ಹೊಸ ಅಂಕಪಟ್ಟಿ ಪಡೆಯಲೂ ಆಧಾರ್‌ ಕಡ್ಡಾಯ

Team Udayavani, Sep 25, 2019, 5:20 AM IST

adhar

ಬೆಂಗಳೂರು: ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು.

ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ ಶಾಲೆಯ ಮೂಲಕವೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಇದರ ಜತೆಗೆ ಆಧಾರ್‌ ನಕಲು ಪ್ರತಿ ನೀಡಬೇಕು.

ಎಸೆಸೆಲ್ಸಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳ ಮೊಬೈಲ್‌ ಸಂಖ್ಯೆಯ ಜತೆಗೆ ಶಾಲೆಯ ಮುಖ್ಯ ಶಿಕ್ಷಕರ ಮೊಬೈಲ್‌ ಸಂಖ್ಯೆ ಯನ್ನು ಕಡ್ಡಾಯವಾಗಿ ನಮೂದಿಸಲೇ ಬೇಕು. ಮಂಡಳಿಯಿಂದ ಶಾಲೆಗೆ ಬಂದಿರುವ ಅಂಕಪಟ್ಟಿಯನ್ನು ಅಭ್ಯರ್ಥಿಗಳಿಗೆ ವಿತರಣೆ ಮಾಡುವಾಗ ಅಭ್ಯರ್ಥಿಯ ವಿಳಾಸ, ನೋಂದಣಿ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆಯಾರಿಗೂ ಅಂಕಪಟ್ಟಿ ನೀಡಕೂಡದು ಎಂದು ಮಂಡಳಿಯಿಂದ ಎಚ್ಚರಿಕೆಯನ್ನು ನೀಡಲಾಗಿದೆ.

ಎಸೆಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅದೇ ಶೈಕ್ಷಣಿಕ ವರ್ಷದಲ್ಲಿ ಅಂಕಪಟ್ಟಿ ವಿತರಣೆ ಮಾಡಲಾಗುತ್ತದೆ. ಆದರೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಥವಾ ಪೂರಕ ಪರೀಕ್ಷೆಯನ್ನು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಖಾಸಗಿ ಅಭ್ಯರ್ಥಿಗಳಿಗೆ, ಪುನರಾವರ್ತಿತ ಅಭ್ಯರ್ಥಿಗಳಿಗೆ ಅಂಕಪಟ್ಟಿ ವಿತರಣೆ ಸ್ವಲ್ಪ ವಿಳಂಬವಾಗುತ್ತದೆ.

ಏಕೆ ಈ ಕ್ರಮ?
ವಿದ್ಯಾರ್ಥಿ ವ್ಯಾಸಂಗ ಮಾಡಿದ ಶಾಲೆಯಿಂದಲೇ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಎರಡನೇ, ಮೂರನೇ ಅಥವಾ ನಾಲ್ಕನೇ ಅಂಕಪಟ್ಟಿಗೆ ಅಥವಾ ತಿದ್ದುಪಡಿ ಅಂಕಪಟ್ಟಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಅರ್ಜಿಯನ್ನು ಸರಿಯಾಗಿ ಪರಿಶೀಲನೆ ಮಾಡದೆ, ಅಪೂರ್ಣ ಮಾಹಿತಿಯನ್ನು ಅರ್ಜಿಯನ್ನು ಮತ್ತು ಅಭ್ಯರ್ಥಿಗಳಿಗೆ ಅಂಕಪಟ್ಟಿ ನೀಡುವಾಗ ತಪ್ಪುಗಳಿರುವುದನ್ನು ಪರಿಶೀಲಿಸದೆ ನೀಡುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಶಾಲಾ ಮುಖ್ಯಶಿಕ್ಷಕರಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿ “ಉದಯವಾಣಿ’ಗೆ ಮಾಹಿತಿ ನೀಡಿದರು.

ಎಚ್ಚರ ವಹಿಸಿ!
ಇತ್ತೀಚಿನ ದಿನಗಳಲ್ಲಿ ಅಂಕಪಟ್ಟಿಯಲ್ಲಿ ಹಲವು ರೀತಿಯಲ್ಲಿ ಲೋಪವಾಗುತ್ತಿದೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅಂಕಪಟ್ಟಿ ವಿತರಣೆಗೆ ಮುನ್ನ ಸೂಕ್ಷ್ಮ ಪರಿಶೀಲನೆ ಮಾಡಬೇಕು ಎಂದಿದೆ ಪ್ರೌಢಶಿಕ್ಷಣ ಮಂಡಳಿ. ಅಂಕಪಟ್ಟಿಯಲ್ಲಿನ ಅಭ್ಯರ್ಥಿ, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿ ತಪ್ಪುಗಳಾಗಿದ್ದಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಾಗ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ವಿದ್ಯಾರ್ಥಿಯು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ನೀಡಿರುವ ದಾಖಲೆಗಳನ್ನೇ ಪ್ರೌಢಶಾಲೆಗೆ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಪ್ರಾಥಮಿಕ ಶಾಲೆಯಲ್ಲಿ ಒಂದು ರೀತಿಯ ದಾಖಲೆ ಹಾಗೂ ಪ್ರೌಢಶಾಲೆಗೆ ಇನ್ನೊಂದು ರೀತಿಯ ದಾಖಲೆ ನೀಡಿದರೆ ಅಂತಹ ಪ್ರಸ್ತಾವನೆಯನ್ನು ಮಂಡಳಿಗೆ ಸಲ್ಲಿಸುವ ಮೊದಲು ಎಲ್ಲ ನಿಯಮಗಳನ್ನು ಸರಿಯಾಗಿ ಅರಿತುಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಮಂಡಳಿ ಖಡಕ್‌ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.