ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ
Team Udayavani, Feb 1, 2023, 7:08 PM IST
ಮೂಡಲಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಬುಧವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಮಂಡಿಸಿರುವ ಬಜೆಟಗೆ ತಮ್ಮ ಪ್ರತಿಕ್ರೀಯೆ ನೀಡಿರುವ ಅವರು, ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಅದರಂತೆ ಆದಾಯ ಮಿತಿ ಹೆಚ್ಚಳ, ಕೃಷಿ ಉದ್ಯಮಿಗಳ ಸ್ಟಾರ್ಟಪ್ ಆಪ್‌ಗೆ ಉತ್ತೇಜನ, 157 ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ, 50 ಹೊಸ ವಿಮಾನ ನಿಲ್ದಾಣ, ಏಕಲವ್ಯ ಶಾಲಾ ವಸತಿ ಶಾಲೆಗಳಿಗೆ ಶಿಕ್ಷಕರ ನೇಮಕ, ಮಹಿಳಾ ಸಮ್ಮಾನ್ ಯೋಜನೆ, ಯುವಕರ ಕೌಶಲ್ಯಕ್ಕೆ ಯೋಜನೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಅಂಶಗಳು, ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ಆವಾಸ್ ಯೋಜನೆಗೆ ಉತ್ತೇಜನದಂತಹ ಹತ್ತು ಹಲವಾರು ಯೋಜನೆಗಳು ದೇಶವನ್ನು ವಿಶ್ವದಲ್ಲಿ ಮತ್ತಷ್ಟು ಉನ್ನತ್ತಕ್ಕೆ ಏರಿಸಲು ಅನುಕೂಲವಾಗಿದೆ. ಸಮೃದ್ಧ ಭಾರತ ನಿರ್ಮಾಣ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಮತ್ತಷ್ಟು ಶಕ್ತಿ ತುಂಬಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ