ಮದುಮಕ್ಕಳಿಗೆ ಶುಭಪ್ರದ ಜಾತ್ರೆ

Team Udayavani, Aug 15, 2019, 6:47 AM IST

ಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀ ಪ್ರಿಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ ದಲ್ಲಿ ಆ. 17ರಂದು ನಡೆಯುವ ಸಿಂಹ ಸಂಕ್ರಮಣ ಆಚರಣೆ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

ಬೆಳಗ್ಗೆ 4 ಗಂಟೆಯಿಂದ ಜನಜಂಗುಳಿ, ವಾಹನ ದಟ್ಟಣೆ ಆರಂಭವಾಗುತ್ತದೆ. ಉಡುಪಿ ಜಿಲ್ಲೆಯಾದ್ಯಂತದಿಂದ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷ.

ಬಾಳೆಹಣ್ಣಿನ ನೈವೇದ್ಯ ಪ್ರಿಯ ಶ್ರೀ ಅನಂತ ಪದ್ಮನಾಭನ ಕ್ಷೇತ್ರ ವಿಶೇಷ ಕಾರಣಿಕದ ಸಾನ್ನಿಧ್ಯವಾಗಿದ್ದು, ಭಕ್ತರು ತಮ್ಮ ಇಷ್ಟ ದೈವವನ್ನು ಸ್ಮರಿಸಿಕೊಂಡು ಪ್ರಾರ್ಥಿಸಿದರೆ ಖಂಡಿತ ಫಲ ನೀಡುತ್ತದೆ ಎಂಬ ನಂಬಿಕೆ ಭಕ್ತರದ್ದಾಗಿದೆ. 12 ಸಂಕ್ರಮಣಗಳೂ ಇಲ್ಲಿ ವಿಶೇಷವಾಗಿದ್ದು ಅದರಲ್ಲೂ ಸಿಂಹ ಸಂಕ್ರಮಣ ಹಬ್ಬದ ವಾತಾವರಣದೊಂದಿಗೆ ಬೃಹತ್‌ ಜನಸಾಗರ ಹರಿದುಬರುತ್ತದೆ.

ಮದುಮಕ್ಕಳ ಜಾತ್ರೆ

ಆಷಾಢ ಮಾಸದ ಬಳಿಕ ಬರುವ ಸಿಂಹ ಮಾಸ ನೂತನ ಮದುಮಕ್ಕಳಿಗೆ ವಿಶೇಷ. ಹೊಸದಾಗಿ ಮದುವೆಯಾದ ಮದುಮಕ್ಕಳು ದೇವರ ದರ್ಶನ ಮಾಡಿ ಹೋಗುವ ಸಂಪ್ರದಾಯ ಮೊದಲಿನಿಂದ‌ಲೂ ನಡೆದು ಬರುತ್ತಿದೆ. ಮದುಮಗ ತನ್ನ ಮನೆ ಹಿರಿಯರೊಂದಿಗೆ ಬಂದು ತನ್ನ ಮಡದಿಯನ್ನು ಕರೆದೊಯ್ಯುವ ಹಾಗೂ ಮದುಮಗಳು ತನ್ನ ತಂದೆ-ತಾಯಿಯೊಂದಿಗೆ ಬಂದು ಗಂಡನ ಮನೆಯೆಡೆಗೆ ನಡೆಯಲು ಸೇರುವ ತಾಣ ಪೆರ್ಡೂರಿನ ಸಿಂಹ ಸಂಕ್ರಮಣವಾಗಿತ್ತು.ಅದಕ್ಕಾಗಿಯೇ ಕಳೆದ ವರ್ಷ ಮದುವೆಯಾದ ಜೋಡಿಗಳು ಜತೆಯಾಗಿ ಬಂದು ಮುಂದಿನ ಭವ್ಯ ಭವಿತವ್ಯಕ್ಕಾಗಿ ಶ್ರೀ ಸ್ವಾಮಿಯನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದ್ದು, ಇಂದು ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿಯನ್ನು ಪಡೆದಿದೆ.

ಹನ್ನೆರಡು ಸಂಕ್ರಮಣ ವ್ರತ

ಸಂಕ್ರಮಣ ದೇವರು ಎಂದು ಪ್ರಸಿದ್ಧಿ ಪಡೆದ ಪೆರ್ಡೂರು ಕ್ಷೇತ್ರವು ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟ ದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ಧತಿ ಹಿಂದಿನಿಂದಲೂ ಇದೆ. ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ‌ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ. ಹಿಂದೆ ಪ್ರತಿ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತಾದಿಗಳು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾಥಿಸಿ ವ್ರತಾವರಣೆಯಲ್ಲಿ ಪಾಲ್ಗೋಳ್ಳುತ್ತಾರೆ.

ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದ ಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರಿಗೆ ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ಧಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು , 500 ಬಾಳೆಹಣ್ಣು , ದಿನಕ್ಕೊಂದು ಬಾಳೆಹಣ್ಣು , ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತಗೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಲಕ್ಷಾಂತರ ರೂಪಾಯಿ ವ್ಯಯಿಸಿ ಅಳವಡಿಸಿರುವ ರಬ್ಬರ್‌ ಕೋನ್‌ಗಳ ಪ್ರಸ್ತುತ ಸ್ಥಿತಿ ಹೇಗಿದೆ ಎಂದು ತಿಳಿಯುವ ನಿಟ್ಟಿನಲ್ಲಿ "ಸುದಿನ' ತಂಡವು ರಿಯಾಲಿಟಿ ಚೆಕ್‌ ನಡೆಸಿದೆ....

  • ಮನೆಯ ಸುತ್ತುಮುತ್ತಲಿನಲ್ಲಿ ಬರುವ ಪ್ರತಿಯೊಂದು ಹಕ್ಕಿಗೂ ಅದರದ್ದೇ ಆದ ಚೆಲುವು, ಬೆಡಗು, ಆಕರ್ಷಣೆ. ಅಶ್ವತ್ಥಮರದ ಎಲೆಗಳ ನಡುವೆ ಕುಳಿತಿರುವ ವಸಂತದ ಹಕ್ಕಿ ಕಣ್ಣಿಟ್ಟು...

  • ಭಾರತದ ಗೋಪರಂಪರೆಯಲ್ಲೂ ಹೈನುಗಾರಿಕೆ ತಳಿಗಳಲ್ಲಿ ಗೀರ್‌ ವಿಶಿಷ್ಟ ಸ್ಥಾನ. ಭಾರತೀಯ ಪರಂಪರೆಯಲ್ಲಿ ಹೆಚ್ಚು ಹಾಲು ಕೊಡುವ ತಳಿಗಳಲ್ಲಿ ಇದು ಎರಡನೆಯದು. ಗುಜರಾತಿನ...

  • ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ...

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...