
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಬೀಳ್ಕೊಡುಗೆ
Team Udayavani, Sep 28, 2022, 11:38 AM IST

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಕಳೆದ ಮೂರು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೆ.28ರ ಬೆಳ್ಳಿಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್‌ಎ.ಎಲ್. ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.
ಮೈಸೂರು ದಸರಾ, ಧಾರಾವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಅಂಡ್ ಟೆಕ್ನಾಲಜಿಯನ್ನು ಉದ್ಘಾಟಿಸಿದರು. ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದರು.
ಬೆಂಗಳೂರಿನ ಹೆಚ್.ಎ.ಎಲ್.ನಲ್ಲಿ ಕ್ರಯೋಜನಿಕ್ ಪ್ರತ್ಯೇಕ ಘಟಕ ಹಾಗೂ ವರ್ಚುವಲ್ ಕಾರ್ಯಕ್ರಮದ ಮೂಲಕ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದ ದಕ್ಷಿಣ ವಲಯ ಸಂಶೋಧನಾ ಕೇಂದ್ರಕ್ಕೆ ಶಂಕು ಸ್ಥಾಪನೆ ಮಾಡಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಗರದ ನೂತನ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ಸಹ ಉದ್ಘಾಟಿಸಿದರು.
ಸೆ.27 ರಂದು ರಾಜ್ಯ ಸರ್ಕಾರದಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿದ ರಾಷ್ಟ್ರಪತಿಗೆ ಬಳಿಕ ರಾತ್ರಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ಸಹ ಏರ್ಪಡಿಸಲಾಗಿತ್ತು. ಕಳೆದ ಮೂರು ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರಪತಿ, ರಾಜ್ಯ ಪ್ರವಾಸ ಮುಗಿಸಿ ಸೆ.28 ರಂದು ನವದೆಹಲಿಗೆ ಪ್ರಯಾಣಿಸಿದರು.
ಈ ಸಮಯದಲ್ಲಿ ಬೃಹತ್ ಕೈಗಾರಿಕಾ ಸಚಿವರಾದ ಮುರಗೇಶ್ ನಿರಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಭೂ ಸೇನಾ ಅಧಿಕಾರಿ ಬಸಂತ್ ರೆಪ್ಸ್ ಪಾಲ್, ನೌಕಾ ಸೇನಾಧಿಕಾರಿ ರೂಪನ್ ಬೆಂಬೇ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜಭವನದಲ್ಲಿ ರುದ್ರಾಕ್ಷ ಸಸಿ ನೆಟ್ಟ ರಾಷ್ಟ್ರಪತಿ:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ರಾಜಭವನದಲ್ಲಿ ರುದ್ರಾಕ್ಷಿ ಸಸಿ ನೆಟ್ಟರು. ರಾಜ್ಯಪಾಲರು ಮತ್ತು ರಾಜಭವನದ ಸಿಬ್ಬಂದಿಯ ಅತ್ಯುತ್ತಮ ಆತಿಥ್ಯಕ್ಕಾಗಿ ರಾಷ್ಟ್ರಪತಿ ಅವರನ್ನು ಶ್ಲಾಘಿಸಿದರು. ಈ ಸಂರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಬಂಧನ ವೇಳೆ ಮಲ್ಯ, ನೀರಜ್ ಹೆಸರು ಹೇಳಿದ ವಂಚಕ!

ಅಪ್ರಾಪ್ತನಿಂದ ಶಿವಾಜಿ ಮಹಾರಾಜರಿಗೆ ಅಪಮಾನ: ವಿಚಾರಣೆ ನಡೆಸುತ್ತಿರುವ ಪೊಲೀಸರು

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ