ಬಿಜೆಪಿ ಸಿ.ಡಿ. ಸಂಕಲ್ಪ ಯಾತ್ರೆ ಮಾಡಲಿ: ಕುಮಾರಸ್ವಾಮಿ

Team Udayavani, Feb 5, 2023, 6:40 AM IST

ಬಿಜೆಪಿ ಸಿ.ಡಿ. ಸಂಕಲ್ಪ ಯಾತ್ರೆ ಮಾಡಲಿ: ಕುಮಾರಸ್ವಾಮಿ

ಬೆಂಗಳೂರು: ಪಂಚರತ್ನ ರಥಯಾತ್ರೆ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು “ವಿಜಯ ಸಂಕಲ್ಪ’ ಯಾತ್ರೆ ಮಾಡುವ ಬದಲು “ಸಿ.ಡಿ. ಸಂಕಲ್ಪ ಯಾತ್ರೆ’ ಮಾಡಿದರೆ ಲೇಸು ಎಂದು ಕುಟುಕಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೇಂದ್ರ ಸಚಿವರು ತಾವು ಕೂತಿರುವ ಹುದ್ದೆಯ ಘನತೆಯನ್ನು ಮರೆತು ಮಾತನಾಡಿದ್ದಾರೆ. ಅವರಿಗೆ ಅವರದೇ ಭಾಷೆಯಲ್ಲಿ ಪ್ರತಿಕ್ರಿಯಿಸ ಬೇಕಾಗುತ್ತಿದೆ ಎಂದರು.

ಬಿಜೆಪಿಯವರು ಸಿ.ಡಿ. ಸಂಕಲ್ಪ ಅಂತ ಹೆಸರಿಟ್ಟು ಹೋದರೆ ನಾನು ನವಗ್ರಹ ಅಂತ ಹೆಸರು ಬದಲಾಯಿಸುತ್ತೇವೆ. ಕೇಂದ್ರದ ಮಂತ್ರಿಯಾಗಿ ಅವರು ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಿದ್ದಾರೆ. ಅದೇ ಧೂಳು ಮಿಶ್ರಿತ ರಸ್ತೆಗಳು, ಸ್ವತ್ಛತೆ ಇಲ್ಲದ ಗ್ರಾಮಗಳನ್ನು ಅವರು ನೋಡಿಲ್ಲವೇ? ಅವರ ಸರಕಾರದ ಸ್ವತ್ಛ ಭಾರತದ ಹಣೆಬರಹ ಏನಾಗಿದೆ ಎನ್ನುವುದನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಿಗೆ ಬಂದು ನೋಡಲಿ ಎಂದರು.

ದೇವೇಗೌಡರ ಕುಟುಂಬ ಏನು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಹಾಗೆಯೇ ನಿಮ್ಮ ಕುಟುಂಬದ ಹಣೆಬರಹ ಏನು ಎನ್ನುವುದು ಜನತೆಗೆ ಗೊತ್ತಿದೆ. ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದಿರುವ ನಿಮ್ಮ ಸಹೋದರನ ಕಥೆ ಯಾರಿಗೆ ಗೊತ್ತಿಲ್ಲ? ಅಂಥ ವಂಚನೆಯ ಕೆಲಸವನ್ನು ನಮ್ಮ ಕುಟುಂಬ ಮಾಡಿಲ್ಲ ಎಂದು ಜೋಷಿ ವಿರುದ್ಧ ಗುಡುಗಿದರು.

ಜೆಡಿಎಸ್‌ ಸೇರಿದ ನ್ಯಾಯಾಧೀಶರು
ಚಿತ್ತಾಪುರದಲ್ಲಿ ಸಿವಿಲ್‌ ನ್ಯಾಯಾಧೀಶರಾಗಿ ಆಗಿ ಸ್ವಯಂ ನಿವೃತ್ತಿ ಹೊಂದಿದ ಸುಭಾಷ್‌ ಚಂದ್ರ ರಾಥೋಡ್‌ ಅವರು ಇಂದು ಪಕ್ಷದ ಕಚೇರಿಯಲ್ಲಿ ಜೆಡಿಎಸ್‌ ಪಕ್ಷ ಸೇರಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ರಾಥೋಡ್‌ ಅವರಿಗೆ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರ ಮಾಡಿಕೊಂಡರು. ರಾಥೋಡ್‌ ಅವರಿಗೆ ಇನ್ನೂ ಸೇವಾವಧಿ ಇತ್ತು. ಆದರೂ ಜನಸೇವೆ ಮಾಡಲು ಮುಂದೆ ಬಂದಿದ್ದಾರೆ. ಅವರಿಗೆ ಚಿತ್ತಾಪುರ ಟಿಕೆಟ್‌ ನೀಡಲಾಗುವುದು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಅರಕಲಗೂಡು ಎ. ಮಂಜುಗೆ ಹಾಲಿ ಶಾಸಕರಾದ ಎ.ಟಿ.ರಾಮಸ್ವಾಮಿ, ಶಿವಲಿಂಗೇ ಗೌಡರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಸಭೆ ಕರೆದಾಗ ಅವರು ಬಂದಿಲ್ಲ. ಎರಡು ವರ್ಷಗಳಿಂದ ಅವರು ಪಕ್ಷದಿಂದ ದೂರ ಇದ್ದಾರೆ. ಅರಕಲಗೂಡು ಕ್ಷೇತ್ರದ ವಿಚಾರದಲ್ಲಿ ಈಗಾಗಲೇ ಎ.ಮಂಜು ಜತೆ ಮಾತಾಡಿದ್ದೇನೆ. ರೇವಣ್ಣ ಅವರು ಕೂಡ ಮಂಜು ಜತೆ ಮಾತಾಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ