ಬೋವಿ ಗುರುಪೀಠದ ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ

ಪಾನಮತ್ತ ದುಷ್ಕರ್ಮಿಗಳಿಂದ ಸ್ವಾಮೀಜಿ ಮತ್ತು ಅವರ ಕಾರು ಚಾಲಕನ ಮೇಲೆ ಹಲ್ಲೆ ಆರೋಪ

Team Udayavani, Jun 20, 2019, 7:19 PM IST

ದೊಡ್ಡಬಳ್ಳಾಪುರ: ಚಿತ್ರದುರ್ಗ ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ ಕಾರನ್ನು ಅಡ್ಡಗಟ್ಟಿ ಅವರ ಕಾರು ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇದೇ ಸಂದರ್ಭದಲ್ಲಿ ಪಾನಮತ್ತ ದುಷ್ಕರ್ಮಿಗಳು ಸ್ವಾಮೀಜಿಯವರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸ್ವಾಮೀಜಿಯವರು ತಮ್ಮ ಕಾರಿನಲ್ಲಿ ದಾಬಸ್ ಪೇಟೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಸ್ವಾಮೀಜಿಯವರ ಕಾರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಸಮೀಪ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿಗಳು ಏಕಾಏಕಿ ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಮಾತ್ರವಲ್ಲದೇ ಇದೇ ಸಂದರ್ಭದಲ್ಲಿ ಕೆಲವರು ಸ್ವಾಮೀಜಿಯವರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ