ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ
Team Udayavani, Jan 31, 2023, 8:21 AM IST
ವಾಷಿಂಗ್ಟನ್: ವಾಹನದಲ್ಲಿ ಬಂದ ಅಪರಿಚಿತರು ಸಾಮೂಹಿಕ ಗುಂಡಿನ ದಾಳಿ ನಡೆಸಿದ ಪರಿಣಾಮ 9 ಮಂದಿ ಗಾಯಗೊಂಡಿರುವ ಘಟನೆ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಸೋಮವಾರ ಮಧ್ಯಾಹ್ನ (ಜ.30 ರಂದು) ನಡೆದಿದೆ.
ರಸ್ತೆ ಬದಿ ನಿಂತಿದ್ದ ಜನರ ಮೇಲೆ ಕಾರಿನಲ್ಲಿ ಬಂದಿದ್ದ ನಾಲ್ವರು ಅಪರಿಚಿತರು , ಕಾರಿನ ಡೋರನ್ನು ಕೆಳಕ್ಕೆ ಮಾಡಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ 8 ಮಂದಿ ಗಾಯಗೊಂಡಿದ್ದು, ಇದರಲ್ಲಿ ಇಬ್ಬರು ಗಂಭೀರವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರಿನಲ್ಲಿ ನಾಲ್ವರು ಇದ್ದರು, ಕಾರನ್ನು ನಿಧಾನ ಮಾಡಿ ಚಲಾಯಿಸುತ್ತಾ, ನಾಲ್ವರೂ ಕೂಡ ಗನ್ ಹಿಡಿದು ನಿಂತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನದ ನಾಲ್ಕೂ ಕಡೆಯಿಂದ ಒಬ್ಬೊಬ್ಬರು ಶೂಟ್ ಮಾಡಿದ್ದಾರೆ. ಗುಂಡಿನ ದಾಳಿ ನಡೆಸಿದವರು ಮುಖಕ್ಕೆ ಕವರ್ ಮಾಡಿಕೊಂಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡು ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಲೇಕ್ ಲ್ಯಾಂಡ್ ಪೊಲೀಸ್ ಇಲಾಖೆಯ ಮುಖ್ಯಸ್ಥ ಸ್ಯಾಮ್ ಟೇಲರ್ ಹೇಳಿದ್ದಾರೆ.