ಜಮ್ಮುಕಾಶ್ಮೀರ: ಭದ್ರತಾ ಪಡೆಗಳು-ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರನ ಹತ್ಯೆ
Team Udayavani, Apr 17, 2020, 8:42 AM IST
ಜಮ್ಮುಕಾಶ್ಮೀರ: ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಡೈರೂ ಕೀಗಮ್ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದ ಪೊಲೀಸ್, ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ತಂಡದಿಂದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಿತ್ತು.
ಈ ವೇಳೆ ಉಗ್ರರು ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದೆ.
2-3 ಉಗ್ರರು ಈ ಪ್ರದೇಶದಲ್ಲಿ ಸೆರೆಸಿಕ್ಕಿದ್ದಾರೆಂದು ಪ್ರಾಥಮಿಕವಾಗಿ ವರದಿಯಾಗಿದ್ದು ಇನ್ನೂ ಖಚಿತವಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು