ನೋವೆಲ್‌ ಕೊರೋನಾ ವೈರಸ್‌ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

Team Udayavani, Jan 23, 2020, 9:31 PM IST

ಬೆಂಗಳೂರು: ಚೀನಾದ ವುಹಾನ್‌ ನಗರದಲ್ಲಿ ಪತ್ತೆಯಾಗಿರುವ ನೋವೆಲ್‌ ಕೊರೋನಾ ವೈರಸ್‌ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದ ಇಲಾಖೆಯ ಹಿರಿಯ ಅಧಿಕಾರಿಗಳು, ಚೀನಾದ ವುಹಾನ್‌ ನಗರ, ಜಪಾನ್‌, ತೈವಾನ್‌, ದಕ್ಷಿಣ ಕೋರಿಯಾ ಭಾಗದಿಂದ ಕರ್ನಾಟಕಕ್ಕೆ ಬರುವವರ ಮೇಲೆ ನಿಗಾವಹಿಸಿ ಆರೋಗ್ಯ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

ಶನಿವಾರ ವುಹಾನ್‌ ನಗರದಿಂದ ನಾಲ್ವರು ಬೆಂಗಳೂರಿಗೆ ಬಂದಿದ್ದು ಅವರ ಆರೋಗ್ಯ ತಪಾಸಣೆ ಸಹ ನಡೆಸಲಾಗಿದ್ದು ವೈರಸ್‌ ಸೋಂಕು ತಾಕಿಲ್ಲ ಎಂದು ದೃಢಪಟ್ಟಿದೆ ಎಂದು ಹೇಳಲಾಗಿದೆ.

ಇದೇ ರೀತಿ ಆ ಭಾಗದಿಂದ ಬರುವ ಪ್ರವಾಸಿಗರು ಸೇರಿದಂತೆ ಪ್ರಯಾಣಿಕರಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡರೆ ಆರೋಗ್ಯ ತಪಾಸಣೆಗೆ ಒಳಪಡುವಂತೆ ವಿಮಾನ ನಿಲ್ದಾಣಗಳಲ್ಲಿ ಜಾಗೃತಿ ಮೂಡಿಸಲು ಸೂಚನೆ ನೀಡಲಾಗಿದೆ.

ಸೋಂಕು ಪತ್ತೆಯಾದರೆ ಚಿಕಿತ್ಸೆಗಾಗಿ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ, ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಇಲಾಖೆ ವತಿಯಿಂದ ವಿಶೇಷ ಕೊಠಡಿ ಕಾಯ್ದಿರಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ