ತುರ್ತು ಅಗತ್ಯಕ್ಕೆ 15,000 ಆಮ್ಲಜನಕ ಸಾಂದ್ರಕಗಳ ಖರೀದಿ: ಡಿಸಿಎಂ


Team Udayavani, May 9, 2021, 8:14 PM IST

ತುರ್ತು ಅಗತ್ಯಕ್ಕೆ 15,000 ಆಮ್ಲಜನಕ ಸಾಂದ್ರಕಗಳ ಖರೀದಿ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಒದಗಿಸಲು ಕೂಡಲೇ 15,000 ಆಮ್ಲಜನಕ ಸಾಂದ್ರಕಗಳನ್ನು (oxygen concentrator) ಖರೀದಿ ಮಾಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಆಮ್ಲಜನಕ ಕೊರತೆ ಎದುರಿಸುತ್ತಿರುವ “ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ”ಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಯದುಗಿರಿ ಯತಿರಾಜ ಮಠದ ಶ್ರೀ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಚಾಲನೆ ನೀಡಿದ ನಂತರ ಅವರು ಈ ವಿಷಯ ತಿಳಿಸಿದರು.

ತತ್‌ಕ್ಷಣವೇ ಯಾರ ಬಳಿ ಸ್ಟಾಕ್ ಇದ್ದರೆ ಅವರಿಂದ 5,000 ಸಾಂದ್ರಕಗಳನ್ನು ಖರೀದಿಸುತ್ತೇವೆ.  ಉಳಿದ 10,000 ಸಾಂದ್ರಕಗಳ ಖರೀದಿಗೆ ತಕ್ಷಣವೇ ಟೆಂಡರ್‌ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಲ್ಲೇಶ್ವರಕ್ಕೆ 70, ಕೋಲಾರಕ್ಕೆ 20:

ಮಲ್ಲೇಶ್ವರದಲ್ಲಿ ಭಾನುವಾರ ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರು 70 ಆಮ್ಲಜನಕ ಸಾಂದ್ರಕಗಳನ್ನು ಕ್ಷೇತ್ರದ ಜನರ ಸೇವೆಗೆ ಮುಕ್ತಗೊಳಿಸಿದರು. ನಂತರ ಡಿಸಿಎಂ ಅವರು ಕೋಲಾರ ಸಂಸದ ಮುನಿಸ್ವಾಮಿ ಅವರಿಗೆ 20 ಸಾಂದ್ರಕಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿ ಅವರು; “ಕೋವಿಡ್‌ ಕಾರ್ಮೋಡ ಕವಿದ ಈ ಹೊತ್ತಿಗೆ ಆಮ್ಲಜನಕ ಸಾಂದ್ರಕಗಳನ್ನು ಕೊಡುತ್ತಿರುವುದು ಬೆಳ್ಳಿಗೆರೆ ಮೂಡಿದಂತೆ ಆಗಿದೆ. ಎಲ್ಲರೂ ಧೈರ್ಯವಾಗಿ ಸೋಂಕಿನ ವಿರುದ್ಧ ಹೋರಾಟ ನಡೆಸಬೇಕೆ ವಿನಾ ಎದೆಗುಂದಬಾರದು” ಎಂದರು.

ಇದನ್ನೂ ಓದಿ: ಮನುಷ್ಯರ ನಡುವೆ 6 ಅಡಿ ಅಂತರವಿದ್ದರೂ ಸೋಂಕು ಹರಡಬಲ್ಲದು : ಅಮೆರಿಕ ತಜ್ಞರ ಎಚ್ಚರಿಕೆ

ದಾನಿಗಳ ನೆರವು:

ಆಕ್ಷನ್‌ ಕೋವಿಡ್‌ ಟೀಂ ಹಾಗೂ ಝಿರೋದ ಸಂಸ್ಥೆಗಳು 70 ಆಮ್ಲಜನಕ ಸಾಂದ್ರಕಗಳನ್ನು ದಾನ ಕೊಟ್ಟಿವೆ. ʼಸೇವಾ ಹಿʼ‌ ಸಂಘಟನೆ ಮೂಲಕ ಜನರ ಸೇವೆಗೆ ನೀಡಲಾಗುವುದು. ಆಮ್ಲಜನಕ ಕೊರತೆ, ಅದರಲ್ಲೂ 85% ಆಕ್ಸಿಜನ್‌ ಸ್ಯಾಚುರೇಷನ್ ಕಡಿಮೆ ಇರುವವರಿಗೆ ಇವುಗಳನ್ನು ಕೊಡುತ್ತೇವೆ ಎಂದು ಡಿಸಿಎಂ ಹೇಳಿದರು.

ಏನಿದು ಆಮ್ಲಜನಕ ಸಾಂದ್ರಕ? ಹಂಚಿಕೆ ಹೇಗೆ?:

ಇದು ರೆಡಿಮೇಡ್‌ ಆಮ್ಲಜನಕ ಘಟಕದ ರೀತಿ ಕೆಲಸ ಮಾಡುತ್ತದೆ. ಸಾಗಾಣಿಕೆ ಸುಲಭ. ಮನೆಯಲ್ಲೇ ಸರಳವಾಗಿ ಬಳಸಬಹುದು. ಹೋಮ್‌ ಐಸೋಲೇಷನ್‌ ಆಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಪದ್ಭಾಂದವನಂತೆ ಕೆಲಸ ಮಾಡುತ್ತದೆ.

ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾರಿಗಾದರೂ ಆಮ್ಲಜನಕದ ಕೊರತೆ ಉಂಟಾದ ತಕ್ಷಣ ಹೆಲ್ಪ್‌ಲೈನ್‌ ಸಂಖ್ಯೆಗೆ ಕರೆ ಮಾಡಿದರೆ ಸಾಕು. ತತ್‌ಕ್ಷಣವೇ ಅವರ ಮನೆ ಬಾಗಿಲಿಗೇ ಆಮ್ಲಜನಕ ಸಾಂದ್ರಕವನ್ನು ಸ್ವಯಂ ಸೇವಕರು ತಲುಪಿಸುತ್ತಾರೆ.

ಜತೆಗೆ, ಅದನ್ನು ಬಳಸುವ ಬಗ್ಗೆ ಮಾಹಿತಿಯನ್ನೂ ನೀಡತ್ತಾರೆ. ಆ ಸೋಂಕಿತರು ಸಾಂದ್ರಕದ ಉಪಯೋಗ ಪಡೆದು  ಅಪಾಯದಿಂದ ಪಾರಾದ ಮೇಲೆ ಅಥವಾ ಅವರಲ್ಲಿ ಆಮ್ಲಜನಕದ ಸಮಸ್ಯೆ ನೀಗಿದ ನಂತರ ಅದನ್ನು ವಾಪಸ್‌ ಪಡೆದು,

ಸ್ಯಾನಿಟೈಸ್‌ ಮಾಡಿ ಮತ್ತೊಮ್ಮೆ ಅಗತ್ಯ ಇರುವ ಮತ್ತೊಬ್ಬ ಸೋಂಕಿತರಿಗೆ ನೀಡಲಾಗುವುದು. ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಆದ್ಯತೆಯ ಮೇಲೆ ಇವುಗಳನ್ನು ನೀಡಲಾಗುವುದು.

ಅತ್ಯಾಧುನಿಕವಾದ ಆಮ್ಲಜನಕ ಸಾಂದ್ರಕಗಳನ್ನು ಆಮದು ಮಾಡಿಕೊಂಡಿದ್ದು, ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.