ಬಂಟ್ವಾಳ ತಾಲೂಕಿನಲ್ಲಿ 30ಕ್ಕೂ ಅಧಿಕ ಕೋವಿಡ್ ಸೋಂಕು ದೃಢ!
Team Udayavani, Jul 29, 2020, 4:28 PM IST
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚುತ್ತಿದ್ದು, ಬುಧವಾರ ಒಂದೇ ದಿನ ದಾಖಲೆಯ ಮೂವತ್ತಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜನತೆಯ ಆತಂಕಕ್ಕೆ ಕಾರಣವಾಗಿದೆ.
ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಮನೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ.