ಅಯೋಧ್ಯ ಐತಿಹಾಸಿಕ ತೀರ್ಪು: ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು

Team Udayavani, Nov 9, 2019, 8:10 AM IST

ಬೆಂಗಳೂರು : ಸುಪ್ರೀಂಕೋರ್ಟ್‌ ಇಂದು ಅಯೋಧ್ಯೆ ಜಮೀನು ಭೂ ವಿವಾದದ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಸೂಕ್ಷ್ಮಸ್ಥಳಗಳಲ್ಲಿ ಗರಿಷ್ಠ ಪ್ರಮಾಣ ಎಚ್ಚರಿಕೆ ವಹಿಸಲಾಗಿದೆ. ತೀರ್ಪಿನ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ನೀಡಿದ ಸೂಚನೆ ಇಲ್ಲಿದೆ.

  • ಫೇಸ್ ಬುಕ್ ಇನ್ ಸ್ಟಾಗ್ರಾಂ ವಾಟ್ಸಾಪ್ ಮತ್ತು ಇನ್ನೀತರ ಜಾಲಾತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶ, ಪೋಸ್ಟ್ ಹಾಗೂ ಕಮೆಂಟ್ ಮಾಡಬಾರದು.
  • ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುವುದು.
  • ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಆಕ್ಷೇಪಾರ್ಹ ಫೋಸ್ಟ್ ಹಾಕಬಾರದು.
  • ಯಾವುದೇ ರಾಜಕೀಯ ಮತ್ತು ಧಾರ್ಮಿಕ ವಿಷಯದ ಬಗ್ಗೆ ನಿಂದನೆಯ ಸಂದೇಶಗಳನ್ನು ಕಳುಹಿಸುವುದು ರವಾನಿಸುವುದು ಅಪರಾಧವಾಗಿದ್ದು ಅದನ್ನು ಉಲ್ಲಂಘಿಸಿದರೆ ಕಠಿಣಕ್ರಮ ಜರುಗಿಸಲಾಗುವುದು.
  • ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರು ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವು ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಬಾರದು. ಜೊತೆಗೆ ಬೇರೆಯವರಿಂದ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ವಿವಿಧ ಗ್ರೂಪ್ ಗಳಿಗೆ ರವಾನಿಸುವುದು ಕಂಡುಬಂದಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ ಗಳನ್ನು ನೇರ ಹೊಣೆ ಮಾಡಲಾಗುವುದು.
  • ಕಾನೂನು ಮತ್ತು ನಿಯಮಗಳ ಬಗ್ಗೆ ನಾಗರಿಕರು ಜಾಗರೂಕರಾಗಿ ಇರಬೇಕು . ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ