ಗ್ರಾಮ ಸ್ವರಾಜ್‌ಗೆ ತಿದ್ದುಪಡಿ? ಮೀಸಲಾತಿ ಅವಧಿ 5 ವರ್ಷಕ್ಕೆ ಇಳಿಕೆ ಸಂಭವ

Team Udayavani, Mar 10, 2020, 6:25 AM IST

ಗ್ರಾಮ ಸ್ವರಾಜ್‌ಗೆ ತಿದ್ದುಪಡಿ? ಮೀಸಲಾತಿ ಅವಧಿ 5 ವರ್ಷಕ್ಕೆ ಇಳಿಕೆ ಸಂಭವ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಗ್ರಾಮ ಸ್ವರಾಜ್‌ ಕಾಯ್ದೆಗೆ ಭಾರೀ ತಿದ್ದುಪಡಿ ತರಲು ಹಾಲಿ ಬಿಎಸ್‌ವೈ ನೇತೃತ್ವದ ರಾಜ್ಯ ಸರಕಾರ ಮುಂದಾಗಿದೆ.

ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಗೊಳಿಸಲು ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪಂ. ರಾಜ್‌ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈಗಿನ ಬಿಜೆಪಿ ಸರಕಾರ ಇದರಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಂಶಗಳಿಗೆ ತಿದ್ದುಪಡಿ ತರಲು ಪ್ರಯತ್ನ ನಡೆಸಿದ್ದು, ಇದೇ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಏನು ತಿದ್ದುಪಡಿ?
2017ರ ತಿದ್ದುಪಡಿ ಪ್ರಕಾರ ಗ್ರಾಮ್‌ ಸ್ವರಾಜ್‌ ಮತ್ತು ಪಂ. ರಾಜ್‌ ಕಾಯ್ದೆ 1993ರಲ್ಲಿ ಗ್ರಾಮ ಪಂಚಾಯತ್‌, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಮೀಸ ಲಾತಿ  ಯನ್ನು ಎರಡು ಅವಧಿಗೆ ನಿಗದಿಪಡಿಸಲಾ ಗಿ ತ್ತು. ಆದರೆ ಈಗ ಆಡಳಿತ ಪಕ್ಷದ ಶಾಸಕರ ಒತ್ತಾಯದ ಮೇರೆಗೆ ಎರಡು ಅವಧಿಗೆ ಅಂದರೆ 10 ವರ್ಷಗಳಿಗೆ ಇರುವ ಮೀಸಲು ಪದ್ಧತಿಯನ್ನು ಐದು ವರ್ಷಗಳಿಗೆ ಅಂದರೆ, ಒಂದೇ ಅವಧಿಗೆ ನಿಗದಿಪಡಿಸಿ ತಿದ್ದುಪಡಿ ತರಲು ರಾಜ್ಯ ಸರಕಾರ ಪ್ರಯತ್ನ ನಡೆಸಿದೆ.

ಏನೇನು ಬದಲಾವಣೆ?
1.ಗ್ರಾ.ಪಂ.ಗಳಲ್ಲಿ ಅಧ್ಯಕ್ಷ -ಉಪಾಧ್ಯಕ್ಷರ ಅವಧಿ  ಐದು ವರ್ಷಕ್ಕೆ ಬದಲಾಗಿ 30 ತಿಂಗಳು ನಿಗದಿ.
2.ಜಿಲ್ಲಾ ಮತ್ತು ತಾ.ಪಂ.ಗಳಲ್ಲಿ ಅಧ್ಯಕ್ಷ- ಉಪಾಧ್ಯಕ್ಷರ ಅವಧಿ 20 ತಿಂಗಳಿಗೆ ನಿಗದಿ.
3.ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಅಧಿಕಾರ ಸ್ವೀಕರಿಸಿ ಕನಿಷ್ಠ 30 ತಿಂಗಳು ಆಗಿರ ಬೇಕು ಎಂಬ ಅಂಶಕ್ಕೆ ಕತ್ತರಿ.
4.ಅಧ್ಯಕ್ಷರು, ಉಪಾಧ್ಯಕ್ಷರ ವಿರುದ್ಧ ಭ್ರಷ್ಟಾ ಚಾರ,ಸ್ವಜನಪಕ್ಷಪಾತ, ಸದಸ್ಯರ ವಿಶ್ವಾಸ ಕಳೆ ದು ಕೊಂಡಿದ್ದರೆ ಯಾವುದೇ ಸಮಯದಲ್ಲಾದರೂ ಅವಿಶ್ವಾಸ ನಿರ್ಣಯಕ್ಕೆ ಅವಕಾಶ.

ಗ್ರಾಮ್‌ ಸ್ವರಾಜ್‌ ಕಾಯ್ದೆಯ ಸೆಕÏನ್‌ 5.4, ತಾ.ಪಂ. ಕಾಯ್ದೆ ಸೆಕÏನ್‌ 123 ಮತ್ತು ಜಿ.ಪಂ. ಕಾಯ್ದೆಯ ಸೆಕÏನ್‌ 162ಕ್ಕೆ ತಿದ್ದುಪಡಿ ತರಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಕಾನೂನು ಇಲಾಖೆ ಅಭಿಪ್ರಾಯದ ಅನಂತರ ಜಾರಿ
ಈಗಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆ ಕಾಯ್ದೆಯಲ್ಲಿ ತಿದ್ದುಪಡಿ ಮಾಡುವ ಅಂಶಗಳ ಕುರಿತು ಕರಡು ಸಿದ್ಧಪಡಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೆ ನೀಡಲಾಗಿದೆ ಎನ್ನಲಾಗಿದೆ. ಕಾನೂನು ಇಲಾಖೆ ಅಭಿಪ್ರಾಯ ಪಡೆದು ಮುಂದಿನ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಸಂಪುಟದಲ್ಲಿ ಒಪ್ಪಿಗೆ ಪಡೆದು ಇದೇ ಅಧಿವೇಶನದಲ್ಲಿ ತಿದ್ದುಪಡಿ ತರಲು ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇದರೊಂದಿಗೆ ತಾಂತ್ರಿಕ ಸಮಸ್ಯೆ ಒಳಗೊಂಡಿರುವ 20ಕ್ಕೂ ಹೆಚ್ಚು ಅಂಶಗಳಿಗೆ ತಿದ್ದುಪಡಿ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ರಾಜ್ಯ ಸರಕಾರ ಗ್ರಾಮ ಸ್ವರಾಜ್‌ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಪಂ.ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ಕೆಲಸ ಮಾಡಬೇಕು. ಅದರ ಬದಲು ದುರ್ಬಲಗೊಳಿಸುವ ಪ್ರಯತ್ನ ಮಾಡಬಾರದು.
-ಸಿ. ನಾರಾಯಣಸ್ವಾಮಿ, ಕರ್ನಾಟಕ ಪಂಚಾಯತ್‌ ಪರಿಷತ್‌ ಕಾರ್ಯಾಧ್ಯಕ್ಷ.

ತಳಮಟ್ಟದಲ್ಲಿ ನಾಯಕತ್ವ ಬೆಳೆಸುವ ಉದ್ದೇಶದಿಂದ ಎರಡು ಅವಧಿಗೆ ಅಂದರೆ ಹತ್ತು ವರ್ಷಕ್ಕೆ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ಒಂದೇ ಅವಧಿಗೆ ಮೀಸಲಾತಿ ನಿಗದಿಪಡಿಸಿದರೆ ಚುನಾಯಿತ ಪ್ರತಿನಿಧಿಗಳಿಗೆ ಆಯಾ ಪ್ರದೇಶದ ಅಭಿವೃದ್ಧಿ ಆಸಕ್ತಿ ಇಲ್ಲವಾಗಬಹುದು ಅನ್ನುವ ಕಾರಣಕ್ಕೆ ಎರಡು ಅವಧಿಗೆ ಅವಕಾಶ ಕಲ್ಪಿಸಲಾಗಿತ್ತು.
– ಕೆ.ಆರ್‌. ರಮೇಶ್‌ ಕುಮಾರ್‌, ಮಾಜಿ ಸ್ಪೀಕರ್‌

- ಶಂಕರ ಪಾಗೋಜಿ

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.