4 ವರ್ಷದ ಮಗುವನ್ನು ಕೊಂದು ಬ್ಯಾಗ್‌ ನಲ್ಲಿ ಕೊಂಡೊಯ್ಯುತ್ತಿದ್ದ ಸಿಇಒ ಸುಚನಾ ಬಂಧನ

ಹಂತಕಿ ಸಿಕ್ಕಿಬಿದ್ದಿದ್ದೇಗೆ?

Team Udayavani, Jan 9, 2024, 12:08 PM IST

4 ವರ್ಷದ ಮಗುವನ್ನು ಕೊಂದು ಬ್ಯಾಗ್‌ ನಲ್ಲಿ ಕೊಂಡೊಯ್ಯುತ್ತಿದ್ದ ಸಿಇಒ ಸುಚನಾ ಬಂಧನ

ಗೋವಾ: ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್‌ ನಲ್ಲಿಟ್ಟು ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಕೃತಕ ಬುದ್ಧಿಮತ್ತೆ ಸ್ಟಾರ್ಟ್‌ ಅಪ್‌ ಕಂಪನಿಯ ಸಿಇಒ ಸುಚನಾ ಸೇಠ್‌ (39ವರ್ಷ) ಎಂಬಾಕೆಯನ್ನು ಚಿತ್ರದುರ್ಗದಲ್ಲಿ ಬಂಧಿಸಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ:Bangalore: ನಶೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ  ಕಾರು ಚಾಲಕ; ಪ್ರಯಾಣಿಕ ಸಾವು

ಬೆಂಗಳೂರಿನ ಮೈಂಡ್‌ ಫುಲ್‌ AI ಲ್ಯಾಬ್‌ ಸ್ಟಾರ್ಟ್‌ ಅಪ್‌ ನ ಸಿಇಒ ಸುಚನಾ ಸೇಠ್‌ ಎಂಬಾಕೆಯನ್ನು ಸೋಮವಾರ ಚಿತ್ರದುರ್ಗದ ಬಳಿ ಆಕೆಯ ಮಗನ ಶವವಿದ್ದ ಬ್ಯಾಗ್‌ ಜತೆಗೆ ಬಂಧಿಸಲಾಗಿದೆ. ಉತ್ತರ ಗೋವಾದ ಕ್ಯಾಂಡೋಲಿಮ್‌ ಅಪಾರ್ಟ್‌ ಮೆಂಟ್‌ ನಲ್ಲಿ ತನ್ನ ಮಗನನ್ನು ಹತ್ಯೆಗೈದಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹಂತಕಿ ಸಿಕ್ಕಿಬಿದ್ದಿದ್ದೇಗೆ?

ಉತ್ತರ ಗೋವಾದ ಕ್ಯಾಂಡೋಲಿಮ್‌ ನಲ್ಲಿರುವ ಸೋಲ್‌ ಬನ್ಯಾನ್‌ ಗ್ರಾಂಡೆ ಅಪಾರ್ಟ್‌ ಮೆಂಟ್‌ ಗೆ ಸುಚನಾ ಸೇಠ್‌ ತನ್ನ ಮಗನೊಂದಿಗೆ ಶನಿವಾರ ಚೆಕ್‌ ಇನ್‌ ಆಗಿದ್ದಳು. ಸೋಮವಾರ ಸೇಠ್ ರೂಂ ಚೆಕ್‌ ಔಟ್‌ ಮಾಡಿದ್ದು, ಸಿಬಂದಿ ಬಳಿ ಬೆಂಗಳೂರಿಗೆ ತೆರಳಲು ಕಾರು ಬುಕ್‌ ಮಾಡಲು ಹೇಳಿದ್ದಳು. ಕಾರು ಬೇಡ, ವಿಮಾನದಲ್ಲಿ ತೆರಳಿ ಎಂಬ ಸಿಬಂದಿಗಳ ಸಲಹೆಯನ್ನು ಆಕೆ ತಿರಸ್ಕರಿಸಿದ್ದಳಂತೆ!

ಈ ಸಂದರ್ಭದಲ್ಲಿ ಸುಚನಾ ಸೇಠ್‌ ಜತೆ ಮಗು ಇಲ್ಲದಿರುವುದನ್ನು ಅಪಾರ್ಟ್‌ ಮೆಂಟ್‌ ಸಿಬಂದಿಗಳು ಗಮನಿಸಿದ್ದರು. ಆಕೆ ಕಾರಿನಲ್ಲಿ ಹೊರಟು ಹೋದ ನಂತರ ಹೌಸ್‌ ಕೀಪರ್‌ ರೂಂ ಅನ್ನು ಪರಿಶೀಲಿಸಿದಾಗ ರಕ್ತದ ಕಲೆಗಳು ಬಿದ್ದಿರುವುದು ಗಮನಕ್ಕೆ ಬಂದಿತ್ತು.

ಕೂಡಲೇ ಈ ಬಗ್ಗೆ ಗೋವಾ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕಾರು ಚಾಲಕನಿಗೆ ಕರೆ ಮಾಡಿ, ಸೇಠ್‌ ಬಳಿ ಮಗು ಎಲ್ಲಿ ಎಂದು ಪ್ರಶ್ನಿಸಿದ್ದರು. ಆಗ ಆಕೆ ಆತನನ್ನು ಗೆಳೆಯನ ಜತೆ ಬಿಟ್ಟಿರುವುದಾಗಿ ಹೇಳಿ, ವಿಳಾಸ ಕೊಟ್ಟಿದ್ದಳು. ಪೊಲೀಸರು ವಿಳಾಸ ಹುಡುಕಿದಾಗ ಅದು ನಕಲಿ ಎಂದು ತಿಳಿಯಿತು.!

ಗೋವಾ ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿದ್ದರು. ಆದರೆ ಈ ಬಾರಿ ಅವರು ಸುಚನಾಳಿಗೆ ಅರ್ಥವಾಗಬಾರದು ಎಂದು ಚಾಲಕನ ಬಳಿ ಕೊಂಕಣಿ ಭಾಷೆಯಲ್ಲಿ ಸಂಭಾಷಣೆ ನಡೆಸಿ, ಕಾರನ್ನು ಸಮೀಪದ ಚಿತ್ರದುರ್ಗ ಠಾಣೆಗೆ ಕೊಂಡೊಯ್ಯುವಂತೆ ಸೂಚನೆ ನೀಡಿದ್ದರು!

ನಂತರ ಚಾಲಕ ಕಾರನ್ನು ನೇರವಾಗಿ ಚಿತ್ರದುರ್ಗ ಪೊಲೀಸ್‌ ಠಾಣೆಗೆ ಕೊಂಡೊಯ್ದಿದ್ದ. ಬಳಿಕ ಪೊಲೀಸರು ಸುಚನಾ ಸೇಠ್‌ ಳನ್ನು ಬಂಧಿಸಿದ್ದರು. ಕಾರಿನೊಳಗೆ ಇದ್ದ ಬ್ಯಾಗ್‌ ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು.

AI ಡೆವಲಪರ್‌, ಸೇಠ್‌ ಪತಿ ವೆಂಕಟ ರಾಮನ್‌ ಚಿತ್ರದುರ್ಗಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಚನಾ ಸೇಠಳನ್ನು ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ ಕರೆ ತರಲಾಗಿದೆ.

ಕಾರಣ ಬಯಲು:

ತನ್ನ ಮಾಜಿ ಪತಿ ಮಗುವಿನ ಜತೆ ಮಾತನಾಡಬಾರದು ಎಂಬ ಕಾರಣಕ್ಕಾಗಿ ಸುಚನಾ ಸೇಠ್‌ ಹತ್ಯೆಗೈದಿರುವುದಾಗಿ ತಿಳಿದು ಬಂದಿದೆ. 2010ರಲ್ಲಿ ವಿವಾಹವಾಗಿದ್ದ ದಂಪತಿಗೆ 2019ರಲ್ಲಿ ಗಂಡು ಮಗು ಜನಿಸಿತ್ತು. ಇಬ್ಬರ ನಡುವಿನ ವಿರಸದಿಂದಾಗಿ 2020ರಲ್ಲಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ಆದರೆ ಪ್ರತಿ ಭಾನುವಾರ ಮಗುವನ್ನು ಭೇಟಿಯಾಗಲು ತಂದೆಗೆ ಕೋರ್ಟ್‌ ಅನುಮತಿ ನೀಡಿತ್ತು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.