ವಿಷ್ಣು ಸಹಸ್ರನಾಮ ಸ್ಮರಣೆಯಿಂದ ಜೀವನ ಪಾವನ: ವಜ್ರದೇಹಿ ಶ್ರೀ

Team Udayavani, Jan 24, 2020, 10:48 PM IST

jan-19

ಬಡಗನ್ನೂರು: ವಿಷ್ಣು ಸಹಸ್ರನಾಮ ಸ್ಮರಣೆಯಿಂದ ಜೀವನ ಪಾವನವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯ ಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ನಮ್ಮ ಕಷ್ಟ ಮತ್ತು ಸುಖದ ಮಧ್ಯೆ ಭಗವಂತನ ದರ್ಶನ ಆಗಬೇಕು ಎಂಬ ಉದ್ದೇಶದಿಂದ ಪ್ರಾರ್ಥನೆ ಮಾಡುತ್ತೇವೆ. ನಾವು ದೇವರನ್ನು ಕಂಡದ್ದು ಕಲ್ಲು ಮಣ್ಣಿನಲ್ಲಿ. ಭಗವಂತನನ್ನು ಕಲ್ಲಿನಲ್ಲಿ, ಮರದಲ್ಲಿ ಸೃಷ್ಟಿ ಮಾಡಿ ಒಂದು ಸಾನ್ನಿಧ್ಯ ಕೊಡುವುದು ಜೀವನದ ದೊಡ್ಡ ಸಾಧನೆ. ಕಲ್ಲಿನಲ್ಲಿ ಮಣ್ಣಿನಲ್ಲಿ ಮೂರ್ತಿ ಮಾಡಿ ಒಂದು ಜಾಗದಲ್ಲಿ ಇಟ್ಟು ಕೇಂದ್ರೀಕೃತ ವ್ಯವಸ್ಥೆಗೊಳಿಸಿ ಅನುಸಂಧಾನ ಮಾಡಿ ಬ್ರಹ್ಮ ಮಹಾನ್‌ ಸುವಸ್ತುಗಳ ಕಲಶದೊಳಗೆ ಅನುಸಂಧಾನ ಮೂಲಕ ಕಲ್ಲಿಗೆ ಅವಾಹನೆ ಮಾಡುವ ಮೂಲಕ ದೇವರನ್ನು ಕಾಣುತ್ತೇವೆ. ಇದು ನಮ್ಮ ನೈಜ ಪುಣ್ಯ. ಭಗವಂತನಿಗೆ ಬ್ರಹ್ಮಕಲಶೋತ್ಸವ ಮಾಡಿ ಅನಂತರ ಪುನಃ ದೇವರ ದರ್ಶನ ಮಾಡಿ ಅನುಸಂಧಾನ ಮಾಡಿಕೊಂಡಾಗ ಜೀವನದಲ್ಲಿ ಸಾರ್ಥಕತೆ ಆಗುತ್ತದೆ. ಧರ್ಮ ಎಂಬುದು ವಿಷ್ಣು ಸ್ವರೂಪ. ಆದ್ದರಿಂದ ವಿಷ್ಣು ಸಹಸ್ರನಾಮ ಪ್ರತಿ ನಿತ್ಯ ಮಾಡುವ ಮೂಲಕ ಜೀವನ ಪಾವನ ಎಂದು ಹೇಳಿದರು.

ಒಟ್ಟಾಗಿ ದುಡಿದುದರ ಫ‌ಲ
ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಒಂದು ಚಿಕ್ಕ ದೇವಾಲಯ ಅಚ್ಚುಕಟ್ಟಾಗಿ ಸುಂದರವಾಗಿ ಕಾಣಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಅವರು, ಮಕ್ಕಳಿಗೆ ಸಣ್ಣಂದಿನಿಂದಲೇ ದೇವರ ಬಗ್ಗೆ ಶ್ರದ್ಧೆ ಭಕ್ತಿ ಮೂಡಿಸುವ ಕೆಲಸ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆ ದೇವರ ನಾಡು. ಇಲ್ಲಿ ಯಾವುದೇ ಜಾತಿ, ಮತ, ಭೇದ ಇಲ್ಲದೆ ಒಟ್ಟಾಗಿ ದುಡಿದುದರ ಫ‌ಲವಾಗಿ ಇಷ್ಟೊಂದು ಅಚ್ಚುಕಟ್ಟಾದ ಬ್ರಹ್ಮಕಲಶೋತ್ಸವ ಸಂಭ್ರಮ ನಡೆದಿದೆ ಎಂದರು. ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ| ಕೃಷ್ಣಪ್ರಸನ್ನ ಮಾತನಾಡಿ, ಹಿಂದೂ ಧರ್ಮದ ಕೇಂದ್ರ ಬಿಂದುವಾದ ದೇವಸ್ಥಾನ ಮತ್ತು ಧರ್ಮ ರಕ್ಷಣೆ ನಮ್ಮ ಜವಾಬ್ದಾರಿ ಎಂದರು.

ಶ್ರೀ ಕ್ಷೇತ್ರ ನಿಡ³ಳ್ಳಿ ಶಾಂತಾದುರ್ಗಾ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ್‌ ಗೌಡ ಪುಳಿತ್ತಡಿ, ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಸಂಘದ ಉಪಾಧ್ಯಕ್ಷ ದಾಮೋದರ ಪಾಟಾಳಿ ಎಸ್‌. ಶುಭ ಹಾರೈಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನ್ಯಾಸ್‌ ಯು.ಎಸ್‌., ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಸನ್ನ ಕುಮಾರ್‌ ಮಾರ್ತ, ಪ್ರಧಾನ ಸಂಚಾಲಕ ಅರುಣ್‌ ಕುಮಾರ್‌ ಪುತ್ತಿಲ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಲಕ್ಷ್ಮಣ ಬೈಲಾಡಿ, ಪ್ರೇಮಾ ಎಸ್‌. ಸಪಲ್ಯ ಉಪಸ್ಥಿತರಿದ್ದರು. ರವೀಂದ್ರ ಶೆಟ್ಟಿ ಕಂಬಳತ್ತಡ್ಕ ದಂಪತಿ ಸ್ವಾಮೀಜಿಯವರನ್ನು ಗೌರವಿಸಿದರು. ಹಿತಾ ಶೆಟ್ಟಿ ಪ್ರಾರ್ಥಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಕೆ. ಕೃಷ್ಣಪ್ಪ ಸ್ವಾಗತಿಸಿದರು.

ವೇದಿಕೆ ಸಮಿತಿ ಸಂಚಾಲಕ ಜಯಂತ್‌ ಶೆಟ್ಟಿ ಕಂಬಳತ್ತಡ್ಕ ವಂದಿಸಿದರು. ಸುಳ್ಯ ಎನ್‌ಎಂಸಿ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ನಿರೂಪಿಸಿದರು. ಬಳಿಕ ಪುತ್ತೂರು ಶ್ರೀ ಮೂಕಾಂಬಿಕಾ ಕಲ್ಚರಲ್‌ ಅಕಾಡೆಮಿ ಕಲಾವಿದರಿಂದ ನೃತ್ಯ ವೈಭವ ನಡೆಯಿತು.

ಭಕ್ತರ ಸಹಕಾರ
ಪುತ್ತೂರು ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಎಳೆಮರೆಯ ಕಾಯಿಯಾಗಿ ದುಡಿದ ಸ್ವಯಂ ಸೇವಕ ಹಾಗೂ ಊರಿನ ಭಕ್ತರ ಸಹಕಾರದಲ್ಲಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿದೆ ಎಂದರು.

ಪುಣ್ಯ ಭೂಮಿ
ಕರ್ನಾಟಕ ಬಜರಂಗ ದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ, ಭಾರತ ಭೋಗ ಭೂಮಿ ಅಲ್ಲ. ಪುಣ್ಯ ಭೂಮಿ, ಕರ್ಮ ಭೂಮಿ, ತಪೋ ಭೂಮಿ. ದೇವಾಲಯ ಮತ್ತು ವಿದ್ಯಾಲಯ ನಮ್ಮ ಎರಡು ಕಣ್ಣುಗಳು. ಸ್ವಾರ್ಥ ಬಿಟ್ಟು ನಿಸ್ವಾರ್ಥ ಸೇವೆ ಮಾಡಿದರೆ ಧರ್ಮ ರಕ್ಷಣೆ ಮಾಡಲು ಸಾಧ್ಯ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.