ಅಂತರರಾಜ್ಯ ಕಳ್ಳನ ಬಂಧನ: 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

Team Udayavani, May 25, 2021, 7:24 PM IST

ಅಂತರರಾಜ್ಯ ಕಳ್ಳನ ಬಂಧನ: 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬನಹಟ್ಟಿ, ನಾವಲಗಿ ಹಾಗೂ ಚಿಮ್ಮಡ ಗ್ರಾಮದಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ, ವಿಜಯಪುರ ಜಿಲ್ಲೆಯ ಹೊನ್ನಾಳಿ ಗ್ರಾಮದ ಸಂತೋಷ ನಂದಿಹಾಳ ಇವನನ್ನು ಬನಹಟ್ಟಿಯ ಪೊಲೀಸರು ಬಂಧಿಸಿ ಅವನಿಂದ ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸ್ಥಳೀಯ ಸಿಪಿಐ ಜಿ.ಕರುಣೇಶಗೌಡ ಮಾತನಾಡಿ, 2019ರಲ್ಲಿ ವರದಿಯಾಗಿದ್ದ ಪ್ರಕರಣದಲ್ಲಿ ದೊರೆತ ಸಿಸಿ ಟಿ.ವಿ. ದೃಶ್ಯಾವಳಿಗಳ ಸುಳಿವನ್ನು ಆಧರಿಸಿ ಸದರಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಸದರಿ ಕಳ್ಳನಿಂದ 3 ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ಚಿನ್ನದ 4 ಸರಗಳು, 6 ಉಂಗುರಗಳು, 1 ನಕ್ಲೇಸ್ ಸರ್ ಸೇರಿದಂತೆ ಇತ್ಯಾದಿ ಸುಮಾರು 6 ಲಕ್ಷ ಮೊತ್ತದ 141 ಗ್ರಾಂ ತೂಕದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

1996ರಿಂದ ಇಲ್ಲಿಯವರೆಗೆ ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. 2019ರಲ್ಲಿ ಈತನು ರಾಮದುರ್ಗ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡು ಹೋಗಿದ್ದನು. ಅಲ್ಲದೇ ಮುಧೋಳ, ಲೋಕಾಪುರ, ರಾಮದುರ್ಗ, ನಿಂಬರ್ಗಾ, ಮಧನ ಹಿಪ್ಪರಗಾ, ಇಳಕಲ್ಲ ಪೊಲೀಸ್ ಠಾಣೆಗಳ 16 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ಈತನ ಬಂಧನ ವಾರಂಟಗಳನ್ನು ಹೊರಡಿಸಿದೆ.

ಇದನ್ನೂ ಓದಿ :ನಿಮ್ಮನ್ನು ಗೆಲ್ಲಿಸಿದ್ದು ವೇಸ್ಟ್ : ಸಂಸದೆ ಸುಮಲತಾ ಫೇಸ್‌ಬುಕ್ ಪೋಸ್ಟ್ ಗೆ ನೆಟ್ಟಿಗರು ಕಿಡಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಡಿವೈಎಸ್ಪಿ ಎಂ.ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಸ್ಥಳೀಯ ಸಿಪಿಐ ಎರಡು ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ತನಿಖೆಯನ್ನು ನಡೆಸಿ ಪಿಎಸ್‌ಐ ರವಿಕುಮಾರ ಧರ್ಮಟ್ಟಿ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಕೂಡಿಕೊಂಡು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ವರ್ಗದವರಾದ ಪ್ರೊಬೆಶನರಿ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ, ವಿ.ಎಸ್.ಅಜ್ಜನಗೌಡರ, ಎ. ಎಂ. ಜಮಖಂಡಿ, ಎಸ್. ಆರ್. ಮುರಡಿ, ವಿಜಯ ತುಂಬದ, ಎಸ್.ಎಚ್.ನಾಟಿಕರ್, ಮಹೇಶ ಹನಗಂಡಿ, ಡಿ.ವೈ.ಗುರಿಕಾರ ಎಲ್.ಜಿ.ಕುಂಬಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.