ಮಳೆ ಆರಂಭ: ಜಲ ಸಂಕಟ ನೀಗುವ ನಿರೀಕ್ಷೆ

Team Udayavani, Jun 12, 2019, 12:15 PM IST

ಉಡುಪಿ: ಉಡುಪಿ ನಗರಕ್ಕೆ ನೀರು ಪೂರೈಕೆಯಾಗುವ ಸ್ವರ್ಣಾ ನದಿ ಪಾತ್ರದ ಪ್ರದೇಶಗಳಲ್ಲಿ ಕೂಡ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಸಂಜೆಯ ಬಳಿಕ ಮಳೆ ಬಿರುಸಾಗಿದ್ದು, ನಗರದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಮುಕ್ತಿ ದೊರೆಯಲಿದೆ ಎಂಬ ಆಶಾಭಾವನೆ ಬಲವಾಗಿದೆ.

ಸೋಮವಾರ ಮತ್ತು ಮಂಗಳವಾರದ ಮಳೆಯಿಂದ ನೀರಿನ ಹರಿವು ಆರಂಭವಾಗಿಲ್ಲ. ಆದರೆ ಕೆಲವು ಹೊಂಡಗಳಿಗೆ ನೀರು ಸೇರಿದೆ. ನಿರಂತರ ಮಳೆಯಾದರೆ ಒಂದೆರಡು ದಿನಗಳಲ್ಲಿ ನದಿಯಲ್ಲಿ ನೀರಿನ ಹರಿವು ಆರಂಭವಾಗಬಹುದು ಎಂಬ ಅಂದಾಜು ಅಧಿಕಾರಿಗಳದ್ದು.

ಸ್ವರ್ಣಾ ನದಿಯ ಹೆಚ್ಚಿನ ಗುಂಡಿಗಳಲ್ಲಿದ್ದ ನೀರನ್ನು ಪಂಪಿಂಗ್‌ ಮಾಡಿ ಜೂ.9ರ ವರೆಗೆ ಸರಬರಾಜು ಮಾಡಲಾಗಿತ್ತು. ಆದರೆ ಎರಡು ದಿನಗಳಿಂದ ನೀರಿನ ಮಟ್ಟ ತೀರಾ ಕುಸಿದಿದೆ. ಮಂಗಳವಾರ 1 ಮೀ.ನಷ್ಟು ಮಾತ್ರ ನೀರಿತ್ತು. ಮಂಗಳವಾರ ನೀರು ಸರಬರಾಜಾಗಬೇಕಿದ್ದ ಪ್ರದೇಶಗಳ ಪೈಕಿ ಹೆಚ್ಚಿನ ಪ್ರದೇಶಗಳಿಗೆ ನೀರಿನ ಕೊರತೆಯಾಯಿತು. ಜತೆಗೆ ಮಣಿಪಾಲ ಈಶ್ವರನಗರದಲ್ಲಿ ನೀರಿನ ಪೈಪ್‌ ಒಡೆದು ಮತ್ತಷ್ಟು ತೊಂದರೆಯಾಯಿತು.

ತುಂಬೆ: ನೀರಿನ ಮಟ್ಟ ತುಸು ಏರಿಕೆ
ಮಂಗಳೂರು: ಮಂಗಳವಾರ ನೇತ್ರಾವತಿ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಮಂಗಳವಾರ 10 ಸೆಂ.ಮೀ.ನಷ್ಟು ಏರಿಕೆಯಾಗಿದೆ.

ಸೋಮವಾರ ಸಂಜೆ ವೇಳೆಗೆ ನೀರಿನ ಮಟ್ಟ 2.10 ಮೀ. ಇತ್ತು. ಮಂಗಳವಾರ ದಿನಪೂರ್ಣ ಪಂಪಿಂಗ್‌ ಮಾಡಿದ ಬಳಿಕ ಸಂಜೆಯ ವೇಳೆಗೂ ಡ್ಯಾಂನಲ್ಲಿ ನೀರಿನ ಮಟ್ಟ 2.20 ಮೀ. ಇದ್ದ ಹಿನ್ನೆಲೆಯಲ್ಲಿ ನೀರು ಡ್ಯಾಂಗೆ ಹರಿದುಬಂದಿದೆ ಎಂದು ಲೆಕ್ಕ ಹಾಕಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್‌ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...

  • ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....

  • ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...

  • ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...

  • ಇಂದು ದೌರ್ಜನ್ಯಗಳಿಗೆ ಮೇರೆಗಳಿಲ್ಲ. ದೆಹಲಿಯಲ್ಲೋ, ಹೈದರಾಬಾದ್‌ನಲ್ಲೋ ಹೆಣ್ಣಿನ ಮೇಲೆ ಹಾಗಾಯ್ತಲ್ಲ ಎನ್ನುತ್ತಾ ಕಳವಳಿಸುತ್ತಿರುವಾಗಲೇ, ಬೆಂಗಳೂರಿನಲ್ಲಿ...