ಹದಗೆಟ್ಟಿದೆ ಪೆರಾಜೆ – ಅಮಚೂರು ರಸ್ತೆ; ಸಂಚಾರಕ್ಕೆ ತೊಡಕು

ಕಿತ್ತು ಹೋಗಿರುವ ಡಾಮರು; ರಸ್ತೆ ಮೇಲ್ದರ್ಜೆಗೇರಿಸಲು ಆಗ್ರಹ

Team Udayavani, Dec 5, 2019, 4:50 AM IST

fd-23

ಅರಂತೋಡು: ಪೆರಾಜೆ- ಅಮಚೂರು- ತೊಡಿಕಾನ ಸಂಪರ್ಕ ರಸ್ತೆ ತುಂಬಾ ಕಿರಿದಾಗಿದ್ದು, ಈಗ ನಾದುರಸ್ತಿಯಲ್ಲಿದೆ. ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ. ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಬೇಕೆಂದು ಹಲವು ವರ್ಷಗಳಿಂದ ಸ್ಥಳೀಯರು ಒತ್ತಾಯಿಸುತ್ತಲೇ ಇದ್ದಾರೆ.

ಪೆರಾಜೆ ರಾಜ್ಯ ಹೆದ್ದಾರಿಯಿಂದ ಪೆರಾಜೆ – ಅಮಚೂರು, ಚಾಂಬಾಡು – ತೊಡಿಕಾನ ಸಂಪರ್ಕ ರಸ್ತೆ ಆರಂಭಗೊಳ್ಳುತ್ತದೆ. ಪೆರಾಜೆ ರಾಷ್ಟ್ರೀಯ ಹೆದ್ದಾರಿಂದ ತೊಡಿಕಾನ ಕೂಡು ರಸ್ತೆಗೆ 7 ಕಿ.ಮೀ. ದೂರ ಇದೆ. ಪೆರಾಜೆಯಿಂದ 5 ಕಿ.ಮೀ. ರಸ್ತೆ ಕೊಡಗು ಜಿಲ್ಲಾಡಳಿತಕ್ಕೆ ಒಳಪಡುತ್ತದೆ. ಉಳಿದ 2 ಕಿ.ಮೀ. ರಸ್ತೆ ದ.ಕ. ಜಿಲ್ಲೆಯ ಆಡಳಿತದ ವ್ಯಾಪ್ತಿಗೆ ಒಳಪಡುತ್ತದೆ. ಇದು ಅಲ್ಲಲ್ಲಿ ಕಿರಿದಾಗಿದೆ. ರಸ್ತೆಯ ಮಧ್ಯೆ ಅನೇಕ ತಿರುವುಗಳಿವೆ. ಹಲವು ಕಡೆಗಳಲ್ಲಿ ಡಾಮರು ಕಿತ್ತು ಹೋಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.

ಸೇತುವೆಯೂ ಅಪಾಯದಲ್ಲಿ
ಇಲ್ಲಿನ ರಸ್ತೆಯಲ್ಲಿ ಕೆಂಪು ಕಲ್ಲು ಸಾಗಾಟದ ವಾಹನ ಸಂಚರಿಸುತ್ತಿರುವುದರಿಂದ ರಸ್ತೆಯ ಬಾಳಿಕೆ ಇನ್ನಷ್ಟು ಕಡಿಮೆಯಾಗಿದೆ. ಕಲ್ಲುಕೋರೆ ಮಾಲಕರು ಈ ರಸ್ತೆಯ ಒಂದಷ್ಟು ಭಾಗವನ್ನು ಅಭಿವೃದ್ಧಿ ಮಾಡಿಕೊಡುತ್ತೇವೆ ಎಂದು ಹೇಳಿ ಜಲ್ಲಿ ಕಲ್ಲುಗಳನ್ನು ರಸ್ತೆಗೆ ಹಾಕಿದ್ದಾರೆ. ಈ ಎಲ್ಲ ಸಮಸ್ಯೆಯನ್ನು ಅರಿತುಕೊಂಡಿರುವ ಜನರು ರಸ್ತೆಯನ್ನು ಅಭಿವೃದ್ಧಿಗೊಳಿಸಿ ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿದ್ದಾರೆ. ತೊಡಿಕಾನ ಅಮಚೂರು ಸಮೀಪದ ಹೊಳೆಗೆ 35 ವರ್ಷಗಳ ಹಿಂದೆ ನಿರ್ಮಿಸಲಾದ ಸೇತುವೆಯ ಬದಿಯ ಕೆಲವು ಭಾಗಗಳು ಕುಸಿತಗೊಂಡಿದ್ದು, ಅಪಾಯ ಎದುರಾಗಿದೆ.

ಕಾವೇರಿ ರಸ್ತೆ ಅಭಿವೃದ್ಧಿಗೊಳ್ಳಲಿ
ಇತಿಹಾಸ ಪ್ರಸಿದ್ಧ ಪೆರಾಜೆ – ತೊಡಿಕಾನ – ಪಟ್ಟಿ ರಸ್ತೆ (ಕಾವೇರಿ ರಸ್ತೆ) ಅಭಿವೃದ್ಧಿಗೊಳ್ಳಬೇಕೆಂದು ಹಲವು ವರ್ಷಗಳಿಂದ ಪೆರಾಜೆ ಭಾಗದ ಜನರು ಒತ್ತಾಯಿಸುತ್ತಿದ್ದಾರೆ. ಪೆರಾಜೆ ಶಾಸ್ತವು ದೇವಾಲಯ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ಕೊಡಗಿನ ತಲಕಾವೇರಿ, ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಪುರಾತನ ಕಾಲದಿಂದಲೂ ಧಾರ್ಮಿಕ ಐತಿಹಾಸಿಕ ನೇರ ಸಂಬಂಧಗಳಿವೆ. ಪೆರಾಜೆ – ತೊಡಿಕಾನ – ಪಟ್ಟಿ – ಭಾಗಮಂಡಲ ರಸ್ತೆ ಮೂಲಕ ಈ ಭಾಗದ ಜನರು ಕೊಡಗಿನ ಭಾಗಮಂಡಲಕ್ಕೆ ಹಾಗೂ ತಲಕಾವೇರಿಗೆ ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಪೆರಾಜೆ ಶಾಸ್ತವು ದೇವಾಲಯದ ಪಕ್ಕ ಈಗಲೂ ಕಾವೇರಿ ಗದ್ದೆ ಇದ್ದು, ಇದರಲ್ಲಿ ಬೆಳೆದ ಕದಿರನ್ನು ತೆಗೆದು ಚೌತಿಯ ಸಂದರ್ಭ ಭಾಗಮಂಡಲದ ಭಗಂಡೇಶ್ವರ ಮತ್ತು ತಲಕಾವೇರಿಗೆ ಈ ರಸ್ತೆಯ ಮೂಲಕ ಸಾಗಿ ಕಟ್ಟುತ್ತಿದ್ದರು. ಬ್ರಿಟಿಷ್‌ ಸರಕಾರದ ದಾಖಲೆಯಲ್ಲಿ ಇದು “ಕಾವೇರಿ ರಸ್ತೆ’ ಎಂದೇ ನಮೂದಿಸಲಾಗಿದೆ. ಅಲ್ಲದೆ ಬ್ರಿಟಿಷ್‌ ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಗಳ ಪಟ್ಟಿ ಮಾಡುತ್ತಿದ್ದ ಜಾಗವೇ “ಪಟ್ಟಿ’ ಎಂಬ ಹೆಸರು ಪಡೆದಿದೆ ಎಂದು ಹಿರಿಯರು ಹೇಳುತ್ತಾರೆ.

ತೊಡಿಕಾನ- ಪಟ್ಟಿ- ಬಾಚಿಮಲೆ ರಸ್ತೆ ಅಭಿವೃದ್ಧಿಗೆ ರಾಜ್ಯ ಸರಕಾರ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕಡತ ವಿಲೇವಾರಿಗೆ ಸಂಬಂಧಿಸಿದ ಕೆಲಸ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಅಭಿವೃದ್ಧಿಯ ಪ್ರಯತ್ನ ಸಾಗುತ್ತಿದೆ
ಪೆರಾಜೆ – ಅಮಚೂರು – ಚಾಂಬಾಡು ರಸ್ತೆ ಪೆರಾಜೆಯಿಂದ 5 ಕಿ.ಮೀ. ಕೊಡಗು ಜಿಲ್ಲಾಡಳಿತಕ್ಕೆ ಒಳಪಟ್ಟಿದೆ. ಈ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಲದ ವಿಪರೀತ ಮಳೆಯಿಂದ ಕೆಲವೆಡೆ ಹದಗೆಟ್ಟಿದೆ. ಇದನ್ನು ಮಳೆ ಹಾನಿ ಅನುದಾನದಲ್ಲಿ ದುರಸ್ತಿಪಡಿಸಲಾಗುತ್ತದೆ. ಪೆರಾಜೆ ದೇವಾಲಯ ಕೊಡಗಿನ ತಲಕಾವೇರಿ ಭಾಗಮಂಡಲದ ಭಗಂಡೇಶ್ವರ ದೇವಾಲಯೊಂದಿಗೆ ಧಾರ್ಮಿಕ ಐತಿಹಾಸಿಕ ಸಂಬಂಧ ಹೊಂದಿದ್ದು, ಇದನ್ನು ಸಂಪರ್ಕಿಸಿ ಪೆರಾಜೆ-ತೊಡಿಕಾನ-ಪಟ್ಟಿ ರಸ್ತೆ ಅಭಿವೃದ್ಧಿಯ ಬಗ್ಗೆ ದೊಡ್ಡ ಪ್ರಯತ್ನ ನಡೆಯುತ್ತಿದೆ.
 - ನಾಗೇಶ್‌ ಕುಂದಲ್ಪಾಡಿ, ತಾ.ಪಂ. ಸದಸ್ಯ, ಮಡಿಕೇರಿ

ದುರಸ್ತಿ ಅಗತ್ಯವಾಗಿ ಆಗಬೇಕಿದೆ
ಪೆರಾಜೆ – ಅಮಚೂರು – ತೊಡಿಕಾನ ರಸ್ತೆ ಅಲ್ಲಲ್ಲಿ ಹೊಂಡ – ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವುದಂತೂ ತ್ರಾಸದಾಯಕ. ಈ ರಸ್ತೆಯನ್ನು ದುರಸ್ತಿ ಮಾಡುವ ಅಗತ್ಯ ಇದೆ.
 - ಗೋವರ್ಧನ ಬೊಳ್ಳೂರು, ಸ್ಥಳೀಯ ನಿವಾಸಿ

– ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.