ಸೋನು ಸೂದ್ ತಂಗಿ ಮಾಳ್ವಿಕಾ ರಾಜಕೀಯ ಎಂಟ್ರಿ : ಮೋಗಾ ಕ್ಷೇತ್ರದಲ್ಲೇ ಕಣಕ್ಕಿಳಿಯುವ ಸಾಧ್ಯತೆ
Team Udayavani, Nov 14, 2021, 10:00 PM IST
ಚಂಡೀಗಡ: ಕೊರೊನಾ ಸಮಯದಲ್ಲಿ ತಮ್ಮ ಸಾಮಾಜಿಕ ಕಾರ್ಯಗಳಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಬಾಲಿವುಡ್ ನಟ ಸೋನು ಸೂದ್ ಅವರ ತಂಗಿ ಮಾಳ್ವಿಕಾ ಸೂದ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮೋಗಾ ಜಿಲ್ಲೆಯವರಾಗಿರುವ ಅವರು ಮೋಗಾ ಕ್ಷೇತ್ರದಿಂದಲೇ ಕಣಕ್ಕಿಳಿಯುವ ಸಾಧ್ಯತೆಯಿದೆ.
“ಯಾವ ರಾಜಕೀಯ ಪಕ್ಷದಿಂದ ಸ್ಪರ್ಧಿಸಬೇಕು ಎನ್ನುವುದರ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮಾಳ್ವಿಕಾ ಮೋಗಾ ಮೂಲದವಳು, ಇಲ್ಲಿನ ಜನರ ಸೇವೆಗೆ ಇದೀಗ ಅಧಿಕೃತವಾಗಿ ಸಿದ್ಧಳಾಗಿದ್ದಾಳೆ’ ಎಂದು ಸೋನು ಸೂದ್ ಹೇಳಿದ್ದಾರೆ. ಹಾಗೆಯೇ ನನಗೆ ಸದ್ಯಕ್ಕೆ ರಾಜಕೀಯ ಪ್ರವೇಶಿಸುವ ಯಾವುದೇ ಯೋಚನೆಯಿಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಬಗ್ಗೆ ಮಾತನಾಡಿದ ಸೋನು, “ರೈತರಿಗೆ ಅವರ ಹಕ್ಕು ಸಿಗುವುದು ಅವಶ್ಯಕ. ಅವರ ಸಮಸ್ಯೆ ಶೀಘ್ರವೇ ಬಗೆಹರಿಯಬೇಕು’ ಎಂದಿದ್ದಾರೆ. ಹಾಗೆಯೇ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯ ಮತ್ತು ಉದ್ಯೋಗ ಸಮಸ್ಯೆಯಿದ್ದು, ಅದನ್ನು ಸರಿಪಡಿಸುವತ್ತ ಗಮನ ಹರಿಸುವುದಾಗಿಯೂ ತಿಳಿಸಿದ್ದಾರೆ.
ಇದನ್ನೂ ಓದಿ : ಪಾಕ್ ಜೈಲಿನಿಂದ 20 ಭಾರತೀಯ ಮೀನುಗಾರರ ಬಿಡುಗಡೆ : ಸೋಮವಾರ ಭಾರತಕ್ಕೆ ಹಸ್ತಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್