ಕುಂದಾಪುರ:  ಜನರ ಬೇಡಿಕೆಗಳು ಹತ್ತು ಹಲವು


Team Udayavani, Apr 22, 2018, 6:05 AM IST

Namma-Pranalike-600.jpg

ಉಡುಪಿ ಜಿಲ್ಲೆಯ ಅತಿ ದೊಡ್ಡ ವಿಧಾನಸಭಾ ಕ್ಷೇತ್ರ ಎನ್ನುವ ಹೆಗ್ಗಳಿಕೆಯ ಕುಂದಾಪುರದಲ್ಲಿ ಬಹುಮುಖ್ಯವಾಗಿ ಆಗಲೇಬೇಕಾದ
ಬೇಡಿಕೆಗಳ ಪಟ್ಟಿ ಇಲ್ಲಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ-ತುಳುನಾಡಿನ ನಡುವೆ ಕೊಂಡಿಯಂತಿರುವ ಇಲ್ಲಿ ಪ್ರವಾಸೋದ್ಯಮ, ವಾರಾಹಿ, ಅರಣ್ಯ ಹೀಗೆ ಈಡೇರಬೇಕಾದ ಬೇಡಿಕೆಗಳಿರುವ ಹಲವು ರಂಗಗಳಿವೆ.

ಫ್ಲೆ ಓವರ್‌
ಕಾಮಗಾರಿ ಆರಂಭವಾಗಿ 5 ವರ್ಷ ಕಳೆದರೂ ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿ ಫ್ಲೆ$çಓವರ್‌ ಕಾಮಗಾರಿ ಚುರುಕುಗೊಂಡಿಲ್ಲ. ಈ ಕಾರ್ಯ ಪೂರ್ಣಗೊಳ್ಳದೆ ಕುಂದಾಪುರ ಪೇಟೆ ಭಾಗದ ಅಭಿವೃದ್ಧಿಯೂ ಕುಂಠಿತಗೊಂಡಿದೆ.

ಹೆದ್ದಾರಿ ವಿಸ್ತರಣೆ
ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಕಾರಣ ಸಂಚಾರ ಸಮಸ್ಯೆ ಗಂಭೀರವಾಗಿದೆ. ಕೆಲವು ಕಡೆ ಅಪಘಾತ ಗಳೂ ಸಂಭವಿಸುತ್ತಿವೆ. ಕೆಲಸ ಚುರುಕಾಗಬೇಕಿದೆ.

ಗಂಗೊಳ್ಳಿ- ಕೋಡಿ ಸೇತುವೆ
ಕುಂದಾಪುರದಿಂದ ಗಂಗೊಳ್ಳಿಗೆ ರಸ್ತೆಯಲ್ಲಿ 15 ಕಿ.ಮೀ. ಕ್ರಮಿಸಬೇಕು. ಕೋಡಿ- ಗಂಗೊಳ್ಳಿ ಸೇತುವೆ ನಿರ್ಮಾಣವಾದರೆ ಕುಂದಾಪುರ – ಗಂಗೊಳ್ಳಿ ಸಂಪರ್ಕ ಇನ್ನಷ್ಟು ಹತ್ತಿರವಾಗಲಿದೆ. ಮೀನುಗಾರಿಕೆಗೂ ಪ್ರಯೋಜನವಾಗಲಿದೆ.

ಆರ್‌ಟಿಒ ಕಚೇರಿ
ಜನರು ವಾಹನ ನೋಂದಣಿಗೆ ಕುಂದಾಪುರ ದಿಂದ 45 ಕಿ.ಮೀ., ಬೈಂದೂರಿನಿಂದ 75 ಕಿ.ಮೀ. ದೂರದ ಮಣಿಪಾಲಕ್ಕೆ ಹೋಗಬೇಕು. ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ (ಆರ್‌ಟಿಒ) ಕಚೇರಿ ಅತ್ಯಂತ ಜರೂರಾಗಿ ಆಗಬೇಕು.

ಮಹಿಳಾ ಠಾಣೆ
ಹಿಂದೆ ಇದ್ದ ಮಹಿಳಾ ಪೊಲೀಸ್‌ ಠಾಣೆ ಯನ್ನು ಉಡುಪಿಗೆ ವರ್ಗಾಯಿಸಿದ್ದು, ಈಗ ಮತ್ತೆ ಇಲ್ಲಿ ಮಹಿಳಾ ಸಂಬಂಧಿ ದೂರು, ಪ್ರಕರಣ ಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮತ್ತೆ ಮಹಿಳಾ ಠಾಣೆಗೆ ಬೇಡಿಕೆ ಕೇಳಿಬಂದಿದೆ.

ವಾರಾಹಿ “ಮುಕ್ತಿ ‘ ಸಿಗಬಹುದೇ?
ಮೂರು ದಶಕಗಳಿಂದ ನನೆಗುದಿಗೆ ಬಿದ್ದಿ ರುವ ಬಹುಕೋಟಿ ರೂ. ವೆಚ್ಚದ ವಾರಾಹಿ ನದಿ ನೀರಿನ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಂಡರೆ ಸಿದ್ದಾಪುರ, ಶಂಕರನಾರಾಯಣ ಭಾಗದ ಕೃಷಿ ಭೂಮಿಗೆ ಅನುಕೂಲವಾಗಲಿದೆ. 

ಮೀನುಗಾರಿಕೆಗೆ ಒತ್ತು
ಕುಂದಾಪುರದ 15,000ಕ್ಕೂ ಅಧಿಕ ಮಂದಿ ಮೀನುಗಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಜೆಟ್ಟಿ ವಿಸ್ತರಣೆ, ಜೆಟ್ಟಿ , ಕೆರೆಯಂತಹ ಒಳನಾಡು ಮೀನುಗಾರಿಕೆಗೆ ಪ್ರಾತಿನಿಧ್ಯ ಸಿಗುತ್ತಿಲ್ಲ. ಐಸ್‌ ಪ್ಲಾಂಟ್‌, ಸಂಸ್ಕರಣ ಘಟಕಗಳು ಹೆಚ್ಚಾಗಬೇಕು.

ಸಿಆರ್‌ಝಡ್‌ ಸಮಸ್ಯೆ
ಕುಂದಾಪುರದ ಹೆಚ್ಚಿನ ಭಾಗ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ವ್ಯಾಪ್ತಿಯಲ್ಲಿರುವುದರಿಂದ ನಿರ್ಮಾಣ ಕಾರ್ಯಗಳಿಗೆ ತೊಡಕಾಗಿದೆ. ಸಿಆರ್‌ಝಡ್‌ ಪ್ರದೇಶವನ್ನು ಸರಿಯಾದ ರೀತಿಯಲ್ಲಿ ಶೀಘ್ರ ಗುರುತಿಸಬೇಕಿದೆ.

ಸರಕಾರಿ ಎಂಜಿನಿಯರಿಂಗ್‌ ಕಾಲೇಜು
ತಾಲೂಕಿನಲ್ಲಿ ಕೇವಲ ಒಂದು ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಇದೆ. ಸರಕಾರಿ ಕಾಲೇಜಿನ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿ ಗಳು ಎಂಜಿನಿಯರಿಂಗ್‌ನಲ್ಲಿ ಆಸಕ್ತಿ ಇದ್ದರೂ ಶಿಕ್ಷಣ ಪಡೆಯಲು ಅಸಾಧ್ಯವಾಗಿದೆ.

ಪುರಭವನ ಬೇಕು
ಸಾಕಷ್ಟು ನಾಟಕ, ಸಭೆ, ಸಮಾರಂಭಗಳು ನಡೆಯುತ್ತಿದ್ದರೂ ತಾಲೂಕು ಕೇಂದ್ರವಾಗಿ ರುವ ಕುಂದಾಪುರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲು ಪುರಭವನದ‌ಂತಹ ಸರಿಯಾದ ವೇದಿಕೆಗಳಿಲ್ಲ.

ರಸಗೊಬ್ಬರ ದಾಸ್ತಾನು ಕೇಂದ್ರ
ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ರಸಗೊಬ್ಬರ ದಾಸ್ತಾನು ಕೇಂದ್ರ ನಿರ್ಮಾಣವಾಗಬೇಕಿದೆ. ಸಕಾಲದಲ್ಲಿ ಸೂಕ್ತ ರಸಗೊಬ್ಬರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಾಗದೆ ಕೃಷಿಕರಿಗೆ ಸಮಸ್ಯೆಯಾಗಿದೆ.

ಡೀಮ್ಡ್ ಫಾರೆಸ್ಟ್‌
ಡೀಮ್ಡ್ ಫಾರೆಸ್ಟ್‌ ಸಮಸ್ಯೆಯಿಂದಾಗಿ ಈ ಭಾಗದ ಜನತೆ ಗೃಹ ನಿರ್ಮಾಣಕ್ಕೆ ಪಡಿಪಾಟಲು ಅನುಭವಿಸುತ್ತಿದ್ದಾರೆ. ಕೂಡಲೇ ಈ ಬಗ್ಗೆ ಸ್ಪಂದಿಸಿ ಸಮಸ್ಯೆ ನಿವಾರಿಸಿ ಜನರ ಸ್ವಂತ ಮನೆ ಕನಸನ್ನು ನನಸಾಗಿಸಬೇಕು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.