ಕೋವಿಡ್ ಪ್ರಕರಣದಲ್ಲಿ ಇಳಿಕೆ : ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಪುನರಾರಂಭಕ್ಕೆ ಸೂಚನೆ
Team Udayavani, Nov 18, 2020, 2:09 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಪರಿಣಾಮ ಸಚಿವಾಲಯ ಹಾಗೂ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಕೋವಿಡ್ ಪ್ರಕರಣಗಳು ಹೆಚ್ಚಿದ್ದ ಪರಿಣಾಮ ಸೋಂಕು ಹರಡುವ ದೃಷ್ಟಿಯಿಂದ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿಯನ್ನು ನೀಡಲಾಗಿತ್ತು, ಆದರೆ ಈಗ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪುನರಾರಂಭಿಸಲು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಎಲ್ಲಾ ಕಚೇರಿಗಳಲ್ಲಿಯೂ ಕೂಡಲೇ ಬಯೋಮೆಟ್ರಿಕ್ ವ್ಯವಸ್ಥೆ ಆರಂಭಿಸಲು ಸೂಚಿಸಿದ್ದು ಜೊತೆಗೆ ಆರೋಗ್ಯದ ಹಿತದೃಷ್ಟಿಯಿಂದ ಬಯೋಮೆಟ್ರಿಕ್ ಯಂತ್ರದ ಬಳಿ ಸ್ಯಾನಿಟೈಸರ್ ಇಡಲು ಸೂಚಿಸಿದೆ.
ಇದನ್ನೂ ಓದಿ:ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು?