ಅನುಮತಿ ವಿನಾ ಜಾಹೀರಾತು ಪ್ರಸಾರಕ್ಕೆ ಅವಕಾಶವಿಲ್ಲ: ಹೆಪ್ಸಿಬಾ

Team Udayavani, Mar 17, 2019, 3:37 AM IST

ಉಡುಪಿ: ಚುನಾವಣೆ ಪ್ರಯುಕ್ತ ಜಿಲ್ಲೆಯ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತ ಜಾಹೀರಾತುಗಳನ್ನು ಸ್ಥಳೀಯ ಕೇಬಲ್‌ ವಾಹಿನಿಗಳಲ್ಲಿ ಪ್ರಸಾರ ಮಾಡುವ ಮುನ್ನ ಕಡ್ಡಾಯವಾಗಿ ಎಂಸಿಎಂಸಿ ಸಮಿತಿಯ ಅನುಮತಿ ಪಡೆಯಬೇಕು. ಉಲ್ಲಂ ಸುವ ಚಾನೆಲ್‌ಗ‌ಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಅವರು ಶನಿವಾರ ಸ್ಥಳೀಯ ಕೇಬಲ್‌ ವಾಹಿನಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ವೆಚ್ಚವನ್ನು ಪರಿಗಣಿಸಲಾಗುವುದರಿಂದ ಎಲ್ಲ ಕೇಬಲ್‌ ವಾಹಿನಿಗಳು ಜಿಲ್ಲಾಡಳಿತ ನಿಗದಿಪಡಿಸಿದ ದರದಲ್ಲಿಯೇ ಚುನಾವಣೆ ಸಂಬಂಧಿ ಜಾಹೀರಾತುಗಳನ್ನು ಪ್ರಸಾರ ಮಾಡಬೇಕು. ಪ್ರಸಾರ ಮಾಡುವ 3 ದಿನಗಳ ಮುಂಚೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ, ಎಂಸಿಎಂಸಿ ಸಮಿತಿ ಪರಿಶೀಲನೆ ಅನಂತರ ಅನುಮತಿ ಪಡೆದು ಪ್ರಸಾರ ಮಾಡಬೇಕು ಎಂದರು.

ಕೇಬಲ್‌ ವಾಹಿನಿಯ ಎಲ್ಲ ಕಾರ್ಯಕ್ರಮಗಳನ್ನು 24×7 ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸಂಪೂರ್ಣ ರೆಕಾರ್ಡಿಂಗ್‌ ಸಹ ಆಗುತ್ತಿದೆ ಎಂದರು. ಎಡಿಸಿ ವಿದ್ಯಾಕುಮಾರಿ, ಎಂಸಿಎಂಸಿ ಸಮಿತಿಯ ನೋಡೆಲ್‌ ಅಧಿಕಾರಿ ಹಾಗೂ ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್‌ ಷಾ ಹಾಗೂ ವಿವಿಧ ಸ್ಥಳಿಯ ವಾಹಿನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ