ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ಪರಿಹಾರ ಪ್ಯಾಕೇಜ್ : 40 ಕೋಟಿ ರೂ. ಹಣ ಬಿಡುಗಡೆ
Team Udayavani, Jun 10, 2020, 2:35 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ದೈನಂದಿನ ಆದಾಯವಿಲ್ಲದೆ ಸಂಕಷ್ಟ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಪರಿಹಾರವಾಗಿ ಘೋಷಣೆ ಮಾಡಿದ್ದ ಹಣವನ್ನು ಬಿಡುಗಡೆ ಮಾಡಲಾಗಿದೆ.
ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿ ದೈನಂದಿನ ದುಡಿಮೆಯಿಂದ ಬದುಕುವ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಐದು ಸಾವಿರ ರೂ. ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದರು.
ಈಗಾಗಲೇ ಒಂದು ಲಕ್ಷ ವಾಹನ ಚಾಲಕರು ನೋಂದಾವಣೆ ಮಾಡಿದ್ದು, ಇನ್ನೂ ಆರು ಲಕ್ಷದ ಎಪ್ಪತ್ತೈದು ಸಾವಿರ ಚಾಲಕರು ನೋಂದಾಯಿಸುವ ನಿರೀಕ್ಷೆಯಿದೆ. ಈ ಯೋಜನೆಗೆ ಸರಕಾರ ಇಂದು ನಾಲ್ಕು ಸಾವಿರ ಲಕ್ಷ ರೂ (40 ಕೋಟಿ ರೂ) ಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.