ಆಡಿಯೋ ಪ್ರಕರಣ; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ; ಸಿದ್ದರಾಮಯ್ಯ

Team Udayavani, Nov 2, 2019, 3:16 PM IST

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಬಿಜೆಪಿಯೇ ಕಾರಣ ಎಂಬುದು ಬಿಎಸ್ ಯಡಿಯೂರಪ್ಪನವರ ಆಡಿಯೋದಿಂದ ಬಹಿರಂಗವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶನಿವಾರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜಂಟಿಪತ್ರಿಕಾಗೋಷ್ಠಿ ನಡೆಸಿದ್ದು, ಮೈತ್ರಿ ಸರ್ಕಾರ ಬೀಳಿಸುವ ಹುನ್ನಾರ ಆಡಿಯೋದಲ್ಲಿ ಬಹಿರಂಗವಾಗಿದೆ. ಆಡಿಯೋದಲ್ಲಿ ಬಿಎಸ್ ವೈ ಎಲ್ಲವನ್ನೂ ಬಹಿರಂಗಗೊಳಿಸಿದ್ದಾರೆ. ಸರ್ಕಾರ ಬೀಳಿಸುವ ಕೆಲಸ ಸಂವಿಧಾನ ಬಾಹಿರ ಕೃತ್ಯ. ಹೀಗಾಗಿ ಅಮಿತ್ ಶಾ ಮತ್ತು ಯಡಿಯೂರಪ್ಪ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದರು.

ಸರ್ಕಾರ ಬೀಳಿಸಿರುವ ವಿಚಾರದ ಬಗ್ಗೆ ಶಾ ಮತ್ತು ಯಡಿಯೂರಪ್ಪ ವಿರುದ್ಧ ರಾಷ್ಟ್ರಪತಿ, ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ತಿಳಿಸಿದ ಅವರು, ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸುವುದಾಗಿ ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ