ಸಂಗಮ್‌: ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಭೇಟಿ

Team Udayavani, Jun 21, 2019, 11:58 AM IST

kundapura-tdy-3..

ಸಂಗಮ್‌ ಜಂಕ್ಷನ್‌ಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಭೇಟಿ ನೀಡಿದರು.

ಕುಂದಾಪುರ, ಜೂ. 20: ಇಲ್ಲಿನ ಪುರಸಭೆ ವ್ಯಾಪ್ತಿಯ ಸಂಗಮ್‌ ಜಂಕ್ಷನ್‌ ಬಳಿಯ ಚರಂಡಿ ಸಮಸ್ಯೆ ಕುರಿತಂತೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಬರೆದ ಮನವಿ ಪತ್ರಕ್ಕೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಸ್ಪಂದಿಸಿದ್ದು, ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಮಸ್ಯೆ ಪರಿಹರಿಸುವ ಭರವಸೆಯಿತ್ತರು.

ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಭೇಟಿ ನೀಡಿ, ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐಆರ್‌ಬಿ ಸಂಸ್ಥೆಯ ಅಧಿಕಾರಿಗಳಿಂದ ಅಹವಾಲು ಸ್ವೀಕರಿಸಿದರು.

ಸಂಗಮ್‌ ಜಂಕ್ಷನ್‌ ಬಳಿ ಚಿಕ್ಕನ್‌ ಸಾಲ್ ರಸ್ತೆಯಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗದೆ, ಅಲ್ಲೇ ನಿಂತು ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಇದಕ್ಕೆ ಸಂಗಮ್‌ ಕ್ರಾಸ್‌ ಬಳಿಯಿಂದ ಹೊಳೆಯವರೆಗೆ ಚರಂಡಿಯ ತಳ ಮಟ್ಟವನ್ನು ಇನ್ನು ಒಂದು ಫೀಟು ಇಳಿಸುವಂತೆ ಹಾಗೂ ಈ ಬಗ್ಗೆ ಈ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಹೆದ್ದಾರಿ ಇಲಾಖೆಯ ನಿರ್ದೇಶಕರು ಐಆರ್‌ಬಿ ಅಧಿಕಾರಿಗಳಿಗೆ ಆದೇಶ ನೀಡಿದರು.

ಸಂಗಮ್‌ ಜಂಕ್ಷನ್‌ ಬಳಿ ಚರಂಡಿ ಯಲ್ಲಿ ನೀರು ನಿಲ್ಲುವುದರಿಂದ ಕೃತಕ ನೆರೆ ಸೃಷ್ಟಿಯಾಗಿ ಸಮಸ್ಯೆಯಾಗುತ್ತದೆ ಎನ್ನುವ ಕುರಿತು ಶಾಸಕರು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧೀಕ್ಷಕರ ಅಭಿಯಂತರರಿಗೆ ಪತ್ರ ಬರೆದಿದ್ದರು. ಇದರ ಪ್ರತಿಯನ್ನು ಸಂಸದೆ ಶೋಭಾ ಕರಂದ್ಲಾಜೆ ಅವರ ಮೂಲಕ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೂ ಕಳುಹಿಸಲಾಗಿತ್ತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್‌. ಎಸ್‌. ಮಧುಕೇಶ್ವರ್‌ ಅವರು ಚರಂಡಿ ಸಮಸ್ಯೆ ಕುರಿತಂತೆ ವಿವರಿಸಿದರು.

ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪುರಸಭೆ ಸದಸ್ಯರಾದ ಸಂತೋಷ್‌ ಶೆಟ್ಟಿ, ಶ್ರೀಧರ್‌ ಶೇರೆಗಾರ್‌, ಎಂಜಿನಿಯರ್‌ ನಯನಾ ತಾರಾ, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ, ಎಸ್‌ಐ ಹರೀಶ್‌ ಆರ್‌. ನಾಯ್ಕ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು, ಸಮಸ್ಯೆ ಬಗ್ಗೆ ತಿಳಿಸಿದರು.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.