ಮಾಲಾಡಿ: ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿ: ಮೂರನೇ ಹೆಣ್ಣು ಚಿರತೆ ಸೆರೆ


Team Udayavani, Dec 12, 2019, 11:41 AM IST

C-1

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್ ಮಾವಿನ ತೋಪಿನಲ್ಲಿ ಕಳೆದ ಹಲವು ದಿನಗಳಿಂದಲೂ ಚಿರತೆ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಅರಣ್ಯಾ ಇಲಾಖೆ ಚಿರತೆ ಸೆರೆ ಹಿಡಿಯಲು ಮಾಲಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಬಳಿ ಬೋನ್ ಇರಿಸಿ ಸತತವಾಗಿ ಒಂದು ತಿಂಗಳುಗಳ ಕಾಲ ಕಾರ್ಯಾಚರಣೆ ನಡೆಸಿದ ಫಲವಾಗಿ ಡಿ.12 ರಂದು ಹೆಣ್ಣು ಚಿರತೆ ಸೆರೆ ಬಿದ್ದಿದ್ದು, ಒಂದೇ ಕಡೆಯಲ್ಲಿ ಮೂರನೇ ಚಿರತೆ ಯೊಂದು ಸೆರೆಯಾದಂತಾಗಿದೆ.

ಬೋನ್‌ನಲ್ಲಿ ಸೆರೆಯಾದ ಚಿರತೆ, ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿರುವ ಸಾರ್ವಜನಿಕರು: ಚಿರತೆ ವೊಂದು ಬೋನಿನಲ್ಲಿ ಸೆರೆಯಾಗಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಸ್ಥಳದಲ್ಲಿ ಪರಿಸರದ ನೂರಾರು ಮಂದಿ ಜಮಾಯಿಸಿ ಕಾತುರದಿಂದ ವೀಕ್ಷಿಸುತ್ತಿರುವ ದೃಶ್ಯ ಸಾಮನ್ಯವಾಗಿ ಕಂಡು ಬಂತು. ಈ ಸಂದ‘ರ್ದಲ್ಲಿ ನೆರೆದವರು  ಬೋನಿನಲ್ಲಿರುವ ಚಿರತೆಯ ದೃಶ್ಯವನ್ನು ತಮ್ಮ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿಯುವ ತವಕದಲ್ಲಿದ್ದರು.

ಗ್ರಾ.ಪಂ.ನ ಸಹಕಾರ: ಗ್ರಾಮಸ್ಥರಿಂದ ದೂರು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸ್ಥಳೀಯಾಡಳಿತ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಚಿರತೆಯ ಹೆಜ್ಜೆ ಗುರುತು ಇರುವ ಸಮೀಪದಲ್ಲಿಯೇ ಬೋನ್ ಇರಿಸಿದರು ಒಂದೆಡೆ ನಾಯಿ ಮರಿಯನ್ನು ಬೋನಿನಲ್ಲಿ ಇರಿಸಿ, ಸ್ಥಳೀಯರಾದ ಸುರೇಶ್ ದೇವಾಡಿಗ ಮತ್ತು ಸತೀಶ್ ದೇವಾಡಿಗ ಅವರ ಸಹಕಾರದಿಂದ ಚಿರತೆ ಬೋನಿಗೆ ಬಿದ್ದಿದ್ದು ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿಗೊಳಿಸಿದಂತಾಗಿದೆ.

ನಿರಂತರ ಒಂದು ತಿಂಗಳ ಕಾರ್ಯಾಚರಣೆ : ಈ ಹಿಂದೆ ಆ.4 ,2018 , ಅ.6, 2019, ಡಿ.12, 2019 ಸೇರಿದಂತೆ ಇದೇ ಸ್ಥಳದಲ್ಲಿ ಇರಿಸಿದ ಬೋನ್‌ಗೆ ಮೂರು ಚಿರತೆಗಳು ಸೆರೆಯಾದಂತಾಗಿದೆ.

ಮತ್ತೆ ಚಿರತೆ ಮರಿಗಳ ಸಂಚಾರ ?: ಗ್ರಾ.ಪಂ.ಮಾಲಾಡಿ, ಸುಳಿಗುಂಡಿ ಹಾಗೂ ಅಸೋಡು ಪರಿಸರದಲ್ಲಿ ಚಿರತೆ ಸಂಚಾರವಿದೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ ಮೂರು ಕರು ಸೇರಿದಂತೆ ಪರಿಸರದಲ್ಲಿರುವ ನಾಯಿ ಮರಿಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಸ್ಥಳೀಯರು ಆತಂಕದ ನೆರಳಿನಲ್ಲಿ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.