ಚಲಿಸುವ ರೈಲಿನಲ್ಲಿ ಮಾನಭಂಗ ಯತ್ನ: ಆರೋಪಿ ಪೊಲೀಸ್‌ ವಶಕ್ಕೆ

Team Udayavani, Oct 24, 2019, 2:39 AM IST

ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಬೆಂಗಳೂರಿನ ಮಂಜು.

ಕಡಬ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ, ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು (27) ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಬ್ರಹ್ಮಣ್ಯ ರೋಡ್‌ (ನೆಟ್ಟಣ) – ಮಂಗಳೂರು ರೈಲಿನಲ್ಲಿ ನೆಟ್ಟಣ – ಕೋಡಿಂಬಾಳ ನಡುವೆ ಬುಧವಾರ ಸಂಭವಿಸಿದೆ.

ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು, ಮಹಿಳೆ ಒಬ್ಬರೇ ಇದ್ದುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹೆದರಿದ ಮಹಿಳೆಯು ಚೈನ್‌ ಎಳೆದು ರೈಲನ್ನು ನಿಲ್ಲಿಸಿದ್ದು, ಕೂಡಲೇ ಆರೋಪಿಯು ರೈಲಿನಿಂದ ಹಾರಿ ಪರಾರಿಯಾದ. ಬಳಿಕ ಆತನನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಬ್ಬರಿದ್ದರು?
ಈ ನಡುವೆ ಮಾನಭಂಗಕ್ಕೆ ಯತ್ನಿಸಿದ್ದ ವೇಳೆ ಇಬ್ಬರಿದ್ದು, ಓರ್ವ ಬಜಕೆರೆ ರೈಲು ನಿಲ್ದಾಣದಲ್ಲಿ ಇಳಿದು ನೆಟ್ಟಣ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾನೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಹರಡಿತ್ತು. ಆ ವೇಳೆ ಮೂಜೂರು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಲ ನಿವಾಸಿ ಬಬು ಎಂಬಾತನನ್ನು ಕೂಡ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಆತನನ್ನು ವಿಚಾರಿಸಿದಾಗ, ತಾನು ಕೂಲಿ ಕಾರ್ಮಿಕನಾಗಿದ್ದು, ಘಟನೆಗೂ ತನಗೂ ಸಂಬಂಧವಿಲ್ಲ ಎಂದು ಆತ ತಿಳಿಸಿರುವುದಾಗಿ ತಿಳಿದು ಬಂದಿದೆ. ಆದರೆ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಪೊಲೀಸರು ಪುತ್ತೂರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ