ಕೊಲೆ ಪ್ರಕರಣ : ವಾರಂಟ್ ಆರೋಪಿ ಬಂಧನ
Team Udayavani, Feb 9, 2023, 12:39 AM IST
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿ ಬಂಧನವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಅನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಬಳಿಕ ಕಳೆದೊಂದು ವರ್ಷದಿಂದ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಕೇರಳ ರಾಜ್ಯದ ಉಪ್ಪಳ ಕಾಸರಗೋಡು ಜಿಲ್ಲೆಯ ಮೊಳಿಂಜೆ ಗ್ರಾಮದ ಮಾಹಿ ನಗರದ ಸಿರಾಜ್ (28)ನನ್ನು ಫೆ. 7ರಂದು ಆತನ ಮನೆಯ ಸಮೀಪದಿಂದ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸತ್ಯನಾರಾಯಣ ಕೆ. ಹಾಗೂ ಸಬ್ಇನ್ಸ್ಪೆಕ್ಟರ್ ಅರ್ಜುನ್ ಅವರ ಮಾರ್ಗದರ್ಶನದಲ್ಲಿ ಸಿಬಂದಿ ವ್ರಷಭ, ಬೆನ್ನಿಚ್ಚನ್, ಬಸವರಾಜ್ ಅವರು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು