

Team Udayavani, Jun 19, 2024, 7:07 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ರಕ್ಷಣೆಗೆ ಸಚಿವರು ಸೇರಿದಂತೆ ರಾಜಕಾರಣಿಗಳು ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್ ರಕ್ಷಣೆಗೆ ತೆರೆಮರೆ ಕಸರತ್ತು ನಡೆಯುತ್ತಿದೆ ಎಂಬ ಅನುಮಾನ ನಡುವೆಯೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಪ್ರಸನ್ನಕುಮಾರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಎಸ್‌ಪಿಪಿ ಪ್ರಸನ್ನಕುಮಾರ್ ಬದಲಾವಣೆ ಪ್ರಸ್ತಾಪವೇ ಈ ವರೆಗೆ ಬಂದಿಲ್ಲ ಎಂದು ಸಾಮಾಜಿಕ ಜಾಲತಾಣ(ಎಕ್ಸ್) ದಲ್ಲಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದರ್ಶನ್ ಪ್ರಕರಣದಲ್ಲಿ ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ. ಸಚಿವರು ಒತ್ತಡ ಹಾಕ್ತಿದ್ದಾರೆ ಅನ್ನೋದೆಲ್ಲ ಸತ್ಯ ಅಲ್ಲ. ವಿಪಕ್ಷದವರು ಹೇಳುವುದೆಲ್ಲಾ ಸತ್ಯನಾ? ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ
ಸಾಮಾಜಿಕ ಜಾಲತಾಣಗಳ ಮೂಲಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ…
— Siddaramaiah (@siddaramaiah) June 19, 2024
Ad
ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್
ನಾಳೆ ರಾಹುಲ್ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್.ಅಶೋಕ್
ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ
You seem to have an Ad Blocker on.
To continue reading, please turn it off or whitelist Udayavani.