ಕಾರ್ಕಳ: ಅಂಗನವಾಡಿಗಳಲ್ಲಿ ಪುಟಾಣಿಗಳ ಸಂಖ್ಯೆ ಇಳಿಮುಖ

Team Udayavani, Jul 12, 2019, 5:51 AM IST

ಕಾರ್ಕಳ: ಬಡವರ ಮಕ್ಕಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಬೇಕೆನ್ನುವ ನಿಟ್ಟಿನಲ್ಲಿ ಸರಕಾರ ಆಯ್ದ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಪುಟಾಣಿಗಳ ದಾಖಲಾತಿ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಸರಕಾರ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಗ್ರೀನ್‌ ಸಿಗ್ನಲ್ ನೀಡುತ್ತಿದ್ದಂತೆ ಎಸ್‌ಡಿಎಂಸಿ ವತಿಯಿಂದ ಸರಕಾರದ ಸಹಕಾರದೊಂದಿಗೆ ಆ ಶಾಲೆಗಳಲ್ಲಿ ಎಲ್ಕೆಜಿ ತರಗತಿ ಆರಂಭಿಸಿರುವುದೇ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗಲು ಕಾರಣವಾಗಿದೆ.

ಕಾರ್ಕಳ ತಾಲೂಕಿನಲ್ಲಿ ಒಟ್ಟು 230 ಅಂಗನವಾಡಿ ಕೇಂದ್ರಗಳಿವೆ. ಎಲ್ಕೆಜಿ ಪ್ರಾರಂಭಿಸಿದ ಶಾಲೆಗಳ ಆಸುಪಾಸಿನ ಅಂಗನವಾಡಿಗಳಲ್ಲಿ ಮಕ್ಕಳ ದಾಖಲಾತಿ ಮೇಲೆ ನೇರ ಪರಿಣಾಮ ಬೀರಿದೆ. ಹೆತ್ತವರೂ ಅಂಗನವಾಡಿ ಬದಲಾಗಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವತ್ತ ಉತ್ಸುಕರಾಗಿದ್ದಾರೆ ಎನ್ನುವುದು ದಾಖಲಾತಿ ಪ್ರಮಾಣ ಸಾಬೀತು ಪಡಿಸಿದೆ. ತಾಲೂಕಿನ 4 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಲಾಗಿದ್ದು, 137 ಮಕ್ಕಳು ಎಲ್ಕೆಜಿಗೆ ದಾಖಲಾಗಿದ್ದಾರೆ. ಕನ್ನಡ ಮಾಧ್ಯಮಕ್ಕೆ ಈ ಶಾಲೆಗಳಲ್ಲಿ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ ಕೇವಲ 47.

ತಾಲೂಕಿನ ಸ.ಹಿ.ಪ್ರಾ.ಶಾಲೆಗಳಾದ ಪೆರ್ವಾಜೆ, ಹೆಬ್ರಿ, ಹೊಸ್ಮಾರು ವಿನಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಗೊಂಡಿದ್ದು, ಮುನಿಯಾಲು ಶಾಲೆ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆಗಿ ಮಾರ್ಪಾಡಗಿದೆ. ಹೀಗಾಗಿ ಒಂದೇ ಸೂರಿನಡಿ ಎಲ್ಕೆಜಿಯಿಂದ 12ನೇ ತರಗತಿ ತನಕ ಆಂಗ್ಲ ಮಾಧ್ಯಮ ಶಿಕ್ಷಣ ಮುನಿಯಾಲು ಶಾಲೆಯಲ್ಲಿ ದೊರೆಯಲಿದೆ.

ಶಾಲೆಗಳು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಟ್ಟರೆ, ಅಂಗನವಾಡಿ ಕೇಂದ್ರಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೊಳಪಡುತ್ತವೆ. ಆದ್ದರಿಂದ ಇಲಾಖೆಗಳ ನಡುವೆ ಸಮನ್ವಯತೆ ಸಾಧ್ಯವಾಗುತ್ತಿಲ್ಲ. 1975ರಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭಗೊಂಡಿದ್ದು, ಅಂದಿನಿಂದ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸುವಲ್ಲಿ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರವಹಿಸಿವೆ. ಇದೀಗ ಸರಕಾರದ ಹೊಸ ಶಿಕ್ಷಣ ನೀತಿಯಿಂದಾಗಿ ಕ್ರಮೇಣ ಅಂಗನವಾಡಿಯ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎನ್ನುವ ಮಾತುಗಳಿವೆ.

ಅಂಗನವಾಡಿಯಲ್ಲೇ ಎಲ್ಕೆಜಿ ಪ್ರಾರಂಭಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಈಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಂಗ್ಲಿಷ್‌ ಕುರಿತು ತರಬೇತಿ ನೀಡಿ ಅಥವಾ ಹೊಸದಾಗಿ ಶಿಕ್ಷಕರನ್ನು ನೇಮಕ ಮಾಡುವಂತೆ ನೌಕರರ ಸಂಘಟನೆಯವರು ಆಗ್ರಹಿಸುತ್ತಿದ್ದಾರೆ.

ಸಮನ್ವಯತೆ ಕೊರತೆ

ನೌಕರರ ಆಗ್ರಹ

ಆಂಗ್ಲ ಮಾಧ್ಯಮ, ಕರ್ನಾಟಕ ಪಬ್ಲಿಕ್‌ ಸ್ಕೂಲ್ನ ಪಕ್ಕದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿಯಲ್ಲಿ ಇಳಿಮುಖವಾಗಿದೆ. ಅಂಗನವಾಡಿಯಲ್ಲೇ ಮಕ್ಕಳಿಗೆ ಎಲ್ಕೆಜಿ ಶಿಕ್ಷಣ ನೀಡುವಂತೆ ನೌಕರರು ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
– ಕುಮಾರ್‌, ಸಿಡಿಪಿಒ ಕಾರ್ಕಳ
ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ

ಅಂಗನವಾಡಿಯಲ್ಲೇ ಎಲ್ಕೆಜಿ ಪ್ರಾರಂಭಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಈಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಂಗ್ಲಿಷ್‌ ಕುರಿತು ತರಬೇತಿ ನೀಡಿ ಅಥವಾ ಹೊಸದಾಗಿ ಶಿಕ್ಷಕರನ್ನು ನೇಮಕ ಮಾಡುವಂತೆ ನೌಕರರ ಸಂಘಟನೆಯವರು ಆಗ್ರಹಿಸುತ್ತಿದ್ದಾರೆ.

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ