ಏ.27; ಆಸ್ಟ್ರೋ ಮೋಹನ್ ಅವರ “ಎ ಡೇ ವಿದ್ ಸೈಂಟ್ ದೆನ್ ಆ್ಯಂಡ್ ನೌ” ಪುಸ್ತಕ ಬಿಡುಗಡೆ

Team Udayavani, Apr 24, 2019, 7:15 PM IST

ಉಡುಪಿ: ಉದಯವಾಣಿ ದೈನಿಕದ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಅವರ ಕುರಿತ  “ಎ ಡೇ ವಿದ್ ಸೈಂಟ್ ಕಾಫಿ ಟೇಬಲ್” ಶೀರ್ಷಿಕೆಯಲ್ಲಿ 2002 ಮತ್ತು 2018ರ ಸಂದರ್ಭದಲ್ಲಿ ಸೆರೆಹಿಡಿದ ಆಯ್ದ ಚಿತ್ರ ಸಂಪುಟದ ಬಿಡುಗಡೆ ಏಪ್ರಿಲ್ 27ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಲೋಕಾರ್ಪಣೆಯಾಗಲಿದೆ.

27ರ ಸಂಜೆ 4ಗಂಟೆಗೆ ಸಮಾರಂಭ ಆರಂಭವಾಗಲಿದ್ದು, ವರ್ಣಮಯ ಚಿತ್ರ ಸಂಪುಟ ಬಿಡುಗಡೆ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಆಶೀರ್ವದಿಸಲಿದ್ದಾರೆ. ಕರ್ನಾಟಕ ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಅವರು ಚಿತ್ರ ಸಂಪುಟ ಬಿಡುಗಡೆ ಮಾಡಲಿದ್ದಾರೆ. ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಸಂಧ್ಯಾ ಎಸ್.ಪೈ ಅಧ್ಯಕ್ಷತೆ ವಹಿಸಲಿದ್ದಾರೆ.

ಮಣಿಪಾಲ ವಿವಿಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಮೋಹನ್ ಆಳ್ವ ಹಾಗೂ ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಆಸ್ಟ್ರೋ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ