ನ್ಯೂಯಾರ್ಕ್: ಅಪಾರ್ಟ್‌ಮೆಂಟ್ ನಲ್ಲಿ ಬೆಂಕಿ ಅವಘಡ ; 9 ಮಕ್ಕಳು ಸೇರಿ 19 ಮಂದಿ ಸಜೀವ ದಹನ
Team Udayavani, Jan 10, 2022, 10:00 PM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾನುವಾರ ಅಪಾರ್ಟ್‌ಮೆಂಟ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 9 ಮಕ್ಕಳು ಸೇರಿ ಒಟ್ಟು 19 ಮಂದಿ ಸಜೀವದಹನವಾಗಿದ್ದಾರೆ.
ಅಪಾರ್ಟ್‌ಮೆಂಟ್‌ನಲ್ಲಿದ್ದ ಸ್ಪೇಸ್ ಹೀಟರ್‌ನಿಂದಾಗಿ ಈ ದುರಂತ ನಡೆದಿದೆ. 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಘಟನೆಯ ಬಗ್ಗೆ ಕರೆ ಬಂದ ಮೂರೇ ನಿಮಿಷಗಳಲ್ಲಿ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ. ಸುಮಾರು 200 ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಕೊಡಲಾಗಿದೆ.
ಇತ್ತೀಚೆಗೆ ಅಮೆರಿಕದ ಪೆನ್ಸಿಲ್ವೇನಿಯಾದ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅನಾಹುತದಲ್ಲಿ 12 ಮಂದಿ ಸಾವಿಗೀಡಾಗಿದ್ದರು.
ಇದನ್ನೂ ಓದಿ : ನನ್ನಷ್ಟು ಯೋಗ್ಯತೆ ಬಿಜೆಪಿಯಲ್ಲಿ ಯಾರಿಗಿದೆ ? ನಾನೊಬ್ಬ ಸಾಮಾನ್ಯ ಕಾರ್ಯಕರ್ತ; ಯತ್ನಾಳ್