ಕೊಲೆ ಕೇಸಿಗೆ “ನಿರೀಕ್ಷಣಾ ಜಾಮೀನು’ ನೀಡಿದ ಅಪರೂಪದ ನಿದರ್ಶನ


Team Udayavani, Aug 28, 2019, 9:58 AM IST

Kumtiberu

ಕುಂದಾಪುರ, ಆ. 27: ಯಡಮೊಗೆ ಗ್ರಾಮದ ಕುಮಿrಬೇರುವಿನಲ್ಲಿ ಜು. 11ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ 1 ವರ್ಷ 3 ತಿಂಗಳು ಪ್ರಾಯದ ಹೆಣ್ಣು ಮಗು ಸಾನ್ವಿಕಾ ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕ ರ ಣದ ಆರೋಪಿ ತಾಯಿ ರೇಖಾ ನಾಯ್ಕಗೆ ಮಂಗಳವಾರ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಇದರೊಂದಿಗೆ ಕೊಲೆ ಪ್ರಕರಣವೊಂದಕ್ಕೆ ಆರೋಪಿಯೊಬ್ಬರಿಗೆ ನಿರೀಕ್ಷಣಾ ಜಾಮೀನು ಡುತ್ತಿರುವುದು ಅಪರೂಪದಲ್ಲಿ ಅಪರೂಪದ ನಿದರ್ಶನವಾಗಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ.ಜೋಷಿಯವರು ಆರೋಪಿ ರೇಖಾ ನಾಯ್ಕಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂತೋಷ್‌ ನಾಯ್ಕ ಅವರ ಪುತ್ರಿ ಸಾನ್ವಿಕಾ ಜು. 11ರಂದು ಮಗು ನಾಪತ್ತೆ ಪ್ರಕರಣ ದಾಖಲಾಗಿದ್ದರೆ, ಜು. 13ರಂದು ಮನೆಯ ಸಮೀಪದ ಹೊಳೆಯಲ್ಲಿ ಮೃತದೇಹ ಸಿಕ್ಕಿದ ಬಳಿಕ, ತಾಯಿ ರೇಖಾ ನಾಯ್ಕ ವಿರುದ್ಧವೇ ಶಂಕರನಾರಾಯಣ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಕಲಂ 302, 307 ಮತ್ತು 309 ಐಪಿಸಿ ಅಡಿಯಲ್ಲಿ ಪೊಲೀಸರು ಕೇಸು ದಾಖಲಾಗಿತ್ತು. ಆರೋಪಿ ಪರ ಕುಂದಾಪುರದ ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ ವಾದಿಸಿದ್ದರು.

ಘಟನೆಯೇನು?
ಮಗುವಿನ ಮೃತದೇಹ ಪತ್ತೆಯಾಗುವವರೆಗೂ ತಾಯಿಯೇ ಹೇಳಿದಂತೆ ಯಾರೋ ಅಪಹರಣ ಮಾಡಿಕೊಂಡು, ನದಿಯಾಚೆ ದಾಟಿ ಹೋಗಿದ್ದಾರೆ ಎನ್ನುವುದೇ ನಿಜವಾಗಿತ್ತು. ಆದರೆ ಎಸ್‌ಪಿ ನಿಶಾ ಜೇಮ್ಸ್‌ ಖುದ್ದು ದಿನವಿಡೀ ಅಲ್ಲಿಯೇ ಮೊಕ್ಕಾಂ ಹೂಡಿ, ಡಿವೈಎಸ್‌ಪಿ ದಿನೇಶ್‌ ಕುಮಾರ್‌ ನೇತೃತ್ವದಲ್ಲಿ ವಿಚಾರಣೆ ನಡೆಸಿದಾಗ ಪ್ರಕರಣದ ಚಿತ್ರಣವೇ ಬದಲಾಗಿತ್ತು.

“ಜು. 11ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಸಾಯಬೇಕು ಎನ್ನುವ ಉದ್ದೇಶದಿಂದಲೇ 5 ವರ್ಷದ ಮಗ ಸಾತ್ವಿಕ್‌ ಹಾಗೂ ಪುತ್ರಿ ಸಾನ್ವಿಕಾಳನ್ನು ಎತ್ತಿಕೊಂಡು ಮನೆಯ ಪಕ್ಕದ ಕುಬ್ಜಾ ನದಿಗೆ ಇಳಿದಿದ್ದು, ಆ ಸಮಯ ಬಲಕೈಯಲ್ಲಿದ್ದ ಮಗು ಸಾನ್ವಿಕಾಳು ಕೈಯಿಂದ ಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಆ ಮಗುವನ್ನು ಹಿಡಿಯಲು ಹೋದಾಗ ಇನ್ನೊಂದು ಕೈಯಲ್ಲಿದ್ದ ಗಂಡು ಮಗ ಸಾತ್ವಿಕ್‌ನೊಂದಿಗೆ ಹೊಳೆಯ ನೀರಿನಲ್ಲಿ ಸುಮಾರು ದೂರ ಕೊಚ್ಚಿ ಹೋಗಿದ್ದು, ಕಷ್ಟಪಟ್ಟು ಗಂಡು ಮಗುವಿನೊಂದಿಗೆ ನಾನು ದಡ ಸೇರಿದೆ. ಆದರೆ ಹೆಣ್ಣು ಮಗು ಸಾನ್ವಿಕಾ ಹೊಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುತ್ತಾಳೆ. ಇದರಿಂದ ಭಯಗೊಂಡ ನಾನು ಮಗು ಅಪಹರಣದ ನಾಟಕ ಆಡಿದ್ದೆ’ ಎಂದು ರೇಖಾ ಪೊಲೀಸರಿಗೆ ಹೇಳಿಕೆ ನೀಡಿದ್ದರು.

ವಕೀಲರ ವಾದವೇನು?
ಕೊಲೆ ಪ್ರಕರಣದ ಆರೋಪಿಗೆ ಜಾಮೀನು ನೀಡಬಾರದು ಎನ್ನುವುದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಾದವಾಗಿದ್ದರೆ, ಪ್ಯೂಪೇರಿಯಂ (ಬಾಣಂತನವಾದ ನಂತರ ಕೆಲವು ಸ್ತ್ರೀಯರಲ್ಲಿ ಕಾಣಿಸುವ ಮನೋರೋಗ) ಎನ್ನುವ ಮನೋ ರೋಗದಿಂದ ಬಳಲುತ್ತಿದ್ದುದರಿಂದ ತಾಯಿ ರೇಖಾ ತನ್ನ ಮಗುವನ್ನು ಕೊಲೆ ಮಾಡಿರುವುದಾಗಿ ಆರೋಪಿ ಪರ ವಕೀಲರು ನ್ಯಾಯಾಧೀಶರ ಮುಂದೆ ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.