ಸಾಲಿಗ್ರಾಮ ಜಾತ್ರೆಯಲ್ಲಿ ಭಿಕ್ಷಾಟನೆ ನಿರತ 28 ಮಕ್ಕಳ ರಕ್ಷಣೆ
Team Udayavani, Jan 16, 2021, 6:40 PM IST
ಕೋಟ: ಸಾಲಿಗ್ರಾಮ ಜಾತ್ರೆಯಲ್ಲಿ ಶನಿವಾರ ಬಲೂನು ವ್ಯಾಪಾರದಲ್ಲಿ ನಿರತರಾದ ಮಕ್ಕಳು ಹಾಗೂ ಬಾಲ ಭಿಕ್ಷುಕರು ಸಹಿತ ಒಟ್ಟು 28ಮಂದಿಯನ್ನು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ನಾಗರಿಕ ಸೇವಾ ಸಮಿತಿ, ಕೋಟ ಪೊಲೀಸ್, ಸಾಲಿಗ್ರಾಮ ಪ.ಪಂ. ಜಂಟಿಯಾಗಿ ರಕ್ಷಿಸಿ ಸ್ಥಳಾಂತರಿಸಿದರು.
ರಾಜಸ್ಥಾನದಿಂದ ಜಾತ್ರೆ ವ್ಯಾಪಾರಕ್ಕಾಗಿ ಆಗಮಿಸಿದ ಕುಟುಂಬದೊಂದಿಗೆ ಮಕ್ಕಳು ಸಹ ಬಂದಿದ್ದು ಅವರು ಬಲೂನು ವ್ಯಾಪಾರ ಮತ್ತು ಭಿಕ್ಷಾಟನೆ ಮಾಡುತ್ತ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದರು. ಈ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತತ್‌ಕ್ಷಣ ತಂಡದೊಂದಿಗೆ ಸ್ಥಳಕ್ಕಾಗಮಿಸಿ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಊರಿಗೆ ತೆರಳುವಂತೆ ಹಾಗೂ ಮಕ್ಕಳಿಗೆ ಶಿಕ್ಷಣ ನೀಡುವಂತೆ ಹೆತ್ತವರಿಗೆ ಮನವರಿಕೆ ಮಾಡಿಸಿ ರೈಲ್ವೇ ನಿಲ್ದಾಣಕ್ಕೆ ಕಳುಹಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಕೋಟ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ. ಪಿ, ಸಹಾಯಕ ಉಪನಿರೀಕ್ಷಕಿ ಮುಕ್ತಾ ಮತ್ತು ಸಿಬಂದಿ, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಮುಖ್ಯಾಧಿಕಾರಿ ಅರುಣ್ ಕುಮಾರ್, ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕಪಿಲ, ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸಂದೇಶ್, ಜಿಲ್ಲಾ ನಾಗರಿಕ ಸೇವಾ ಸಮಿತಿಯ ನಿತ್ಯಾನಂದ ವಳಕಾಡು, ತಾರಾನಾಥ್ ಮೇಸ್ತ ಮತ್ತು ಸ್ಥಳೀಯರಾದ ನಾಗರಾಜ್ ಗಾಣಿಗ ಸಾಲಿಗ್ರಾಮ, ದೇಗುಲದ ಸಿಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು