ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಮತ್ತೊಂದು ಅಪಘಾತ; 13 ಮಂದಿಗೆ ಗಾಯ

ಲಾರಿಗೆ ಕೆಎಸ್‌ಆರ್‌ಟಿಸಿ ಢಿಕ್ಕಿಯಾಗಿ ಸಂಭವಿಸಿದ ಅವಘಡ

Team Udayavani, May 28, 2019, 8:34 AM IST

ಬೆಂಗಳೂರು: ಯಲಹಂಕದ ಬಳಿ ಏರ್‌ಪೋರ್ಟ್‌ ರಸ್ತೆಯಲ್ಲಿ ಮಂಗಳವಾರ ಮತ್ತೊಂದು ಅಪಘಾತ ಸಂಭವಿಸಿದ್ದು, ಲಾರಿ ಢಿಕ್ಕಿಯಾದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 13 ಮಂದಿ ಗಾಯಗೊಂಡಿದ್ದಾರೆ. ಬಸ್‌ ಚಾಲಕನ ಕಾಲು ತುಂಡಾಗಿದೆ.

ಅನಂತಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿ ವೇಗವಾಗಿ ಹೋಗುತ್ತಿದ್ದ ಸರ್ಕಾರಿ ಆ್ಯಂಬುಲೆನ್ಸ್‌, ಪಕ್ಕದಲ್ಲಿದ್ದ ಲಾರಿಯನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೂವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಯಲಹಂಕದಕೋಗಿಲು ಕ್ರಾಸ್‌ ಮೇಲ್ಸೇತುವೆಯಲ್ಲಿ ನಡೆದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ