ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಚಾರ್ಮಾಡಿ ಘಾಟ್
Team Udayavani, Feb 1, 2023, 3:59 PM IST
ಮೂಡಿಗೆರೆ: ಬೆಂಗಳೂರಿನಲ್ಲಿ ಯುವಕನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯ ಮತ್ತಿಕೆರೆ ನಿವಾಸಿ ಗೋವಿಂದರಾಜು (19)ಕೊಲೆಯಾದ ವ್ಯಕ್ತಿ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏನಿದು ಪ್ರಕರಣ :
ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸುತ್ತಿದ್ದ, ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಮತ್ತಿತರ ಇಬ್ಬರು ಸೇರಿಕೊಂಡು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿದ್ದಾರೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು.
ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಈ ವೇಳೆ ಭರತ್ ಮತ್ತಿತರ ಇಬ್ಬರು ಸೇರಿಕೊಂಡು ಅಪಹರಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ
ನೇಕಾರ ಸಮ್ಮಾನ್ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ