ರೆಂಕೆದಗುತ್ತು: ವಿದ್ಯುತ್‌ ಸ್ಪರ್ಶಿಸಿ ಮಹಿಳೆ ಸಾವು

Team Udayavani, Jul 19, 2019, 11:14 AM IST

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ದಿ| ಸಂಜೀವ ಅವರ ಪತ್ನಿ ಸುಂದರಿ (55) ಅವರು ವಿದ್ಯುತ್‌ ಸ್ಪರ್ಶವಾಗಿ ಜು. 17ರ ತಡರಾತ್ರಿ ಮೃತಪಟ್ಟಿದ್ದಾರೆ.

ಮಧ್ಯರಾತ್ರಿ 12.30ರ ಸುಮಾರಿಗೆ ಹಟ್ಟಿಯಲ್ಲಿ ದನ ಕೂಗಿದ್ದನ್ನು ಕೇಳಿ ಅವರು ಹಟ್ಟಿಗೆ ಬಂದಾಗ ದುರಂತ ಸಂಭವಿಸಿದೆ. ತಂತಿಯ ಮೂಲಕ ಅಲ್ಲಿದ್ದ ಕಬ್ಬಿಣದ ಕಂಬಕ್ಕೆ ವಿದ್ಯುತ್‌ ಪ್ರವಹಿಸಿದ್ದು, ಆ ಕಂಬವನ್ನು ಸುಂದರಿ ಸ್ಪರ್ಶಿ ಸಿದ್ದು ದುರಂತಕ್ಕೆ ಕಾರಣ ಎನ್ನಲಾಗಿದೆ. ಅವರ ಬೊಬ್ಬೆ ಕೇಳಿ ಧಾವಿಸಿ ಬಂದ ಮನೆಮಂದಿ ಅವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರಾದರೂ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಎಎಸ್‌ಐ ಕಲೈಮಾರ್‌, ಮೆಸ್ಕಾಂ ಎಇಇ ಶಿವಶಂಕರ್‌ ಭೇಟಿ ನೀಡಿ ಪರಿಶೀಲಿಸಿದರು. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪುತ್ರರಾದ ದಸಂಸ ಮುಖಂಡ ರಮೇಶ್‌ ಆರ್‌. ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ