ಉದ್ಯಾವರದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ : ಹೆದ್ದಾರಿಯಲ್ಲಿ ಏಕಮುಖ ಸಂಚಾರ
Team Udayavani, Jul 3, 2019, 10:44 AM IST
ಉಡುಪಿ: ಇಲ್ಲಿನ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಬಲಾಯಿಪಾದೆ ಎಂಬಲ್ಲಿ ಬುಧವಾರ ಬೆಳಗಿನ ಜಾವ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿದ್ದು, ಆತಂಕಕ್ಕೆ ಕಾರಣವಾಯಿತು.
ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎನ್ನುವುದು ಖಚಿತವಾಗಿದೆ.
ಮೊದಲಿಗೆ ಹೆದ್ದಾರಿಯಲ್ಲಿ ಸಂಚಾರವನ್ನು ತಡೆಯಲಾಗಿದ್ದು , ಗ್ಯಾಸ್ ಲೀಕ್ ಆಗುತ್ತಿಲ್ಲ ಎನ್ನುವುದು ಖಚಿತವಾದ ಬಳಿಕ ಇನ್ನೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಯಿತು.
ಅಗ್ನಿ ಶಾಮಕದಳ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಗ್ಯಾಸ್ ಟ್ಯಾಂಕರ್ ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟ್ಯಾಂಕರ್ ಮಂಗಳೂರಿನಿಂದ ಕಾರವಾರದತ್ತ ತೆರಳುತ್ತಿತ್ತು. ಉದ್ಯಾವರ ಬಂಕ್ನಲ್ಲಿ ಡಿಸೇಲ್ ತುಂಬಿಸಿ ಹೋದ ಚಾಲಕ ಎಟಿಎಂ ಕಾರ್ಡ್ ಬಿಟ್ಟು ಹೋಗಿದ್ದು, ಸ್ವಲ ದೂರ ಹೋಗಿ ತರಾತುರಿಯಲ್ಲಿ ಟ್ಯಾಂಕರನ್ನು ತಿರುಗಿಸುವ ವೇಳೆ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?