ಉಡುಪಿ ಶ್ರೀಕೃಷ್ಣ ಮಠ: ಇನ್ನು 4 ತಿಂಗಳು ಭಿನ್ನ ಆಹಾರ ಕ್ರಮ


Team Udayavani, Jul 9, 2019, 10:09 AM IST

krishna-mat

ಉಡುಪಿ: ಚಾತುರ್ಮಾಸ್ಯ ವ್ರತದ ಆಹಾರ ಪದ್ಧತಿ ಉಡುಪಿ ಸಂಪ್ರದಾಯದ ಮಠಗಳಲ್ಲಿ ಆಷಾಢ ಮಾಸದ ದ್ವಾದಶಿಯಿಂದ ನಾಲ್ಕು ತಿಂಗಳು ಪರ್ಯಂತ ನಡೆಯಲಿದೆ. ಪ್ರಥಮನ ಏಕಾದಶಿಯಂದು ಉಪವಾಸವಿದ್ದು ತಪ್ತಮುದ್ರಾಧಾರಣೆ ಮಾಡಿದ ಅನಂತರ ನಾಲ್ಕು ತಿಂಗಳಲ್ಲಿ ನಾಲ್ಕು ತರಹದ ಆಹಾರ ಕ್ರಮ ಸಂಪ್ರದಾಯದಂತೆ ನಡೆಯಲಿದೆ.

ಶಾಕ ವ್ರತ
ಮೊದಲ ತಿಂಗಳ ಆಹಾರ ಕ್ರಮ ವನ್ನು ಶಾಕವ್ರತ ಎಂದು ಕರೆಯುತ್ತಾರೆ. ಈ ತಿಂಗಳಲ್ಲಿ ತರಕಾರಿ ಬಳಸುವುದಿಲ್ಲ. ಮಾವು ಹೊರತಾಗಿ ಇತರ ಹಣ್ಣುಗಳನ್ನು ಬಳಸುವುದಿಲ್ಲ. ಪೊನ್ನಂಗೈ ಸೊಪ್ಪು, ತಿಮರೆ ಸೊಪ್ಪು, ಮಾವಿನಕಾಯಿ, ಪಾಪಡ್ಕ ಕಾಯಿಯನ್ನು ಬಳಸುತ್ತಾರೆ. ಹುಣಿಸೆ ಹುಳಿ ಬದಲು ಮಾವಿನ ಕಾಯಿಯನ್ನು, ಹಸಿ ಮೆಣಸು- ಒಣ ಮೆಣಸಿನ ಬದಲು ಕಾಳು ಮೆಣಸು ಬಳಸುತ್ತಾರೆ. ಉದ್ದು, ಹೆಸರು ಬೇಳೆ ಹೊರತುಪಡಿಸಿ ಇನ್ನಾವುದೇ ಬೇಳೆಯನ್ನು ಬಳಸುವು ದಿಲ್ಲ. ಒಟ್ಟಿನಲ್ಲಿ ಬೇರು (ಭೂಮಿ ಯಡಿ ಬೆಳೆಯುವಂಥದ್ದು), ಕಾಂಡ (ತರಕಾರಿ ಗಳು), ಪತ್ರ (ಪತ್ರೊಡೆಯಂತಹ ಖಾದ್ಯ ತಯಾರಿ ಎಲೆಗಳು), ಪುಷ್ಪ (ಗುಂಬಳ, ದಾಸವಾಳದಂತಹ ಹೂವು), ಹಣ್ಣುಗಳನ್ನು ಬಳಸುವುದಿಲ್ಲ. ಸಾರು, ಸಾಂಬಾರು, ಪಲ್ಯ, ಪಾಯಸಕ್ಕೆ ಹೆಸರು ಬೇಳೆ ಮುಖ್ಯ. ಪಂಚಕಜ್ಜಾಯವನ್ನು ಹೆಸರುಬೇಳೆ ಯಿಂದ ಮಾಡಲಾಗುತ್ತದೆ. ಕಡಲೆ ಬೇಳೆ ಮಡ್ಡಿಯ ಬದಲು ಹೆಸರು ಬೇಳೆ ಮಡ್ಡಿ ಮಾಡುತ್ತಾರೆ.

ಕ್ಷೀರ- ದಧಿವ್ರತ
2ನೇ ತಿಂಗಳಿನದ್ದು ಕ್ಷೀರ ವ್ರತ. ಆಗ ಹಾಲಿನ ಬಳಕೆ ಇಲ್ಲ. 3ನೇ ತಿಂಗಳಿನದ್ದು ದಧಿವ್ರತ. ಆಗ ಮೊಸರನ್ನು ಬಳಸುವುದಿಲ್ಲ.

ದ್ವಿದಳ ವ್ರತ
4ನೆಯದ್ದು ದ್ವಿದಳ ವ್ರತ. ಆ ತಿಂಗಳಲ್ಲಿ ದ್ವಿದಳ ಧಾನ್ಯ ಬಳಕೆಯಾಗುವುದಿಲ್ಲ. ಬೇಳೆ ಮಾತ್ರವಲ್ಲದೆ ಹಸಿ ಮೆಣಸು, ಒಣಮೆಣಸನ್ನು ಬಳಸುವುದಿಲ್ಲ. ಭೂಮಿಯಡಿ ಬೆಳೆಯುವ ಗೆಡ್ಡೆ ಗೆಣಸು, ಬಾಳೆ ದಿಂಡು, ಬಾಳೆಕಾಯಿ, ಬಾಳೆಕೂಂಬೆ ಬಳಸುತ್ತಾರೆ. ಹಣ್ಣುಗಳಲ್ಲಿ ಬಾಳೆ ಹಣ್ಣನ್ನು ಬಳಸಲಾಗುತ್ತದೆ. ಕಾಳು ಮೆಣಸು ಖಾರಕ್ಕಾಗಿ, ಮಾವಿನಕಾಯಿ ಹುಳಿಗಾಗಿ ಬಳಸುತ್ತಾರೆ. ಅರಳಿನ ಚಿತ್ರಾನ್ನ, ಪಲ್ಯ, ಅವಲಕ್ಕಿಯ ಪಾಯಸ ಮಾಡುತ್ತಾರೆ. ಯಾವುದೇ ಬೇಳೆ ಬಳಸದ ಕಾರಣ ರವೆಯಿಂದ ಮಡ್ಡಿ ತಯಾರಿಸುತ್ತಾರೆ. ಮೊದಲ ಮತ್ತು ಕೊನೆಯ ತಿಂಗಳಲ್ಲಿ ಗೋಡಂಬಿ, ದ್ರಾಕ್ಷಿ, ಲಾವಂಚ, ಏಲಕ್ಕಿಯಂತಹ ಪರಿಮಳ ದ್ರವ್ಯಗಳನ್ನು ಬಳಸುವುದಿಲ್ಲ.

ಅಭ್ಯಾಸವಿಲ್ಲದವರಿಗೆ ಈ ವ್ರತಗಳ ಆಹಾರ ರುಚಿಸುವುದಿಲ್ಲ. ಹೀಗಾಗಿ ಶ್ರೀಕೃಷ್ಣ ಮಠ ದಲ್ಲಿ ಯಾತ್ರಾರ್ಥಿಗಳಿಗೆ ಎಂದಿನಂತೆ ಸಾರು, ಸಾಂಬಾರಿನ ಖಾದ್ಯ ಗಳನ್ನು ತಯಾರಿಸುತ್ತಾರೆ. ನೈವೇದ್ಯಕ್ಕಾಗಿ ವ್ರತದ ಆಹಾರವನ್ನು ತಯಾರಿಸುತ್ತಾರೆ ಮತ್ತು ಈ ಆಚಾರ ವನ್ನು ಪಾಲಿಸುವ ವ್ರತಧಾರಿಗಳು ಮಾತ್ರ ಚಾತುರ್ಮಾಸ್ಯವ್ರತದ ಆಹಾರ ವನ್ನು ಬಳಸುತ್ತಾರೆ. ನಾಲ್ಕೂ ತಿಂಗಳು ತಪ್ಪದೆ ಈ ಆಹಾರಕ್ರಮ ಪಾಲಿಸುವ ಆಚಾರನಿಷ್ಠರೂ ಇದ್ದಾರೆ.

ಜು. 13ರಿಂದ ಚಾತುರ್ಮಾಸ್ಯ ವ್ರತ ಆಹಾರ ಕ್ರಮ ಉಡುಪಿ ಸಂಪ್ರದಾಯದ ಎಲ್ಲ ಮಠಗಳಲ್ಲಿ ಆರಂಭಗೊಳ್ಳು ತ್ತದೆ. ಸ್ವಾಮೀಜಿಯವರ ಚಾತುರ್ಮಾಸ್ಯ (ಒಂದೆಡೆ ಕುಳಿತು ಕೊಂಡು ಸಾಧನೆ ಮಾಡುವ) ಎರಡು ತಿಂಗಳಲ್ಲಿ ಮುಗಿ ದರೂ ಆಹಾರ ಕ್ರಮ ನಾಲ್ಕೂ ತಿಂಗಳು ಮುಂದು ವರಿಯುತ್ತದೆ. ಉತ್ಥಾನ ದ್ವಾದಶಿಯಂದು ನಾಲ್ಕು ತಿಂಗಳ ವ್ರತ ಮುಗಿದು ಮಾಮೂಲಿ ಆಹಾರ ಕ್ರಮ ಆರಂಭಗೊಳ್ಳುತ್ತದೆ.

ಆಯುರ್ವೇದ – ಯೋಗ ಮಾರ್ಗಗಳಲ್ಲಿಯೂ ಉಲ್ಲೇಖ
ಚಾತುರ್ಮಾಸ್ಯದ ಆಹಾರ ಕ್ರಮಕ್ಕೂ ಆಯು ರ್ವೇದ ಶಾಸ್ತ್ರೀಯ ಆಹಾರ ಕ್ರಮಕ್ಕೂ ಕೆಲವು ಸಾಮ್ಯಗಳಿವೆ. ಆಯುರ್ವೇದ, ಯೋಗ ವಿಭಾಗದಲ್ಲಿ ಆಯಾ ಋತುಗಳಲ್ಲಿ ಎಂತೆಂಥ ಆಹಾರಗಳನ್ನು ಸ್ವೀಕರಿಸಬೇಕೆಂಬ ನಿಯಮವಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.