಾಕಷ್ಟು ಹಿಂದೆ ಇದೆ. ಹೀಗಾಗಿ ಗ್ರಾಮೀಣ ಭಾಗದ ಜನಪ್ರತಿನಿಧಿಗಳು ಶಾಶ್ವತ ಸ್ವಚ್ಛತಾ ಯೋಜನೆಗಳಿಗೆ ಮನಸ್ಸು ಮಾಡಬೇಕಿದೆ.
ಡಾ| ಡಿ. ವೀರೇಂದ್ರ ಹೆಗ್ಗಡೆ
   ಧರ್ಮಾಧಿಕಾರಿ

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.